

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಾತೃವಿಯೋಗವಾಗಿದ್ದು, ಅವರ 91 ವರ್ಷ ವಯಸ್ಸಿನ ತಾಯಿ ಸಾವಿತ್ರಿ ದೇವಿ ಅವರು ಶುಕ್ರವಾರ ನಿಧನರಾಗಿದ್ದಾರೆ.
ಉತ್ತರಾಖಂಡದ ಪೌರಿ ಗಢ್ವಾಲ್ ಜಿಲ್ಲೆಯ ಪಂಚೂರ್ ಗ್ರಾಮದಲ್ಲಿರುವ ತಮ್ಮ ಪೂರ್ವಜರ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರು ಪಂಚೂರ್‌ನಲ್ಲಿರುವ ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ ಎಂದು ಪೌರಿ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸರ್ವೇಶ್ ಕುಮಾರ್ ದೃಢಪಡಿಸಿದ್ದಾರೆ. ಈ ವೇಳೆ ಮನೆಗೆ ವೈದ್ಯರನ್ನೂ ಕರೆಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಪೌರಿ ಜಿಲ್ಲಾ ಮಾಹಿತಿ ಅಧಿಕಾರಿ ಯೋಗೇಶ್ ಪೋಖ್ರಿಯಾಲ್ ಕೂಡ ಸಾವಿತ್ರಿ ದೇವಿ ಅವರ ನಿಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ.