ಆಧಾರ್ ಕಥೆ ಅಂತ್ಯ? ಸರ್ಕಾರಿ ಯೋಜನೆಗಳಿಗೆ ಆಧಾರ್ ಕಾರ್ಡ್ ಬದಲು ವೋಟರ್ ಐಡಿ ತರಲು ಕೇಂದ್ರ ಸರ್ಕಾರದ ಹೊಸ ಚಿಂತನೆ!

ಕೇಂದ್ರ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಪ್ರಯೋಜನ ಹಾಗೂ ಹಣ ಪಾವತಿ ಪಡೆಯಲು ಇನ್ಮುಂದೆ ಆಧಾರ್ ಕಾರ್ಡ್ ಬದಲಾಗಿ ಮತದಾರರ ಗುರುತಿನ ಚೀಟಿ ಮತ್ತು ಬಯೋಮೆಟ್ರಿಕ್ ಅನ್ನು ಪ್ರಮುಖ ದಾಖಲೆಯಾಗಿ ಬಳಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆ ಕುರಿತ ವರದಿ ಇಲ್ಲಿದೆ:
Centre considers making voter ID and biometric mandatory instead of Aadhaar for welfare schemes
ಸರ್ಕಾರಿ ಯೋಜನೆಗಳಿಗೆ ಆಧಾರ್ ಕಾರ್ಡ್ ಬದಲು ವೋಟರ್ ಐಡಿ ತರಲು ಕೇಂದ್ರ ಸರ್ಕಾರದ ಹೊಸ ಚಿಂತನೆ!Online Desk
Updated on: 

ನವದೆಹಲಿ: ಸರ್ಕಾರಿ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಫಲಾನುಭವಿಗಳನ್ನು ಗುರುತಿಸುವ ಮತ್ತು ಹಣ ವರ್ಗಾವಣೆ ಮಾಡುವ ಪ್ರಕ್ರಿಯೆಯಲ್ಲಿ ಆಧಾರ್ ಕಾರ್ಡ್ ಬದಲಾಗಿ ಮತದಾರರ ಗುರುತಿನ ಚೀಟಿ ಮತ್ತು ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸುವ ಹೊಸ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಮುಂದಿಟ್ಟಿದೆ. ಇತ್ತೀಚೆಗೆ ನಡೆದ ಸಮಾವೇಶವೊಂದರಲ್ಲಿ ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅವರು ಈ ವಿಷಯವನ್ನು ಅಧಿಕೃತವಾಗಿ ಪ್ರಸ್ತಾಪಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕೇಂದ್ರ ಸರ್ಕಾರದ ಈ ಚಿಂತನೆಗೆ ಕಾರಣಗಳೇನು?

  • ಆಧಾರ್ ಸುರಕ್ಷತೆಯ ಬಗ್ಗೆ ಪ್ರಶ್ನೆ: ಆಧಾರ್ ಕಾರ್ಡ್‌ಗಳು ಈಗ ಅತ್ಯಂತ ಸುಲಭವಾಗಿ ಲಭ್ಯವಿದ್ದು, "ಯಾರೇ ಆದರೂ ಕೇವಲ 5 ನಿಮಿಷಗಳಲ್ಲಿ ಬೀದಿ ಬದಿಯ ನೋಂದಣಿ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ಪಡೆದುಕೊಳ್ಳಬಹುದು" ಎಂದು ಸಚಿವರು ಹೇಳಿದ್ದಾರೆ. ಇದರಿಂದಾಗಿ ನಕಲಿ ಫಲಾನುಭವಿಗಳು ಸೃಷ್ಟಿಯಾಗುವ ಸಾಧ್ಯತೆ ಇರುತ್ತದೆ.

  • ಅರ್ಹ ಫಲಾನುಭವಿಗಳ ಗುರುತಿಸುವಿಕೆ: ಆಧಾರ್ ಬದಲಿಗೆ ಮತದಾರರ ಗುರುತಿನ ಚೀಟಿ (EPIC ಸಂಖ್ಯೆ) ಮತ್ತು ಬಯೋಮೆಟ್ರಿಕ್ ದೃಢೀಕರಣವನ್ನು ಬಳಸುವುದರಿಂದ ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳು ತಲುಪುವುದನ್ನು ಖಚಿತಪಡಿಸಿಕೊಳ್ಳಬಹುದು ಹಾಗೂ ನಕಲಿ ದಾಖಲಾತಿಗಳನ್ನು ತಡೆಯಬಹುದು ಎಂಬುದು ಸರ್ಕಾರದ ವಾದವಾಗಿದೆ.

