ಯುಪಿ ಚುನಾವಣೆಗೂ ಮುನ್ನ, ಯೋಗಿ ಸರ್ಕಾರ ಬಂಪರ್ ಗಿಫ್ಟ್; ದೀಪಾವಳಿ, ಹೋಳಿಗೆ ಉಚಿತ ಎಲ್‌ಪಿಜಿ ಸಿಲಿಂಡರ್ ಘೋಷಣೆ!

ರಾಜ್ಯದ 1.89 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್ ರೀಫಿಲ್ ಸಬ್ಸಿಡಿ(ಸಹಾಯಧನ) ವಿತರಿಸುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಯೋಗಿ ಆದಿತ್ಯನಾಥ್ ಅವರು, ಈ ಗಿಫ್ಟ್ ಘೋಷಣೆ ಮಾಡಿದರು.
Yogi Adityanath
ಯೋಗಿ ಆದಿತ್ಯನಾಥ್
Updated on: 

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದು, 'ಪ್ರಧಾನ ಮಂತ್ರಿ ಉಜ್ವಲ ಯೋಜನೆ'ಯಡಿ ಅರ್ಹ ಕುಟುಂಬಗಳಿಗೆ ದೀಪಾವಳಿ ಮತ್ತು ಹೋಳಿ ಹಬ್ಬಗಳ ಸಂದರ್ಭದಲ್ಲಿ ತಲಾ ಒಂದು ಎಲ್‌ಪಿಜಿ (LPG) ಸಿಲಿಂಡರ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ.

ರಾಜ್ಯದ 1.89 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಎಲ್‌ಪಿಜಿ ಸಿಲಿಂಡರ್ ರೀಫಿಲ್ ಸಬ್ಸಿಡಿ(ಸಹಾಯಧನ) ವಿತರಿಸುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಯೋಗಿ ಆದಿತ್ಯನಾಥ್ ಅವರು, ಈ ಗಿಫ್ಟ್ ಘೋಷಣೆ ಮಾಡಿದರು.

ಈ ಯೋಜನೆಯಡಿ ಅರ್ಹ ಕುಟುಂಬಗಳಿಗೆ ಎಲ್‌ಪಿಜಿ ಸಿಲಿಂಡರ್ ರೀಫಿಲ್‌ಗಾಗಿ ಸಹಾಯಧನವನ್ನು ವಿತರಿಸಲು 1,500 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದರು.

Yogi Adityanath
ಪ್ರಧಾನಿ ಮೋದಿ ಮನೆ ಸಮೀಪದ ಮಸೀದಿ ನಂತರ ಮತ್ತೊಂದು ಮಸೀದಿ ತೆರವಿಗೆ ಕೇಂದ್ರ ನಿರ್ಧಾರ; ಹೈಕೋರ್ಟ್‌ಗೆ ಮಾಹಿತಿ!

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್ ಅವರು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಮತ್ತು ಕೇಂದ್ರ ಸರ್ಕಾರ ನೀಡುವ ಸಹಾಯಧನದ ಬಗ್ಗೆ ವಿವರಿಸಿದರು.

"ಒಂದು ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ನ ಬೆಲೆ 983.45 ರೂಪಾಯಿಗಳಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರವು 335 ರೂಪಾಯಿಗಳ ಸಹಾಯಧನವನ್ನು ನೀಡುತ್ತದೆ. ನೀವು ನಿಮ್ಮ ಸ್ವಂತ ಜೇಬಿನಿಂದ 648.55 ರೂಪಾಯಿಗಳನ್ನು ಮಾತ್ರ ಭರಿಸಬೇಕಾಗುತ್ತದೆ," ಎಂದು ಅವರು ಹೇಳಿದರು.

ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ದೀಪಾವಳಿ ಮತ್ತು ಹೋಳಿ ಹಬ್ಬಗಳಂದು ತಲಾ ಒಂದು ಸಿಲಿಂಡರ್ ಅನ್ನು ಉಚಿತವಾಗಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

"ಈ ರೀತಿ ಉಳಿತಾಯವಾಗುವ ಹಣದಿಂದ ನೀವು ದೀಪಾವಳಿಯ ಸಿಹಿ ತಿನಿಸುಗಳು ಮತ್ತು ದೀಪಗಳನ್ನು ಖರೀದಿಸಬಹುದು" ಎಂದು ಅವರು ಹೇಳಿದರು.

ಇದೇ ವೇಳೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿ ಮತ್ತು ಈಗಿನ ಸರ್ಕಾರದ ಆಡಳಿತವನ್ನು ಹೋಲಿಕೆ ಮಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಒಂದು ಗ್ಯಾಸ್ ಸಂಪರ್ಕ ಪಡೆಯಲು ಜನರು ಸಾಕಷ್ಟು ತೊಂದರೆ ಅನುಭವಿಸಬೇಕಾಗಿತ್ತು. ಆದರೆ, ತಮ್ಮ ಸರ್ಕಾರ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ಒದಗಿಸಿದೆ. ಇದು ಉತ್ತಮ ಆಡಳಿತಕ್ಕೆ ಉದಾಹರಣೆ ಎಂದು ಶ್ಲಾಘಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X