

ನವದೆಹಲಿ: ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪಾಲ್ಗೊಂಡು ಫಿಲಿಪ್ಪೀನ್ಸ್‌ನಿಂದ ಹಿಂತಿರುಗಿದ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟ ಸಭೆ ನಡೆಸಿದ್ದು, ಈ ವೇಳೆ ಭಾವೋದ್ವೇಗಕ್ಕೆ ಒಳಗಾದ ಪ್ರಸಂಗ ನಡೆದಿದೆ.
ಸಚಿವ ಸಂಪುಟ ಸಭೆಯಲ್ಲಿ ಡ್ರಗ್ಸ್ ಹಾವಳಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಮೋದಿ ಭಾವೋದ್ವೇಗಕ್ಕೆ ಒಳಗಾದರು.
ಈ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಅಗತ್ಯವನ್ನು ಪ್ರಧಾನಿ ಮೋದಿ ಅವರು ಸಚಿವ ಸಂಪುಟದ ಸಭೆಯಲ್ಲಿ ಒತ್ತಿ ಹೇಳಿದರು.
ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್‌ನಲ್ಲಿ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷದ ಸರ್ಕಾರ ಮಾದಕ ದ್ರವ್ಯ ಸಮಸ್ಯೆಯನ್ನು ನಿಭಾಯಿಸುವ ಬಗ್ಗೆ ವಿವಾದ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಮಹತ್ವ ಪಡೆದಿವೆ.
ಭಾವೋದ್ವೇಗದ ಧ್ವನಿಯಲ್ಲಿದ್ದ ಪ್ರಧಾನಿ ಮೋದಿ, ಯುವಕರನ್ನು ಮಾದಕ ವಸ್ತುಗಳಿಂದ ರಕ್ಷಿಸುವ ಅಗತ್ಯದ ಬಗ್ಗೆ ಮಾತನಾಡಿದ್ದಾರೆ.
ನಕ್ಸಲಿಸಂ ತೊಡೆದುಹಾಕಲು ಸಾಧ್ಯವಾದರೆ, ಡ್ರಗ್ಸ್ ಸಮಸ್ಯೆಯನ್ನೂ ನಿರ್ಮೂಲನೆ ಮಾಡಬಹುದು ಎಂದು ಪ್ರಧಾನಿ ಪ್ರತಿಪಾದಿಸಿದರು.
ಇನ್ನು CRPF ಛತ್ತೀಸ್‌ಗಢದ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಥಿಯೇಟರ್‌ನಿಂದ 1,000 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಒಳಗೊಂಡ ಬೆಟಾಲಿಯನ್ ನ್ನು ಹಿಂಪಡೆದು ಮಣಿಪುರಕ್ಕೆ ನಿಯೋಜಿಸಲು ಕಳುಹಿಸಿದೆ. ಭಾರತದಲ್ಲಿ ನಕ್ಸಲಿಸಂ ಮಾರ್ಚ್‌ನಲ್ಲಿ ಕೊನೆಗೊಂಡಿತು ಎಂದು ಕೇಂದ್ರ ಸರ್ಕಾರದ ಘೋಷಣೆಯ ನಂತರ ಯಾವುದೇ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ಘಟಕದ ಮೊದಲ ಡಿ-ಇಂಡಕ್ಷನ್ ನ್ನು ಈ ಬೆಳವಣಿಗೆ ಗುರುತಿಸುತ್ತದೆ.