'ಕೆಲವು ಲೆಕ್ಕಾಚಾರಗಳನ್ನು ತಣ್ಣಗೇ ಮುಗಿಸಬೇಕು': ಉಗ್ರ ಲತೀಫ್ ಭಟ್ ಎನ್ಕೌಂಟರ್ ಬೆನ್ನಲ್ಲೇ CRPF ಮುಖ್ಯಸ್ಥರ ಪೋಸ್ಟ್ ವೈರಲ್!

ಉಗ್ರ ಲತೀಫ್ ಭಟ್ ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ. ಜುಲೈ 22ರಂದು ಅನಂತನಾಗ್‌ನಲ್ಲಿ ಪೊಲೀಸರ ಮೇಲೆ ನಡೆದ ದಾಳಿಯಲ್ಲೂ ಈತ ಭಾಗಿಯಾಗಿದ್ದ.
CRPF chief GP Singh on Latif Bhats killing
ಉಗ್ರ ಲತೀಫ್ ಭಟ್ ಹತ
Updated on: 

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಗೆ ತಲೆನೋವಾಗಿದ್ದ ಲಷ್ಕರ್ ಉಗ್ರ ಲತೀಫ್ ಭಟ್ ಎನ್ಕೌಂಟರ್ ಕುರಿತು CRPF ಮುಖ್ಯಸ್ಥ ಜಿಪಿ ಸಿಂಗ್ ಮಾಡಿರುವ ಪೋಸ್ಟ್ ವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಉಗ್ರ ಲತೀಫ್ ಭಟ್ ಹತನಾಗಿದ್ದು, ಕಾರ್ಯಾಚರಣೆಯ ವೇಳೆ ಉಗ್ರನ ಮೃತದೇಹ ಮತ್ತು ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ.

ಮೃತದೇಹದ ಗುರುತು ಪತ್ತೆ ಪ್ರಕ್ರಿಯೆ ನಡೆಯುತ್ತಿತ್ತು ಎನ್ನಲಾಗಿದೆ.

ಉಗ್ರ ಲತೀಫ್ ಭಟ್ ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ. ಜುಲೈ 22ರಂದು ಅನಂತನಾಗ್‌ನಲ್ಲಿ ಪೊಲೀಸರ ಮೇಲೆ ನಡೆದ ದಾಳಿಯಲ್ಲೂ ಈತ ಭಾಗಿಯಾಗಿದ್ದ. ಆ ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದರು.

CRPF chief GP Singh on Latif Bhats killing
Kulgam Encounter: LeT ಸಂಘಟನೆಯ ಪ್ರಮುಖ ಉಗ್ರ ಲತೀಫ್ ಭಟ್ ಹೊಡೆದುರುಳಿಸಿದ ಭಾರತೀಯ ಸೇನೆ! ಮಸೀದಿಯಲ್ಲಿ ಅಡಗಿದ್ದ ಭಯೋತ್ಪಾದಕ!

ಕೆಲವು ಲೆಕ್ಕಾಚಾರಗಳನ್ನು ತಣ್ಣಗೇ ಮುಗಿಸಬೇಕು

ಏತನ್ಮಧ್ಯೆ ಲತೀಫ್ ಭಟ್ ಹತ್ಯೆಯ ಬಗ್ಗೆ ಸಿಆರ್‌ಪಿಎಫ್ ಮುಖ್ಯಸ್ಥ ಜಿಪಿ ಸಿಂಗ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. "ಅಭಿನಂದನೆಗಳು ಗೆಳೆಯರೇ. ಕೆಲವು ಲೆಕ್ಕಾಚಾರಗಳನ್ನು ಚಳಿಯ ವಾತಾವರಣದಲ್ಲೂ ತಣ್ಣಗಾಗಿಯೇ ಮುಗಿಸುವುದು ಉತ್ತಮ" ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಇದು ಉಗ್ರನ ಹತ್ಯೆಯನ್ನು ಉಲ್ಲೇಖಿಸಿ ಮಾಡಿರುವ ಪರೋಕ್ಷ ಹೇಳಿಕೆ ಎಂದು ವಿಶ್ಲೇಷಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೂಡ ಎಕ್ಸ್‌ನಲ್ಲಿ 'ನೀವು ಓಡಿಹೋಗಬಹುದು, ಆದರೆ ಅಡಗಿಕೊಳ್ಳಲು ಸಾಧ್ಯವಿಲ್ಲ' ಎಂಬ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಉಗ್ರರ ಚಲನವಲನ

ನವೆಂಬರ್ 11ರಂದು ಸಿಆರ್‌ಪಿಎಫ್ ಚೆಕ್‌ಪೋಸ್ಟ್ ಮೇಲೆ ದಾಳಿ ನಡೆಸುವ ಮೊದಲು ಲತೀಫ್ ಭಟ್ ಮತ್ತು ಉಮರ್ ನಿಸಾರ್ ದಾರ್ ವಿವಿಧ ಸ್ಥಳಗಳಲ್ಲಿ ಸುತ್ತಾಡಿ ಮಾಹಿತಿ ಸಂಗ್ರಹಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ನವೆಂಬರ್ 10ರಂದು ಇಬ್ಬರೂ ಮಿರ್ ಬಜಾರ್, ಅಖ್ರಾನ್, ಹಬ್ಲಿಶ್ ಮತ್ತು ಕಿಲಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಚರಿಸಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸೂಕ್ತ ಸ್ಥಳಗಳನ್ನು ಗುರುತಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮರುದಿನ ಅಖ್ರಾನ್‌ನಲ್ಲಿರುವ ಸಿಆರ್‌ಪಿಎಫ್ ಚೆಕ್‌ಪೋಸ್ಟ್ ಮೇಲೆ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಇಬ್ಬರ ಗುರುತು ಪತ್ತೆಯಾಗಿತ್ತು.

ಇತ್ತ, ಉಮರ್ ನಿಸಾರ್ ದಾರ್ ಕಾಣೆಯಾಗಿದ್ದಾನೆ ಎಂದು ಆತನ ಕುಟುಂಬದವರು ಕುಲ್ಗಾಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತನಿಖೆಯಲ್ಲಿ ಆತ ಕಳೆದ ಐದರಿಂದ ಆರು ತಿಂಗಳಿನಿಂದ ಲತೀಫ್ ಭಟ್‌ಗೆ ಆಶ್ರಯ ಮತ್ತು ಇತರ ನೆರವು ನೀಡುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X