'ನಿಷೇಧಿಸುವ ಬದಲು ನಿಯಂತ್ರಿಸೋದು ಉತ್ತಮ': ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ; ರಾಜ್ಯ ಸರ್ಕಾರದ ಮೇಲ್ಮನವಿ ವಜಾ

ಇದರೊಂದಿಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ ತೆರವುಗೊಂಡಿದೆ. ಆದರೆ, ಬೈಕ್ ಟ್ಯಾಕ್ಸಿ ನಿರ್ವಾಹಕರಿಗೆ ಕೆಲವು ಷರತ್ತುಗಳನ್ನು ವಿಧಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
High court bike taxi(File photo)
ಹೈಕೋರ್ಚ್ ಬೈಕ್ ಟ್ಯಾಕ್ಸಿ(ಸಂಗ್ರಹ ಚಿತ್ರ)
Updated on: 

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧವನ್ನು ತೆರವುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ ತೆರವುಗೊಂಡಿದೆ. ಆದರೆ, ಬೈಕ್ ಟ್ಯಾಕ್ಸಿ ನಿರ್ವಾಹಕರಿಗೆ ಕೆಲವು ಷರತ್ತುಗಳನ್ನು ವಿಧಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

High court bike taxi(File photo)
ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್ ಟ್ಯಾಕ್ಸಿ ಓಡಿಸಲು ಅನುಮತಿ ಕೊಡಿ, ಇದರಿಂದ 8 ಕೋಟಿ ಉದ್ಯೋಗ ಸೃಷ್ಟಿ: ರಾಜ್ಯಗಳಿಗೆ ನಿತಿನ್ ಗಡ್ಕರಿ ಮನವಿ

ಕರ್ನಾಟಕ ಸರ್ಕಾರದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸಿ. ಶರ್ಮಾ, "ಯುವತಿಯರಿಗೆ ಬೈಕ್ ಟ್ಯಾಕ್ಸಿಗಳು ಹೆಚ್ಚು ಸುರಕ್ಷಿತವಾಗಿವೆ. ಏಕೆಂದರೆ ಅವುಗಳಲ್ಲಿ ಜಿಪಿಎಸ್ ವ್ಯವಸ್ಥೆಯೂ ಇದೆ. ನಿಷೇಧಿಸುವ ಬದಲು ನಿಯಂತ್ರಿಸುವುದು ಉತ್ತಮ. ಈಗಾಗಲೇ 25 ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ವಿವಿಧ ಸಾರಿಗೆ ಸಂಘಟನೆಗಳನ್ನು ಪ್ರತಿನಿಧಿಸುವ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟವು ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ರೈಡ್-ಹೇಲಿಂಗ್ ಕಂಪನಿಗಳು ಒದಗಿಸುವ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸುವ ಸುಗ್ರೀವಾಜ್ಞೆ ಹೊರಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಈ ಕುರಿತು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಸಾರಿಗೆ ಇಲಾಖೆ ನಿರಾಕರಿಸಿದೆ. ಮೊದಲು ನ್ಯಾಯಾಲಯದ ಅಧಿಕೃತ ಆದೇಶವನ್ನು ಪರಿಶೀಲಿಸಬೇಕಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X