ದೇವಸ್ಥಾನದಲ್ಲೇ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅರ್ಚಕನ ಬಂಧನ!

ಸಂತ್ರಸ್ತೆ ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯಕ್ಕೆ ಸೇರಿದವಳಾಗಿರುವುದರಿಂದ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಭೀಮ್ ಆರ್ಮಿ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.
Temple priest arrested for attempting to rape girl in UP
ಸಾಂದರ್ಭಿಕ ಚಿತ್ರ
Updated on

ಸಹರಾನ್‌ಪುರ: ಉತ್ತರ ಪ್ರದೇಶದ ಸಹರಾನ್‌ಪುರದ ಹಳ್ಳಿಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ದೇವಾಲಯದ ಅರ್ಚಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ದೇಹತ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಮಹಿಳೆಯೊಬ್ಬರು ತಮ್ಮ ಮಗಳು ದೇವಾಲಯದೊಳಗೆ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ, ಅಲ್ಲಿನ ಅರ್ಚಕರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಹೃದಯ ನಾರಾಯಣ್ ಸಿಂಗ್ ಅವರು ಹೇಳಿದ್ದಾರೆ.

ಬಾಲಕಿಯ ಕೂಗು ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಿದರು. 48 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Temple priest arrested for attempting to rape girl in UP
ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ; ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಸಂತ್ರಸ್ತೆ ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯಕ್ಕೆ ಸೇರಿದವಳಾಗಿರುವುದರಿಂದ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಭೀಮ್ ಆರ್ಮಿ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು ಎಂದು ಎಸ್‌ಎಚ್‌ಒ ಹೇಳಿದ್ದಾರೆ.

ಕೆಲವು ಹಿಂದೂ ಸಂಘಟನೆಗಳ ಸದಸ್ಯರು ಸಹ ಸ್ಥಳಕ್ಕೆ ಆಗಮಿಸಿದರು. ಇದು ಸ್ಥಳದಲ್ಲಿ ಸ್ವಲ್ಪ ಸಮಯ ಉದ್ವಿಗ್ನತೆಗೆ ಕಾರಣವಾಯಿತು ಎಂದು ಅವರು ತಿಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಗ್ರಾಮದಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com