ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಪರೀಕ್ಷೆಗೆ ಕರ್ನಾಟಕ, ಕೇರಳಕ್ಕೆ ಸ್ವಾತಂತ್ರ್ಯ: ರಾಜಕೀಯ ಮಾಡಬೇಡಿ ಎಂದ ಕೇಂದ್ರ ಸಚಿವ ಸುರೇಶ್ ಗೋಪಿ

ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಕರ್ನಾಟಕ ಸರ್ಕಾರದ ಆರೋಪದ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.
Union Minister Suresh Gopi
ಕೇಂದ್ರ ಸಚಿವ ಸುರೇಶ್ ಗೋಪಿ
Updated on: 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಎಷ್ಟಿದೆ ಎಂಬುದನ್ನು ಪರೀಕ್ಷಿಸಲು ಕರ್ನಾಟಕ ಮತ್ತು ಕೇರಳ ಸರ್ಕಾರಗಳು ಸ್ವತಂತ್ರವಾಗಿವೆ. ಆದರೆ, ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.

ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಕರ್ನಾಟಕ ಸರ್ಕಾರದ ಆರೋಪದ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಸರ್ಕಾರ ನಡೆಸಿದ ಪರೀಕ್ಷೆಯಲ್ಲಿ ಪೆಟ್ರೋಲ್‌ನಲ್ಲಿ ಹೆಚ್ಚಿನ ಪ್ರಮಾಣದ ಎಥೆನಾಲ್ ಪತ್ತೆಯಾಗಿದೆ ಎಂದು ಹೇಳಿಕೊಂಡಿತ್ತು.

ಇದರ ಬೆನ್ನಲ್ಲೇ ಕೇರಳ ಸರ್ಕಾರ ಕೂಡ ಪೆಟ್ರೋಲ್ ಮಾದರಿಗಳನ್ನು ಪರೀಕ್ಷಿಸಲು ಶನಿವಾರ ನಿರ್ಧರಿಸಿತ್ತು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಗೋಪಿ, ಕರ್ನಾಟಕ ಮತ್ತು ಕೇರಳ ಎರಡೂ ಸರ್ಕಾರಗಳು ಪೆಟ್ರೋಲ್ ಮಾದರಿಗಳನ್ನು ಪರೀಕ್ಷಿಸಬಹುದು. ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ನೀತಿಗೆ ವೈಜ್ಞಾನಿಕ ಆಧಾರವಿದೆ ಎಂದು ಸ್ಪಷ್ಟಪಡಿಸಿದರು.

Union Minister Suresh Gopi
'E20 ಈಗ 420 ಆಗಿದೆ': ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಹೆಚ್ಚಾಗಿದೆ, ಲಾಭ ಯಾರಿಗೆ?; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಮಿಶ್ರಣ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯ ಸಾಧ್ಯತೆಗಳು ಮತ್ತು ವೈಜ್ಞಾನಿಕ ಅಂಶಗಳನ್ನು ಪರಿಶೀಲಿಸಿದ ಬಳಿಕ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

ಇದೇ ವೇಳೆ, ಅನಗತ್ಯ ರಾಜಕೀಯ ಕೆಸರೆರಚಾಟ ನಡೆಸಿ ವಿವಾದ ಸೃಷ್ಟಿಸುವುದರಿಂದ ಅಂತಿಮವಾಗಿ ಯಾರಿಗೆ ತೊಂದರೆಯಾಗಲಿದೆ ಎಂಬುದನ್ನು ಯೋಚಿಸಬೇಕು. ರಾಜಕೀಯ ಉದ್ದೇಶಕ್ಕಾಗಿ ಈ ವಿಚಾರವನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ಸುರೇಶ್ ಗೋಪಿ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X