ಉತ್ತರಾಖಂಡ: 100 ಮೀಟರ್ ಆಳದ ಕಂದಕಕ್ಕೆ ಉರುಳಿದ ಬಸ್; ಆರು ಮಂದಿ ಸಾವು, 20 ಜನರಿಗೆ ಗಾಯ

ಮಂಗಳವಾರ ಬೆಳಗ್ಗೆ ರಿಷಿಕೇಶ-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯ ಗುಲಾರ್ ಬಜಾರ್ ಬಳಿ ಕಂದಕಕ್ಕೆ ಬಿದ್ದಿದೆ. ಬೆಳಗಿನ ಜಾವ ಸುಮಾರು 5.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 30ರಿಂದ 35 ಪ್ರಯಾಣಿಕರು ಇದ್ದರು ಎನ್ನಲಾಗಿದೆ.
ಕಂದಕಕ್ಕೆ ಉರುಳಿದ ಬಸ್
ಕಂದಕಕ್ಕೆ ಉರುಳಿದ ಬಸ್
Updated on: 

ರಿಷಿಕೇಶ: ಉತ್ತರಾಖಂಡದ ಟೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ, ಸುಮಾರು 30-35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಸೇತುವೆಯ ಕೆಳಗೆ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ರಿಷಿಕೇಶ-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯ ಗುಲಾರ್ ಬಜಾರ್ ಬಳಿ ಕಂದಕಕ್ಕೆ ಬಿದ್ದಿದೆ. ಬೆಳಗಿನ ಜಾವ ಸುಮಾರು 5.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 30ರಿಂದ 35 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯ ಕೆಳಗೆ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬ್ಯಾಸಿ ಮತ್ತು ಧಲ್ವಾಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 20 ಗಾಯಾಳುಗಳನ್ನು ರಕ್ಷಿಸಿ ಆಂಬ್ಯುಲೆನ್ಸ್‌ಗಳ ಮೂಲಕ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಐವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಕಂದಕಕ್ಕೆ ಉರುಳಿದ ಬಸ್
ಅಜಿತ್ ಪವಾರ್ ವಿಮಾನ ಅಪಘಾತ: ಫಡ್ನವೀಸ್‌ರಿಂದ VSR ಕಂಪನಿ ಮತ್ತು ಅದರ ಮಾಲೀಕರ ರಕ್ಷಣೆ; ರೋಹಿತ್ ಪವಾರ್ ಆರೋಪ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X