ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: 85 ವರ್ಷದ ವೃದ್ಧನ ವಿರುದ್ಧ ಕೇಸ್!

ನವೆಂಬರ್ 4ರಂದು ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ತಿರುವನಂತಪುರಂ ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Rahul Gandhi-Sonia Gandhi
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ
Updated on: 

ತಿರುವನಂತಪುರಂ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 85 ವರ್ಷದ ವೃದ್ಧರೊಬ್ಬರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಆರೋಪಿ ತಿರುವನಂತಪುರಂನ ತೈಕ್ಕಾಡ್ ನಿವಾಸಿ ರವೀಂದ್ರನಾಥನ್ ನಾಯರ್ ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ನವೆಂಬರ್ 4ರಂದು ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ತಿರುವನಂತಪುರಂ ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಟ್ರಿವಾಂಡ್ರಂ ಕ್ಲಬ್ ಸೀನಿಯರ್ಸ್ ಫೋರಂ ಟಿವಿಎಂ ಕ್ಲಬ್' ಎಂಬ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ರವೀಂದ್ರನಾಥನ್ ನಾಯರ್ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Rahul Gandhi-Sonia Gandhi
ಶೇ. 31.2ರಷ್ಟು ಎಥೆನಾಲ್ ಬೆರೆಸಿದ ಪೆಟ್ರೋಲ್ ಮಾರಾಟ: ತೈಲ ಕಂಪನಿಗಳ ವಿರುದ್ಧ ಕ್ರಮಕ್ಕೆ ಸಚಿವ ರಿಜ್ವಾನ್ ಅರ್ಷದ್ ಆಗ್ರಹ! Video

ಗ್ರೂಪ್‌ನಲ್ಲಿದ್ದ ಇತರ ಸದಸ್ಯರಿಗೂ ಸಂದೇಶಗಳು ಕಾಣುವಂತೆ ಉದ್ದೇಶಪೂರ್ವಕವಾಗಿ ಪೋಸ್ಟ್ ಮಾಡಲಾಗಿದ್ದು, ಇಬ್ಬರು ನಾಯಕರ ಹೆಸರಿಗೆ ಧಕ್ಕೆ ತರುವ ಉದ್ದೇಶ ಹೊಂದಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X