ಕಲಬೆರಕೆ ಮದ್ಯ ಸೇವನೆ: ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ, 300ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಕಲಬೆರಕೆ ಮದ್ಯ ಸೇವನೆಯಿಂದ ಅಸ್ವಸ್ಥಗೊಂಡ 300ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಹೆಚ್ಚಿನವರು ಗುಡ್ಡಗಾಡು ಜಿಲ್ಲೆಯ ಚಕ್ಪಿಕರಾಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಾಗಿದ್ದಾರೆ.
Chief Minister Khemchand Yumnam visiting those undergoing treatment
ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಖೇಮಚಂದ್ ಯುಮ್ನಾಮ್
Updated on: 

ಇಂಫಾಲ್: ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಕಲಬೆರಕೆ ಮದ್ಯ ಸೇವನೆಯಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಲಬೆರಕೆ ಮದ್ಯ ಸೇವನೆಯಿಂದ ಅಸ್ವಸ್ಥಗೊಂಡ 300ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಹೆಚ್ಚಿನವರು ಗುಡ್ಡಗಾಡು ಜಿಲ್ಲೆಯ ಚಕ್ಪಿಕರಾಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಾಗಿದ್ದಾರೆ. ಇಂಫಾಲ್‌ನ ಜೆಎನ್‌ಐಎಂಎಸ್, ಆರ್‌ಐಎಂಎಸ್, ಶಿಜಾ ಮತ್ತು ಬಬಿನಾ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ಶುಕ್ರವಾರ ರಾತ್ರಿ 9 ಗಂಟೆಯವರೆಗೆ 13 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಕಲಬೆರಕೆ ಮದ್ಯ ಸೇವನೆಯಿಂದ ಮೆಥನಾಲ್ ವಿಷಪ್ರಾಶನಕ್ಕೆ ಒಳಗಾಗಿರುವ ಶಂಕೆಯ ಮೇರೆಗೆ 346 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Chief Minister Khemchand Yumnam visiting those undergoing treatment
ಮಣಿಪುರ: ಶಂಕಿತ ಉಗ್ರರಿಂದ ಎರಡು ಕಾರುಗಳ ಮೇಲೆ ಗುಂಡಿನ ದಾಳಿ; ನಾಲ್ವರು ಸಾವು

ಮುಖ್ಯಮಂತ್ರಿ ಯುಮ್ನಮ್ ಖೇಮ್‌ಚಂದ್ ಸಿಂಗ್ ಅವರು ಶುಕ್ರವಾರ ಮಧ್ಯಾಹ್ನ ಶಿಜಾ ಮತ್ತು ಬಬಿನಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅಲ್ಲದೆ, ಎರಡೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಚಾಂಡೆಲ್ ಜಿಲ್ಲೆಯ ಚಕ್ಪಿಕರಾಂಗ್ ಪ್ರದೇಶದಿಂದ ಕಲಬೆರಕೆ ಮದ್ಯ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಲು ಲಾಂಫೆಲ್‌ಪಟ್‌ನಲ್ಲಿರುವ ಶಿಜಾ ಆಸ್ಪತ್ರೆ ಮತ್ತು ಸಜಿವಾದಲ್ಲಿರುವ ಬಬಿನಾ ಆಸ್ಪತ್ರೆಗೆ ಭೇಟಿ ನೀಡಿದ್ದೆ ಎಂದು ತಿಳಿಸಿದ್ದಾರೆ.

ಚಾಂಡೆಲ್ ಜಿಲ್ಲಾಡಳಿತ ತುರ್ತು ಸ್ಪಂದನಾ ಕ್ರಮಗಳನ್ನು ತೀವ್ರಗೊಳಿಸಿದ್ದು, ಪರಿಸ್ಥಿತಿಯ ಸಮನ್ವಯ ಮೇಲ್ವಿಚಾರಣೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸಾಕಷ್ಟು ಔಷಧಗಳು ಮತ್ತು ಆಮ್ಲಜನಕದ ಪೂರೈಕೆಯೊಂದಿಗೆ ನಾಲ್ಕು ಕ್ಷಿಪ್ರ ಸ್ಪಂದನಾ ತಂಡಗಳನ್ನು ಜಿಲ್ಲೆಯಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X