'ಕಠಿಣ ಕ್ರಮ ಕೈಗೊಳ್ಳಬೇಕು': CJI ಗುರಿಯಾಗಿಸಿಕೊಂಡ ಪೋಸ್ಟ್‌, ಕೆಪಿಸಿಸಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್!

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಂಚೋಲಿ ಅವರಿದ್ದ ನ್ಯಾಯಪೀಠ, ಸಂವಿಧಾನವೇ ಸರ್ವೋಚ್ಚವಾದುದು ಮತ್ತು ಯಾವುದೇ ವ್ಯಕ್ತಿ ಅಥವಾ ರಾಜಕೀಯ ಸಂಘಟನೆಯು ಸಂವಿಧಾನಕ್ಕಿಂತ ಮೇಲಲ್ಲ ಎಂದು ಹೇಳಿದೆ.
ಸಿಜೆಐ ಸೂರ್ಯ ಕಾಂತ್
CJI Surya Kanth
Updated on: 

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು (CJI)ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಎಲ್ಲಾ ಪದಾಧಿಕಾರಿಗಳಿಗೆ ಸುಪ್ರೀಂಕೋರ್ಟ್ ಶುಕ್ರವಾರ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ನ್ಯಾಯಾಂಗದ ಸ್ವಾತಂತ್ರ್ಯವು "ರಾಜಕೀಯ ಅನುಕೂಲ"ಕ್ಕೆ ಸಂಬಂಧಿಸಿದ ವಿಷಯವಲ್ಲ ಎಂದು ಉನ್ನತ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಂಚೋಲಿ ಅವರಿದ್ದ ನ್ಯಾಯಪೀಠ, ಸಂವಿಧಾನವೇ ಸರ್ವೋಚ್ಚವಾದುದು ಮತ್ತು ಯಾವುದೇ ವ್ಯಕ್ತಿ ಅಥವಾ ರಾಜಕೀಯ ಸಂಘಟನೆಯು ಸಂವಿಧಾನಕ್ಕಿಂತ ಮೇಲಲ್ಲ ಎಂದು ಹೇಳಿದೆ.

ನ್ಯಾಯಾಲಯದ ತೀರ್ಪುಗಳನ್ನು ಟೀಕಿಸಲು ಯಾವಾಗಲೂ ಅವಕಾಶವಿರುತ್ತದೆ. ಆದರೆ, ನ್ಯಾಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಅಥವಾ ಬೆದರಿಕೆ ಹಾಕಲು 'ಅಭಿವ್ಯಕ್ತಿ ಸ್ವಾತಂತ್ರ್ಯ'ವನ್ನು ಒಂದು ಗುರಾಣಿಯನ್ನಾಗಿ ಬಳಸಿಕೊಳ್ಳುವಂತಿಲ್ಲ. ಒಬ್ಬ ವ್ಯಕ್ತಿ ಎಷ್ಟೇ ಉನ್ನತ ಹುದ್ದೆಯಲ್ಲಿದ್ದರೂ, ನ್ಯಾಯಾಲಯದ ಅಧಿಕಾರವನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಅತ್ಯಂತ ಕಠಿಣವಾಗಿ ನಿಭಾಯಿಸಬೇಕಾಗುತ್ತದೆ" ಎಂದು ಪೀಠವು ತಿಳಿಸಿದೆ.

ನ್ಯಾಯಾಲಯದ ಅಧಿಕಾರಕ್ಕೆ ಯಾವುದೇ ರಾಜಕೀಯ ಅನುಮೋದನೆಯ ಅಗತ್ಯವಿರುವುದಿಲ್ಲ; ಅದು ಕಾನೂನಿನ ಆಳ್ವಿಕೆಯ ಮೇಲೆ ನಿಂತಿರುತ್ತದೆ. ನ್ಯಾಯ ಆಡಳಿತವು ಜಾರಿಯಲ್ಲಿರುವ ಕಡೆ, ಕಾನೂನು ತನ್ನದೇ ಆದ ಹಾದಿಯಲ್ಲಿ ಸಾಗಬೇಕು" ಎಂದು ಪೀಠವು ಹೇಳಿದೆ. ನ್ಯಾಯಾಂಗದ ಸ್ವಾತಂತ್ರ್ಯವು ರಾಜಕೀಯ ಅನುಕೂಲಕ್ಕೆ ಸಂಬಂಧಿಸಿದ ವಿಷಯವಲ್ಲ ಎಂಬುದನ್ನು ಪೀಠವು ಮತ್ತೊಮ್ಮೆ ಪುನರುಚ್ಚರಿಸಿದೆ.

ಈ ಪ್ರಕರಣದಲ್ಲಿ ಕ್ರಿಮಿನಲ್ ಅಥವಾ ಸಿವಿಲ್ ನ್ಯಾಯಾಂಗ ನಿಂದನೆಗೆ ಸಂಬಂಧಿಸಿದ ನಿಬಂಧನೆಗಳು ಅನ್ವಯಿಸುತ್ತವೆಯೇ ಎಂದು ಪರಿಶೀಲಿಸಲು, ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರನ್ನು 'ಅಮಿಕಸ್ ಕ್ಯೂರಿ' (ನ್ಯಾಯಾಲಯಕ್ಕೆ ಸಹಾಯ ಮಾಡುವ ವಕೀಲರು) ಆಗಿ ನೇಮಿಸಿದೆ. ಅಲ್ಲದೆ, ಈ ವಿಷಯದಲ್ಲಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರ ಸಹಾಯವನ್ನೂ ಕೋರಿದೆ.

ಸಿಜೆಐ ಸೂರ್ಯ ಕಾಂತ್
ಅರೆಸ್ಟ್ ಅಲ್ಲ, ವಶಕ್ಕೆ ಪಡೆದ ಕ್ಷಣದಿಂದಲೇ deadline ಆರಂಭ: 24 ಗಂಟೆ ಗಡುವು ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಅಕ್ಟೋಬರ್ 12 ರಂದು, ಕಾಂಗ್ರೆಸ್‌ನ ಕೇರಳ ಘಟಕದ ಅಧಿಕೃತ 'ಎಕ್ಸ್' (X) ಖಾತೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಗುರಿಯಾಗಿಸಿಕೊಂಡು ಪೋಸ್ಟ್ ಒಂದನ್ನು ಹಾಕಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾದ ನಂತರ ಅದನ್ನು ಡಿಲೀ್ಟ್ ಮಾಡಲಾಗಿದೆ. ಈ ಘಟನೆಗೆ ಕಾರಣರಾದ ವ್ಯಕ್ತಿಯನ್ನು ಪಕ್ಷವು ಹುದ್ದೆಯಿಂದ ತೆಗೆದುಹಾಕಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X