ದೆಹಲ್ಲಿಯಲ್ಲಿ ಮತ್ತೊಂದು ಬೀಭತ್ಸ ಕೃತ್ಯ: ಬಟ್ಟೆ ಅಂಗಡಿಯ 'ಟ್ರಯಲ್ ರೂಮ್'ನಲ್ಲಿ ಕುತ್ತಿಗೆ ಸೀಳಿ 16 ವರ್ಷದ ಬಾಲಕಿಯ ಹತ್ಯೆ! ಆರೋಪಿ ಪರಾರಿ

ಯುವಕನೊಬ್ಬ ಆಕೆಯ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿ, ಕುತ್ತಿಗೆ ಸೀಳಿ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
Murderd Girl
ಹತ್ಯೆಯಾದ 16 ವರ್ಷದ ಬಾಲಕಿ
Updated on: 

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಬೀಭತ್ಸ ಕೃತ್ಯ" ವೊಂದು ನಡೆದಿದೆ. ಮೋತಿ ನಗರ ಪ್ರದೇಶದಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಶನಿವಾರ ರಾತ್ರಿ 16 ವರ್ಷದ ಬಾಲಕಿ ಹತ್ಯೆ ಮಾಡಲಾಗಿದೆ. ಯುವಕನೊಬ್ಬ ಆಕೆಯ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿ, ಕುತ್ತಿಗೆ ಸೀಳಿ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ದಾಳಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಂಗಡಿಗೆ ಆಗಮಿಸಿದಾಗ, ಅಲ್ಲಿನ 'ಟ್ರಯಲ್ ರೂಮ್'ನಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು, ಕೊಲೆ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶವನ್ನು ಉಂಟುಮಾಡಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ಬಾಲಕಿಗೆ 16 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. 'ಸುರಾಜ್' ಎಂಬಾತನೇ ಈ ಕೊಲೆ ಮಾಡಿದ್ದಾನೆ ಎಂದು ಮೃತ ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈತ ಈ ಹಿಂದೆಯೂ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದನಂತೆ. ಬಾಲಕಿ ಅಪ್ರಾಪ್ತಳಾಗಿದ್ದಳು ಎಂದು ಹೇಳಿರುವ ಕುಟುಂಬದವರು, ಈ ಘಟನೆಯಿಂದ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

Murderd Girl
ಉತ್ತರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಟೆರೇಸ್ ನಿಂದ ಎಸೆದು ಕೊಲೆ; ಆರೋಪಿಗೆ ಗುಂಡಿಕ್ಕಿ ಹತ್ಯೆ

ಕೊಲೆಗೆ ಕಾರಣವಾದ ಸನ್ನಿವೇಶಗಳು ಮತ್ತು ದಾಳಿಯ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೋತಿ ನಗರ ಪೊಲೀಸ್ ಠಾಣೆಯ ತಂಡವೊಂದು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದೆ. ಕುಟುಂಬದವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಪತ್ತೆಹಚ್ಚಲು ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ ಪೊಲೀಸರು ಆ ಪ್ರದೇಶದ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಅಂಗಡಿಯ ಸಿಬ್ಬಂದಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ. ಮೋತಿ ನಗರದ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X