12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ-ಕೊಲೆ; ಆರೋಪಿ ಪೊಲೀಸ್ ಎನ್ಕೌಂಟರ್ ನಲ್ಲಿ ಹತ!

ಉತ್ತರ ದಿನಾಜ್‌ಪುರ ಜಿಲ್ಲೆಯ ರಾಯ್‌ಗಂಜ್‌ನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಆತ ಗುಂಡು ಹಾರಿಸಿದ್ದು, ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದಾಗ ಆರೋಪಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿ..
rape-murder accused killed in police firing in Bengal
ಅತ್ಯಾಚಾರ-ಕೊಲೆ ಆರೋಪಿ ಪೊಲೀಸ್ ಎನ್ಕೌಂಟರ್ ನಲ್ಲಿ ಹತ!
Updated on: 

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಪೊಲೀಸರ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

ಸೋಮವಾರ ಮುಂಜಾನೆ ಉತ್ತರ ದಿನಾಜ್‌ಪುರ ಜಿಲ್ಲೆಯ ರಾಯ್‌ಗಂಜ್‌ನಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಆತ ಗುಂಡು ಹಾರಿಸಿದ್ದು, ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದಾಗ ಆರೋಪಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಆರೋಪಿಯನ್ನು ದಿಲೀಪ್ ರಾಯ್ ಎಂದು ಗುರುತಿಸಲಾಗಿದ್ದು ನಾಲ್ಕು ದಿನಗಳಿಂದ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದರು.

ಸೋಮವಾರ ಮುಂಜಾನೆ ಸುಮಾರು 2 ಗಂಟೆಗೆ ಆರೋಪಿ ಬಿಹಾರ ಗಡಿಯ ಸಮೀಪದ ಪರಪುಕುರ್ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಲು ಕಾರ್ಯಾಚರಣೆ ನಡೆಸಿದ್ದರು.

ಈ ವೇಳೆ ದಿಲೀಪ್ ರಾಯ್ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿ ಗಾಯಗೊಂಡಿದ್ದಾನೆ. ತಕ್ಷಣ ಆತನನ್ನು ರಾಯ್‌ಗಂಜ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಎನ್‌ಕೌಂಟರ್ ವೇಳೆ ಆರೋಪಿ ಹಾರಿಸಿದ ಗುಂಡು ಪೊಲೀಸ್ ವಾಹನದ ಟೈರ್‌ಗೆ ತಗುಲಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯ ಪೂರ್ವಜರ ಮನೆ ಜಾರ್ಖಂಡ್‌ನಲ್ಲಿದ್ದು, ಪಶ್ಚಿಮ ಬಂಗಾಳದಿಂದ ಬಿಹಾರ ಗಡಿಯ ಮೂಲಕ ಪರಾರಿಯಾಗಲು ಯತ್ನಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

rape-murder accused killed in police firing in Bengal
"ನಾನೇ ದೇವರು, ನೀನು ನನ್ನ ಮಾತನ್ನು ಕೇಳಲೇಬೇಕು": ಮಹಿಳೆ ಮೇಲೆ ವೃಂದಾವನ ಧರ್ಮ ಗುರು ಲೈಂಗಿಕ ದೌರ್ಜನ್ಯ!

ಏನಿದು ಪ್ರಕರಣ?

12 ವರ್ಷದ ಬಾಲಕಿ ನವೆಂಬರ್ 3ರಂದು ಮಧ್ಯಾಹ್ನ ಸೈಕಲ್‌ನಲ್ಲಿ ಮನೆಯಿಂದ ಹೊರಗೆ ಹೋಗಿದ್ದಳು. ಆದರೆ, ಸಂಜೆಯಾದರೂ ಮನೆಗೆ ಮರಳಿರಲಿಲ್ಲ. ಆತಂಕಗೊಂಡ ಕುಟುಂಬದವರು ಹುಡುಕಾಟ ನಡೆಸಿದ್ದರು. ಎರಡು ದಿನಗಳ ಬಳಿಕ ಕುಲಿಕ್ ನದಿಯ ಸಮೀಪದ ಅರಣ್ಯ ಪ್ರದೇಶದಲ್ಲಿ ಬಾಲಕಿಯ ನಗ್ನ ಹಾಗೂ ಭಾಗಶಃ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿತ್ತು.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ದಿಲೀಪ್ ರಾಯ್‌ಗಾಗಿ ಹುಡುಕಾಟ ಆರಂಭಿಸಿದ್ದರು. ಇದೀಗ ಬಂಧನ ಕಾರ್ಯಾಚರಣೆ ವೇಳೆ ಆರೋಪಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X