ಕರ್ನಾಟಕವನ್ನು ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ಪ್ರಚೋದಿಸುತ್ತಿದೆ, ಇದು ತಮಿಳುನಾಡಿಗೆ ಮಾಡಿದ ದ್ರೋಹ: MDMK ವೈಕೋ; Video

ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ನವೆಂಬರ್ 28ರಂದು ತಂಜಾವೂರಿನಲ್ಲಿ ತಮ್ಮ ಪಕ್ಷ ಹಾಗೂ ಹಲವು ರೈತ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಅವರು ಘೋಷಿಸಿದ್ದಾರೆ.
 MDMK chief Vaiko
ಎಂಡಿಎಂಕೆ ಮುಖ್ಯಸ್ಥ ವೈಕೋ
Updated on: 

ಎಂಡಿಎಂಕೆ (MDMK) ಮುಖ್ಯಸ್ಥ ವೈಕೋ, ರಾಜ್ಯದಲ್ಲಿ ತನ್ನ ರಾಜಕೀಯ ಬಲವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಕರ್ನಾಟಕ ಸರ್ಕಾರವನ್ನು ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಮುಂದುವರಿಸುವಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಚೋದಿಸುತ್ತಿದೆ ಎಂದು ಆರೋಪಿಸಿದ್ದಾರೆ. ಈ ನಡೆ ತಮಿಳುನಾಡಿಗೆ ಮಾಡಿದ ದ್ರೋಹವಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ನವೆಂಬರ್ 28ರಂದು ತಂಜಾವೂರಿನಲ್ಲಿ ತಮ್ಮ ಪಕ್ಷ ಹಾಗೂ ಹಲವು ರೈತ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಅವರು ಘೋಷಿಸಿದ್ದಾರೆ.

11 ಟಿಎಂಸಿ ಸೇರಿದಂತೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ಬಗ್ಗೆ ಕೇಳಲಾದ ಪ್ರಶ್ನೆಗೆ ವೈಕೋ ಪ್ರತಿಕ್ರಿಯಿಸಿದರು.

 MDMK chief Vaiko
'ನಮ್ಮಲ್ಲಿ ನೀರಿದ್ದರೆ ಖಂಡಿತ ತಮಿಳುನಾಡಿಗೆ ಕೊಡ್ತೇವೆ, ಈ ವರ್ಷ ಕುಡಿಯುವ ನೀರಿಗೇ ತತ್ವಾರವಾಗಿದೆ': ಸಿಎಂ; Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X