

ತಿರುಚಿರಾಪಳ್ಳಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದರಲ್ಲಿ ಕರ್ನಾಟಕ ಸರ್ಕಾರದ ವಿಳಂಬ ಹಾಗೂ ಸಿಎಂ ಡಿಕೆ ಶಿವಕುಮಾರ್ ಅವರ ಮೇಕೆದಾಟು ಅಣೆಕಟ್ಟು ನಿಲುವನ್ನು ವಿರೋಧಿಸಿ 'ನ್ಯಾಷನಲ್ ಸೌತ್ ಇಂಡಿಯನ್ ರಿವರ್ಸ್ ಇಂಟರ್ಲಿಂಕಿಂಗ್ ಫಾರ್ಮರ್ಸ್ ಅಸೋಸಿಯೇಷನ್' ಸಂಘಟನೆಯ ರೈತರು ತಿರುಚಿರಾಪಳ್ಳಿಯಲ್ಲಿ ಕಾವೇರಿ ನದಿಯ ಮರಳಿನಲ್ಲಿ ತಮ್ಮ ದೇಹವನ್ನು ಹೂತುಕೊಂಡು ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲೇಬೇಕೆಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪದೇ ಪದೇ ನೀಡುತ್ತಿರುವ ಹೇಳಿಕೆಗಳ ವಿರುದ್ಧವೂ ರೈತರು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ಕಾವೇರಿ ನದಿಯು ನೀರಿನ ಪ್ರಮುಖ ಮೂಲವಾಗಿದ್ದು, ಈ ನದಿ ಹರಿಯುವ ಜಿಲ್ಲೆಗಳ ರೈತರ ಜೀವನಾಡಿಯಾಗಿದೆ. ಈ ಜಿಲ್ಲೆಗಳಲ್ಲಿನ ಸಾವಿರಾರು ರೈತರು ತಮ್ಮ ಕೃಷಿ ಚಟುವಟಿಕೆಗಳಿಗಾಗಿ ಈ ನದಿಯ ನೀರನ್ನೇ ಅವಲಂಬಿಸಿದ್ದು, ತಮಿಳುನಾಡಿಗೆ ಸಲ್ಲಬೇಕಾದ ಕಾವೇರಿ ನೀರಿನ ನ್ಯಾಯಯುತ ಪಾಲನ್ನು ಬಿಡುಗಡೆ ಮಾಡಬೇಕೆಂಬುದು ರೈತರು ಆಗ್ರಹಿಸಿದ್ದಾರೆ.
ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವ ಯೋಜನೆಯು ಜಾರಿಯಾದರೆ ತಮಿಳುನಾಡಿಗೆ ಹರಿದು ಬರುವ ನೀರಿನ ಪ್ರಮಾಣದ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ವ್ಯಕ್ತಪಡಿಸಿರುವ ತಮಿಳುನಾಡಿನ ರೈತರು ವ್ಯಕ್ತಪಡಿಸಿದ್ದಾರೆ.