ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯನವರನ್ನು ಕಡೆಗಣಿಸಲಾಯಿತೇ: ಮಾಜಿ ಸಿಎಂ ಸ್ಪಷ್ಟನೆಯೇನು?

ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರು ಹಿಂದಿನ ಸಾಲಿನಲ್ಲಿ ಕುಳಿತಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ಸೇರಿದಂತೆ ಅನೇಕರು ಟೀಕೆ ಮಾಡಿದ್ದರು. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ಕಡೆಗಣಿಸಿದೆ ಎಂದು ಭಾರೀ ಟೀಕೆ ಕೇಳಿಬಂತು.
Siddaramaiah in back seat
ಹಿಂದಿನ ಸಾಲಿನಲ್ಲಿ ಕುಳಿತಿರುವ ಸಿದ್ದರಾಮಯ್ಯ
Updated on: 

ನವದೆಹಲಿ: ಮೊನ್ನೆ ಸೋಮವಾರ ಸಾಯಂಕಾಲ ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥನ Sonia Gandhi' Belonging: A Journey of Love ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರು ಹಿಂದಿನ ಸಾಲಿನಲ್ಲಿ ಕುಳಿತಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ಸೇರಿದಂತೆ ಅನೇಕರು ಟೀಕೆ ಮಾಡಿದ್ದರು. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ಕಡೆಗಣಿಸಿದೆ ಎಂದು ಭಾರೀ ಟೀಕೆ ಕೇಳಿಬಂತು.

ಈ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ ಉತ್ತರಿಸಿದ ಸಿದ್ದರಾಮಯ್ಯ, ನಾನು ಕಾರ್ಯಕ್ರಮಕ್ಕೆ ತಡವಾಗಿ ಹೋಗಿದ್ದೆ. ಆ ವೇಳೆಗೆ ಮುಂದಿನ ಸಾಲಿನಲ್ಲಿನ ಆಸನಗಳೆಲ್ಲಾ ಭರ್ತಿಯಾಗಿದ್ದವು. ಹೀಗಾಗಿ, ಹಿಂದಿನ ಸಾಲಿನಲ್ಲಿ ಕೂರಬೇಕಾಯ್ತು ಎಂದು ಸ್ಪಷ್ಟನೆ ನೀಡಿದರು.

Siddaramaiah in back seat
ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸಂವಿಧಾನ ದಿನಾಚರಣೆಗೆ ಭರ್ಜರಿ ಸಿದ್ಧತೆ; ಖರ್ಗೆ ಸೇರಿ ಹೈಕಮಾಂಡ್ ನಾಯಕರಿಗೆ ಆಹ್ವಾನ..!

ಸೋನಿಯಾ ಪುಸ್ತಕ ಬಿಡುಗಡೆ ಕಾರ್ಯಕ್ರಮ

ದೆಹಲಿಯಲ್ಲಿ ನಡೆದ ಸೋನಿಯಾ ಅವರ ''ಬಿಲಾಂಗಿಂಗ್: ಎ ಜರ್ನಿ ಆಫ್ ಲವ್'' ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾರತ ಮೈತ್ರಿಕೂಟದ ಹಲವರು ಭಾಗವಹಿಸಿದ್ದರು. ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಮೊದಲ ಸಾಲಿನಲ್ಲಿ ಸೋನಿಯಾ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಇಂಡಿಯಾ ಒಕ್ಕೂಟದ ನಾಯಕರು ಕುಳಿತಿದ್ದರು.

ಹಿಂದಿನ ಸಾಲಿನಲ್ಲಿ ಕುಳಿತಿದ್ದ ಸಿದ್ದರಾಮಯ್ಯ

2ನೇ ಸಾಲಿನಲ್ಲಿ ಕಾಂಗ್ರೆಸ್ ಸಿಎಂಗಳಾದ ಡಿ.ಕೆ.ಶಿವಕುಮಾರ್, ರೇವಂತ್ ರೆಡ್ಡಿ ಸೇರಿ ವಿವಿಧ ರಾಜ್ಯಗಳ ನಾಯಕರು ಆಸೀನರಾಗಿದ್ದರು. ಆದರೆ, ಸಿದ್ದರಾಮಯ್ಯ ಐದನೇ ಸಾಲಿನಲ್ಲಿ ಆಸೀನರಾಗಿದ್ದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಕಾರ್ಯಕ್ರಮಕ್ಕೆ ತಾವು ತಡವಾಗಿ ಆಗಮಿಸಿದ್ದರಿಂದ ಮುಂದಿನ ಸಾಲುಗಳು ಭರ್ತಿಯಾಗಿದ್ದವು. ಈ ಕಾರಣಕ್ಕೆ ತಾವೇ ಹಿಂದಿನ ಸಾಲಿನಲ್ಲಿ ಕುಳಿತುಕೊಂಡಿದ್ದಾಗಿ ತಿಳಿಸಿದ್ದಾರೆ.

ಪುಸ್ತಕ ಓದಿದ್ದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪುಸ್ತಕವನ್ನು ಇನ್ನೂ ಓದಿಲ್ಲ. ಕಾರ್ಯಕ್ರಮ ಬಹಳ ಚೆನ್ನಾಗಿತ್ತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಯವರು ಕೂಡ ಚೆನ್ನಾಗಿ ಮಾತನಾಡಿದರು, ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದೆ ಅದು ಬಿಟ್ಟರೆ ಬೇರೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X