ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಭಾಗಿ!

ಸೋನಿಯಾ ಗಾಂಧಿ ಕೂಡ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದರು, ಆದ್ದರಿಂದ ತಾನು ಅವರ ಆತ್ಮಚರಿತ್ರೆಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲು ಬಂದಿರುವುದಾಗಿ ಹೇಳಿದ್ದಾರೆ.
Sonia Gandhi- Narendra Modi
ಸೋನಿಯಾ ಗಾಂಧಿ- ನರೇಂದ್ರ ಮೋದಿonline desk
Updated on: 

ನವದೆಹಲಿ: ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಬಿಲಾಂಗಿಂಗ್ ಎ ಜರ್ನಿ ಆಫ್ ಲವ್’ ಬಿಡುಗಡೆ ಸಮಾರಂಭದಲ್ಲಿ ಬಿಜೆಪಿ ನಾಯಕರೊಬ್ಬರು ಭಾಗವಹಿಸಿ ಅಚ್ಚರಿ ಮೂಡಿಸಿದ್ದಾರೆ.

ಬಿಜೆಪಿ ನಾಯಕನಿಗೆ ಕಾರ್ಯಕ್ರಮದಲ್ಲಿ ಮೊದಲ ಸಾಲಿನಲ್ಲಿ ಆಸನ ನೀಡಿ ಗೌರವಿಸಲಾಗಿತ್ತು. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಬಿಜೆಪಿ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾತನಾಡಿರುವ ಅಮರಿಂದರ್ ಸಿಂಗ್, ಅವರು ಸೋನಿಯಾ ಗಾಂಧಿಯವರ ಪುಸ್ತಕವನ್ನು ಶ್ಲಾಘಿಸಿದರು. ಇದು ಅದ್ಭುತ ಪುಸ್ತಕ ಮತ್ತು ಅದನ್ನು ಓದಿದ್ದೇನೆ, ಇದು ತುಂಬಾ ಚೆನ್ನಾಗಿ ಬರೆಯಲ್ಪಟ್ಟ ಪುಸ್ತಕ ಎಂದು ಅವರು ಹೇಳಿದ್ದಾರೆ.

Sonia Gandhi- Narendra Modi
ಉತ್ತರ ಪ್ರದೇಶ ಚುನಾವಣೆ: 181 ಸ್ಥಾನಗಳಿಗೆ ಕಾಂಗ್ರೆಸ್ ಬೇಡಿಕೆ; SP ನಾಯಕ ಅಖಿಲೇಶ್ ಯಾದವ್ ಹೇಳಿದ್ದೇನು?

ಕಾಂಗ್ರೆಸ್‌ಗೆ ಮತ್ತೆ ಸೇರುವ ಬಗ್ಗೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಕೇಳಿದಾಗ, ಅವರು ಸ್ಪಷ್ಟವಾಗಿ ‘ಇಲ್ಲ’ ಎಂದು ಹೇಳಿದರು.

ಸೋನಿಯಾ ಗಾಂಧಿ ಕೂಡ ತಮ್ಮ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದರು, ಆದ್ದರಿಂದ ತಾನು ಅವರ ಆತ್ಮಚರಿತ್ರೆಯ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲು ಬಂದಿರುವುದಾಗಿ ಹೇಳಿದ್ದಾರೆ.

ಅಮರಿಂದರ್ ಸಿಂಗ್ ಮತ್ತು ಗಾಂಧಿ ಕುಟುಂಬ ಬಹಳ ನಿಕಟ ಮತ್ತು ವೈಯಕ್ತಿಕ ಸಂಬಂಧವನ್ನು ಹೊಂದಿದೆ ಎಂದು ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ಹೇಳಿದ್ದಾರೆ.

‘ಯಾವುದೇ ರಾಜಕೀಯ ಉದ್ದೇಶವಿಲ್ಲ’

ಅಮರಿಂದರ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಅಂಬಿಕಾ ಸೋನಿ ಹೇಳಿದ್ದಾರೆ. ಅಮರಿಂದರ್ ಸಿಂಗ್ ಅವರನ್ನು ಕಾಂಗ್ರೆಸ್ ಖಂಡಿತವಾಗಿಯೂ ತಮ್ಮೊಂದಿಗೆ ನೋಡಲು ಬಯಸುತ್ತದೆ ಎಂದು ಅವರು ಹೇಳಿದ್ದಾರೆ.

ಅಮರಿಂದರ್ ಸಿಂಗ್ ಪುನಃ ಕಾಂಗ್ರೆಸ್‌ಗೆ ಮರಳಿದರೆ ಒಳ್ಳೆಯದು ಎಂದು ಕಾಂಗ್ರೆಸ್ ನಾಯಕ ಭೂಪೇಶ್ ಬಾಘೇಲ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X