ಕರ್ನಾಟಕ, ಕೇರಳ ನಂತರ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಬಿಜೆಪಿ ಸರ್ಕಾರ ಘೋಷಣೆ

ರಾಜ್ಯ ಸಾರಿಗೆ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಪ್ರಕಟಿಸಿದೆ.
West Bengal govt notifies free bus travel for women from June 1
ಸಾಂದರ್ಭಿಕ ಚಿತ್ರ
Updated on

ಕೋಲ್ಕತ್ತಾ: ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ಮತ್ತು ಸಾರ್ವಜನಿಕ ಸಾರಿಗೆ ಬಳಕೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪಶ್ಚಿಮ ಬಂಗಾಳದಲ್ಲಿ ಜೂನ್ 1 ರಿಂದಲೇ ಜಾರಿಗೆ ಬರಲಿದೆ ಎಂದು ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರ ಶುಕ್ರವಾರ ಪ್ರಟಿಸಿದೆ.

ಮೇ 21 ರಂದು ರಾಜ್ಯ ಸಾರಿಗೆ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಪ್ರಕಟಿಸಿದೆ.

ಸಾರಿಗೆ ಇಲಾಖೆಯ ಅಧಿಸೂಚನೆಯು, ಸಂಬಂಧಪಟ್ಟ ಬಿಡಿಒ ಅಥವಾ ಎಸ್‌ಡಿಒ ಕಚೇರಿಗಳ ಮೂಲಕ ಅರ್ಜಿ ಸಲ್ಲಿಸಿದ ನಂತರ ಎಲ್ಲಾ ಅರ್ಹ ಮಹಿಳೆಯರಿಗೆ ಕ್ಯೂಆರ್ ಕೋಡ್, ಛಾಯಾಚಿತ್ರ ಮತ್ತು ಫಲಾನುಭವಿ ವಿವರಗಳೊಂದಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದು ತಿಳಿಸಿದೆ.

West Bengal govt notifies free bus travel for women from June 1
ಬಂಗಾಳ ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ತಿಂಗಳಿಗೆ 3,000 ರೂ, ಉಚಿತ ಬಸ್ ಪ್ರಯಾಣ, 7ನೇ ವೇತನ ಆಯೋಗ ರಚನೆಗೆ ಸಂಪುಟ ಅಸ್ತು

ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ(ಇಪಿಐಸಿ), ವಿಬಿ-ಜಿ RAMG ಜಾಬ್ ಕಾರ್ಡ್, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಛಾಯಾಚಿತ್ರದೊಂದಿಗೆ ಪಿಂಚಣಿ ದಾಖಲೆ, ಕೇಂದ್ರ/ರಾಜ್ಯ ಸರ್ಕಾರ/ಪಿಎಸ್‌ಯು ಗುರುತಿನ ಚೀಟಿ, ಶಾಲೆಗಳು/ಕಾಲೇಜುಗಳು/ವಿಶ್ವವಿದ್ಯಾಲಯಗಳು ನೀಡುವ ಗುರುತಿನ ಚೀಟಿಗಳಂತಹ ಪೂರಕ ದಾಖಲೆಗಳ ಆಧಾರದ ಮೇಲೆ ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದು ಹೇಳಿದೆ.

ಸ್ಮಾರ್ಟ್ ಕಾರ್ಡ್‌ಗಳನ್ನು ನೀಡುವವರೆಗೆ, ಮಹಿಳಾ ಪ್ರಯಾಣಿಕರು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್ ಮತ್ತು ಸರ್ಕಾರ ನೀಡಿದ ಸೇವಾ ಗುರುತಿನ ಚೀಟಿಗಳಂತಹ ಮಾನ್ಯ ಫೋಟೋ ಗುರುತಿನ ದಾಖಲೆಗಳನ್ನು ಹಾಜರುಪಡಿಸುವ ಮೂಲಕ ಉಚಿತ ಸೌಲಭ್ಯವನ್ನು ಪಡೆಯಲು ಅನುಮತಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಗುರುತಿನ ದಾಖಲೆಗಳ ಪರಿಶೀಲನೆಯ ನಂತರ ಕಂಡಕ್ಟರ್‌ಗಳು ಮಹಿಳಾ ಪ್ರಯಾಣಿಕರಿಗೆ 'ಶೂನ್ಯ ಮೌಲ್ಯದ ಟಿಕೆಟ್‌ಗಳನ್ನು' ನೀಡುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ಯೋಜನೆ ಜೂನ್ 1, 2026 ರಿಂದ ಜಾರಿಗೆ ಬರಲಿದೆ ಎಂದು ಅಧಿಸೂಚನೆಯಲ್ಲಿ ಸೇರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com