'ದಿಮಾಗಿ ನಕ್ಸಲರ' ಬಗ್ಗೆ ಎಚ್ಚರ ವಹಿಸಿ; ಸರ್ಕಾರ ಅಂಥವರಿಗೆ ತಕ್ಕ ಪಾಠ ಕಲಿಸಲಿದೆ: BJP ಅಧ್ಯಕ್ಷ ನಿತಿನ್ ನಬಿನ್

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಧರ್ಮಜಯಗಢ ಪಟ್ಟಣದಲ್ಲಿ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಅವರು ಮಾತನಾಡಿದರು.
Nitin Nabin
ನಿತಿನ್ ನಬಿನ್
Updated on: 

ರಾಯ್‌ಗಢ: ವಿವಿಧ ಸಂಘಟನೆಗಳಲ್ಲಿ ನಾಯಕತ್ವದ ಸ್ಥಾನಗಳನ್ನು ಹೊಂದಿರುವ ಕೆಲವರು 'ಬೌದ್ಧಿಕ ನಕ್ಸಲರು' ಆಗಿದ್ದಾರೆ. ಇಂತಹವರ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಬಿಜೆಪಿ ಸರ್ಕಾರ ತನ್ನ ಅಭಿವೃದ್ಧಿ ಕಾರ್ಯಗಳು ಮತ್ತು ಜನಕಲ್ಯಾಣ ಯೋಜನೆಗಳ ಮೂಲಕ ಅವರಿಗೆ ತಕ್ಕ ಪಾಠ ಕಲಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹೇಳಿದ್ದಾರೆ.

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಧರ್ಮಜಯಗಢ ಪಟ್ಟಣದಲ್ಲಿ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮವನ್ನು ವರ್ಚುವಲ್ ಮೂಲಕ ಅವರು ಮಾತನಾಡಿದರು.

ನಿತಿನ್ ನಬಿನ್ ಅವರು ಧರ್ಮಜಯಗಢದ ಕಾರ್ಯಕ್ರಮದಲ್ಲಿ ಖುದ್ದಾಗಿ ಪಾಲ್ಗೊಳ್ಳಬೇಕಿತ್ತು. ಆದರೆ, ಪ್ರತಿಕೂಲ ಹವಾಮಾನದಿಂದಾಗಿ ಅವರ ವಿಮಾನ ಇಳಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಭೇಟಿಯನ್ನು ರದ್ದುಗೊಳಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಿಂದ ನಕ್ಸಲಿಸಂನ್ನು ನಿರ್ಮೂಲನೆ ಮಾಡುವ ಸಂಕಲ್ಪ ಮಾಡಿದ್ದಾರೆ. ಈ ಸಂಕಲ್ಪವನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

Nitin Nabin
ಪ್ರಧಾನಿ ಮೋದಿ ಹೇಳಿದ 'ದಿಮಾಗಿ ನಕ್ಸಲರು' ಯಾರು ಗೊತ್ತೆ? ಪಟ್ಟಿ ಹಂಚಿಕೊಂಡ ಕೇಂದ್ರ ಸಚಿವ ಕಿರಣ್ ರಿಜಿಜು

ಛತ್ತೀಸ್‌ಗಢವನ್ನು ನಕ್ಸಲಿಸಂ ಮುಕ್ತಗೊಳಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ಅವರ ತಂಡವನ್ನು ನಬಿನ್ ಅಭಿನಂದಿಸಿದರು. ಮಾವೋವಾದಿಗಳ ವಿರುದ್ಧದ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಭದ್ರತಾ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.

ಮೂರು ವರ್ಗದ ಜನರ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಎಚ್ಚರಿಸಿದರು. ನಗರಗಳ ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತು ನೀತಿಗಳನ್ನು ರೂಪಿಸುತ್ತಾ, ಮಕ್ಕಳಲ್ಲಿ ಕ್ರಾಂತಿಯ ಕುರಿತು ಮಾತನಾಡುವಂತೆ ಪ್ರೇರೇಪಿಸುವವರು; ಸಂವಿಧಾನದ ಹೆಸರಿನಲ್ಲಿ ಮಾತನಾಡುತ್ತಲೇ ಪ್ರಜಾಪ್ರಭುತ್ವದ ವಿರುದ್ಧ ಜನರನ್ನು ಪ್ರಚೋದಿಸುವವರು; ಇಂತಹ 'ಬೌದ್ಧಿಕ ನಕ್ಸಲರಿಗೆ' ಸಂಘಟನೆಗಳ ಮೂಲಕ ಬೆಂಬಲ ನೀಡುವವರು ಈ ಮೂರು ವರ್ಗದ ಜನರಾಗಿದ್ದಾರೆ ಎಂದು ಅವರು ಹೇಳಿದರು.

ಈ ಮೂರೂ ವರ್ಗದ ಜನರ ಬಗ್ಗೆ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ಸರ್ಕಾರ ತನ್ನ ಅಭಿವೃದ್ಧಿ ಕಾರ್ಯಗಳು ಮತ್ತು ಜನಕಲ್ಯಾಣ ಯೋಜನೆಗಳ ಮೂಲಕ ಬೌದ್ಧಿಕ ನಕ್ಸಲರಿಗೆ ತಕ್ಕ ಪಾಠ ಕಲಿಸಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X