Jammu And Kashmir: ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರ ಗುಂಡಿನ ದಾಳಿ, 3 CRPF ಸಿಬ್ಬಂದಿಗೆ ಗಾಯ

ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ.
3 CRPF personnel injured after terrorists open fire in Kulgam
ಕುಲ್ಗಾಮ್ ಉಗ್ರ ದಾಳಿ
Updated on: 

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಬುಧವಾರ ಗುಂಡಿನ ದಾಳಿ ನಡೆದಿದೆ.

ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನ ಸುಮಾರು 2.15ರ ವೇಳೆಗೆ ಮಿರ್ ಬಜಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಅಲ್ಲಿ ನಾಕಾ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಅವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

3 CRPF personnel injured after terrorists open fire in Kulgam
Air India ವಿಮಾನಕ್ಕೆ Hijack ಬೆದರಿಕೆ: ಶೌಚಾಲಯದ ಕನ್ನಡಿಯಲ್ಲಿ ಸಂದೇಶ ಪತ್ತೆ; Kolkata ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ..!

ಗಾಯಗೊಂಡ ಮೂವರು ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಅನಂತ್‌ನಾಗ್ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಆರ್‌ಪಿಎಫ್ ತಿಳಿಸಿದೆ.

ಘಟನೆ ನಡೆದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿಕೋರರ ಪತ್ತೆಗಾಗಿ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಿವೆ. ಪರಾರಿಯಾಗಿರುವ ದುಷ್ಕರ್ಮಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X