ಕುರ್ಚಿ ಕದನಕ್ಕೆ ಕೊನೆಗೂ climax? ಸಿಎಂ ಡಿಸಿಎಂ ಗೆ ಹೈಕಮಾಂಡ್ ಬುಲಾವ್; ರಾಜ್ಯ ರಾಜಕೀಯದಲ್ಲಿ ಸಂಚಲನ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ ಕಾಂಗ್ರೆಸ್ ಹೈಕಮಾಂಡ್​ನಿಂದ ದೆಹಲಿಗೆ ಬರುವಂತೆ ಬುಲಾವ್ ಬಂದಿದೆ.
DCM DK Shivakumar, CM Siddaramaiah
ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರonline desk
Updated on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ಸಿಎಂ ಅಧಿಕಾರ ಹಸ್ತಾಂತರದ ಕುರಿತು ಶೀತಲ ಸಮರ ನಡೆಯುತ್ತಿದ್ದು, ಪಂಚರಾಜ್ಯಗಳ ಚುನಾವಣೆ ಬಳಿಕ ಹೈಕಮಾಂಡ್ ಈ ಕುತೂಹಲಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಮುಂದಾದಂತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ ಕಾಂಗ್ರೆಸ್ ಹೈಕಮಾಂಡ್​ನಿಂದ ದೆಹಲಿಗೆ ಬರುವಂತೆ ಬುಲಾವ್ ಬಂದಿದೆ. ಮೇ 26ರಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಸಿಎಂ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ. ಆದರೆ, ಅಧಿಕಾರ ಹಂಚಿಕೆ ವಿಚಾರ, ಸಂಪುಟ ಪುನಾರಚನೆಯ ವಿಷಯಗಳೂ ಚರ್ಚೆಯಾಗಲಿದೆ ಎಂದು ಹೇಳಲಾಗುತ್ತಿದೆ.

DCM DK Shivakumar, CM Siddaramaiah
Watch | ಬಿಡದಿ ಟೌನ್ ಶಿಪ್: ದೇವೇಗೌಡ್ರು ಮೋದಿಗೇ ಪತ್ರ ಬರೀಲಿ- ಡಿ.ಕೆ ಶಿವಕುಮಾರ್ ಸವಾಲ್!

ಕೇರಳ ಸೇರಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ, ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರದಲ್ಲಿ ಗಮನ ಹರಿಸುವುದಾಗಿ ಹೈಕಮಾಂಡ್ ಹೇಳಿತ್ತು. ಈಗ ಸಿಎಂ, ಡಿಸಿಎಂಗೆ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿರುವುದು ರಾಜ್ಯ ಕಾಂಗ್ರೆಸ್​​​ನಲ್ಲಿ ಸಂಚಲನ ಮೂಡಿಸಿದೆ.

ಮೇ 26 ರ ಮಂಗಳವಾರ ಉಭಯ ನಾಯಕರು ದೆಹಲಿಗೆ ತೆರಳಲಿದ್ದಾರೆ. ಅಂದು ರಾಹುಲ್‌ ಗಾಂಧಿ ಅವರನ್ನ ಭೇಟಿಯಾಗಲಿದ್ದು, ಕುರ್ಚಿ ಕದನಕ್ಕೆ ಬ್ರೇಕ್‌ ಬೀಳಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com