ಬರಿಗೈಯಲ್ಲೇ ಶೌಚಾಲಯ ಕ್ಲೀನ್ ಮಾಡಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ, Video ವೈರಲ್

ವಿಡಿಯೋ ಯಾವ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಅದರ ಹಿಂದಿನ ನಿಖರ ಉದ್ದೇಶವೇನು ಎಂಬುದು ಇನ್ನೂ ಸ್ವತಂತ್ರವಾಗಿ ದೃಢಪಟ್ಟಿಲ್ಲ.
BJP MP Janardan Mishra
ಬರಿಗೈಯಲ್ಲೇ ಶೌಚಾಲಯ ಶುಚಿಗೊಳಿಸಿದ ಸಂಸದ ಜನಾರ್ಧನ್ ಮಿಶ್ರಾ
Updated on: 

ರೇವಾ: ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಜನಾರ್ದನ ಮಿಶ್ರಾ ಅವರು ಯಾವುದೇ ಸ್ವಚ್ಛತಾ ಕಾರ್ಮಿಕರ ಸಹಾಯ ಪಡೆಯದೆ, ಬರಿಗೈಯಲ್ಲೇ ಶೌಚಾಲಯದ ಸೀಟ್ ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಲವರ ಗಮನ ಸೆಳೆದಿದೆ.

ವಿಡಿಯೋ ಯಾವ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಅದರ ಹಿಂದಿನ ನಿಖರ ಉದ್ದೇಶವೇನು ಎಂಬುದು ಇನ್ನೂ ಸ್ವತಂತ್ರವಾಗಿ ದೃಢಪಟ್ಟಿಲ್ಲ.

BJP MP Janardan Mishra
INDIA bloc's rally:'ಸರಿಯಾಗಿ ನಕಲಿ ಮಾಡಲೂ ಆಗಿಲ್ಲ; ರಾಮಲೀಲಾ ಮೈದಾನದ ಜನಸಾಗರ ತೋರಿಸಲು ಕಾಂಗ್ರೆಸ್ AI ಫೋಟೋ ಬಳಕೆ- ಕಿರಣ್ ರಿಜಿಜು ಲೇವಡಿ

ರೀಲ್ ಗಾಗಿ ಹುಚ್ಚಾಟ

ಇನ್ನು ಸಂಸದರ ಈ ಹುಚ್ಚಾಟವನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದು, ಸಂಸದರು ಈ ಕೆಲಸವನ್ನು ಸಾಮಾಜಿಕ ಮಾಧ್ಯಮದಲ್ಲಿ ರೀಲ್ ಮಾಡುವ ಉದ್ದೇಶದಿಂದ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಆದರೆ, ವಿಡಿಯೋ ಯಾವ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಅದರ ಹಿಂದಿನ ನಿಖರ ಉದ್ದೇಶವೇನು ಎಂಬುದು ದೃಢಪಟ್ಟಿಲ್ಲ.

ಇದೇ ಮೊದಲೇನಲ್ಲ

ಇನ್ನು ಸಂಸದ ಜನಾರ್ದನ ಮಿಶ್ರಾ ಅವರಿಗೆ ಇಂತಹ ಸ್ವಚ್ಛತಾ ಚಟುವಟಿಕೆಗಳು ಹೊಸದೇನಲ್ಲ. ಈ ಹಿಂದೆಯೂ ಅವರು ಸ್ವಚ್ಛತಾ ಅಭಿಯಾನದ ವೇಳೆ ಸ್ವತಃ ಶೌಚಾಲಯಗಳನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಗಳಲ್ಲಿ ಭಾಗವಹಿಸುತ್ತಿರುವುದಾಗಿ ಅವರ ನಡೆ ಗಮನ ಸೆಳೆದಿತ್ತು.

ಭಾರತದಲ್ಲಿ 2014ರಲ್ಲಿ ಆರಂಭವಾದ ಸ್ವಚ್ಛ ಭಾರತ ಅಭಿಯಾನವು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು, ಬಯಲು ಶೌಚಮುಕ್ತ ಪರಿಸರ ನಿರ್ಮಿಸುವುದು ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ಒತ್ತು ನೀಡಿದೆ.

ಇದೀಗ ಜನಾರ್ದನ ಮಿಶ್ರಾ ಅವರ ಹೊಸ ವಿಡಿಯೋ ಮತ್ತೊಮ್ಮೆ ಸ್ವಚ್ಛತೆ ಮತ್ತು ರಾಜಕಾರಣಿಗಳ ಸಾರ್ವಜನಿಕ ಪ್ರದರ್ಶನದ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

ಕೆಲವರು ಅವರ ಕಾರ್ಯವನ್ನು ಸ್ವಚ್ಛತೆಯ ಸಂದೇಶವೆಂದು ನೋಡುತ್ತಿದ್ದರೆ, ಇನ್ನು ಕೆಲವರು ಇದು ಪ್ರಚಾರದ ಉದ್ದೇಶದಿಂದ ನಡೆದಿದೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ, ವಿಡಿಯೋ ಹಿಂದಿನ ಉದ್ದೇಶದ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X