'ವಿಶ್ವಗುರು' ಒಂದೇ ಒಂದು ಪರೀಕ್ಷೆಯನ್ನು ಸರಿಯಾಗಿ ನಡೆಸಲು ಆಗ್ತಿಲ್ಲ: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಕಿಡಿ!

ಹಿಂದಿಯಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, "NEET, CBSE, SSC, ಮತ್ತು ಇಂದು CUET. ನಾಲ್ಕು ಪರೀಕ್ಷೆಗಳು, ಒಂದು ಕೋಟಿ ವಿದ್ಯಾರ್ಥಿಗಳು, ಒಂದೇ ಒಂದು ಪರೀಕ್ಷೆಯನ್ನು ಪ್ರಾಮಾಣಿಕವಾಗಿ ನಡೆಸಲು ಸಾಧ್ಯವಾಗಲಿಲ್ಲ ಎಂದು ಟೀಕಿಸಿದ್ದಾರೆ.
Rahul Gandhi
ರಾಹುಲ್ ಗಾಂಧಿ
Updated on: 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಶಿಕ್ಷಣ ವ್ಯವಸ್ಥೆಯನ್ನು "ಸಂಪೂರ್ಣವಾಗಿ ನಾಶಪಡಿಸಿದ್ದಾರೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.

ವಿಶ್ವಗುರು" ಎಂದು ಹೇಳಿಕೊಳ್ಳುತ್ತಾರೆ ಆದರೆ ಸರ್ಕಾರ ಒಂದೇ ಒಂದು ಪರೀಕ್ಷೆಯನ್ನು ಸರಿಯಾಗಿ ನಡೆಸಲು ಆಗಲಿಲ್ಲ ಎಂದು ಹೇಳಿದ್ದಾರೆ. ದೇಶಾದ್ಯಂತ ಇಂದು ತಾಂತ್ರಿಕ ದೋಷದಿಂದಾಗಿ ಕೆಲವು ಕೇಂದ್ರಗಳಲ್ಲಿ CUET-UG 2026 ವಿಳಂಬವಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹೇಳಿದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, "NEET, CBSE, SSC, ಮತ್ತು ಇಂದು CUET. ನಾಲ್ಕು ಪರೀಕ್ಷೆಗಳು, ಒಂದು ಕೋಟಿ ವಿದ್ಯಾರ್ಥಿಗಳು, ಒಂದೇ ಒಂದು ಪರೀಕ್ಷೆಯನ್ನು ಪ್ರಾಮಾಣಿಕವಾಗಿ ನಡೆಸಲು ಸಾಧ್ಯವಾಗಲಿಲ್ಲ ಎಂದು ಟೀಕಿಸಿದ್ದಾರೆ.

"ವಿಶ್ವಗುರು" ಎಂದು ಹೇಳಿಕೊಳ್ಳುತ್ತಾರೆ. ಆದರೆ ದೇಶದಲ್ಲಿ ಒಂದೇ ಒಂದು ಪರೀಕ್ಷೆಯನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಮೋದಿ ಅವರು ಇಡೀ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾರೆ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನೀವು ಯಾವ ಪೀಳಿಗೆಯ ಭವಿಷ್ಯವನ್ನು ಹಾಳುಮಾಡುತ್ತೀರೋ ಅದೇ ಪೀಳಿಗೆಯು ನಿಮ್ಮನ್ನು ಹೊಣೆಗಾರರನ್ನಾಗಿ ಮಾಡುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗಾಂಧಿ, ಮೋದಿ ತಮ್ಮ ಸರ್ಕಾರದ ಉಳಿವಿನ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದರು.

Rahul Gandhi
ತಾಂತ್ರಿಕ ದೋಷ: CUET-UG ಪರೀಕ್ಷೆಗಳಲ್ಲಿ ವಿಳಂಬ; ವಿದ್ಯಾರ್ಥಿಗಳು, ಪೋಷಕರ ಅಸಮಾಧಾನ!

ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳೊಂದಿಗೆ ತಮ್ಮ ಹಿಂದಿನ ಸಂವಾದದ ವೀಡಿಯೊವನ್ನು ಸಹ ಕಾಂಗ್ರೆಸ್ ನಾಯಕರು ಹಂಚಿಕೊಂಡಿದ್ದರು ಮತ್ತು ಅದರಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ನಂತರ ಪರೀಕ್ಷಾ ವ್ಯವಸ್ಥೆಯ ಬಗ್ಗೆ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com