Centre considers making voter ID and biometric mandatory instead of Aadhaar for welfare schemes
ಪಾಕಿಸ್ತಾನ, ವಿದೇಶಿ ಪ್ರಜೆಗಳಿಗೆ ಪಾಸ್‌ಪೋರ್ಟ್, ವೀಸಾ ನಿಯಮ ಸರಳೀಕರಿಸಿದ ಕೇಂದ್ರ

ಮುಂದುವರೆದು, ಕೇಂದ್ರದ ಈ ಹೊಸ ಆಲೋಚನೆಗೆ ತೀವ್ರ ರಾಜಕೀಯ ವಿರೋಧ ವ್ಯಕ್ತವಾಗುತ್ತಿದ್ದು, ಮುಖ್ಯವಾಗಿ ಸಿಪಿಐ(ಎಂ) ಪಕ್ಷವು ಇದನ್ನು ತೀವ್ರವಾಗಿ ಖಂಡಿಸಿದೆ. ಅದರಂತೆ, ತಂತ್ರಜ್ಞಾನದ ಕೊರತೆ ಇರುವ ಗ್ರಾಮೀಣ ಭಾಗದ ಜನರಿಗೆ ಇ-ಕೆವೈಸಿ ಪ್ರಕ್ರಿಯೆಗಳು ಈಗಾಗಲೇ ಹೊರೆಯಾಗುತ್ತಿವೆ. ಈಗ ವೋಟರ್ ಐಡಿ ಕಡ್ಡಾಯಗೊಳಿಸಿದರೆ ಕೋಟ್ಯಂತರ ಬಡವರು, ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಕಾರ್ಮಿಕರು ಕಲ್ಯಾಣ ಯೋಜನೆಗಳಿಂದ ವಂಚಿತರಾಗಲಿದ್ದಾರೆ ಎಂದು ಎಚ್ಚರಿಸಿದೆ. ಇದರೊಂದಿಗೆ, ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಯುತ್ತಿರುವ ಸಂದರ್ಭದಲ್ಲೇ ವೋಟರ್ ಐಡಿ ಸಂಖ್ಯೆಯನ್ನು ಕಡ್ಡಾಯಗೊಳಿಸುತ್ತಿರುವುದು ಸಾಮೂಹಿಕ ಮತದಾನ ಹಕ್ಕು ನಿರಾಕರಣೆಗೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿರುವ, ಸಿಪಿಐ(ಎಂ) ಈಗಾಗಲೇ 13.4 ಕೋಟಿಗೂ ಅಧಿಕ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದು, ಅಂಚಿನಲ್ಲಿರುವ ಸಮುದಾಯಗಳು, ಮುಸ್ಲಿಮರು, ಮಹಿಳೆಯರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದವರು ಇದರಿಂದ ತೀವ್ರವಾಗಿ ಬಾಧಿತರಾಗಿದ್ದಾರೆ ಎಂದು ಆರೋಪಿಸಿದೆ.

Centre considers making voter ID and biometric mandatory instead of Aadhaar for welfare schemes
'ಹೆಸರಿಗೆ ಮಾತ್ರ ನಿರ್ಬಂಧ, ಅಂಗಡಿಗಳಲ್ಲಿ ಎಲ್ಲ ರೀತಿಯ ಪಟಾಕಿಗಳೂ ಸಿಗುತ್ತಿವೆ': ಸುಪ್ರೀಂ ಕೋರ್ಟ್ ಕಳವಳ; ಕೇಂದ್ರಕ್ಕೆ ಖಡಕ್ ಸೂಚನೆ

ಹಾಲಿ ಯೋಜನೆಗಳ ಮೇಲಾಗುವ ಪರಿಣಾಮಗಳೇನು?

ಸದ್ಯಕ್ಕೆ ಪಿಎಂ-ಕಿಸಾನ್, ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಮತ್ತು ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಹಣ ಪಾವತಿಗೆ ಆಧಾರ್ ಜೋಡಿತ ಬ್ಯಾಂಕ್ ಖಾತೆಗಳನ್ನು ಕಡ್ಡಾಯಗೊಳಿಸಲಾಗಿದೆ. ಹೊಸ ನಿಯಮ ಜಾರಿಗೆ ಬಂದರೆ ಈ ವ್ಯವಸ್ಥೆಯಲ್ಲಿ ಬದಲಾವಣೆಯಾಗಲಿದೆ. ಆದರೆ, ಸದ್ಯಕ್ಕೆ ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಸರ್ಕಾರಿ ಆದೇಶ ಹೊರಬಿದ್ದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X