ದೇಶ

ಧ್ರುವ್ ರಾಠಿಗೆ ಬಿಗ್ ಶಾಕ್: ದೆಹಲಿ ಕೋರ್ಟ್'ನಿಂದ ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಧ್ರುವ್ ರಾಠಿ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋಗೆ ಸಂಬಂಧಿಸಿದಂತೆ, ವಿಕಾಸ್ ಸಂಸ್ಕೃತ್ಯಾಯನ್ ಅಲಿಯಾಸ್ ವಿಕಾಸ್ ಪಾಂಡೆ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಧ್ರುವ್ ರಾಠಿಗೆ ಬಿಗ್ ಶಾಕ್: ದೆಹಲಿ ಕೋರ್ಟ್'ನಿಂದ ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ಧ್ರುವ್ ರಾಠಿ
Published On :

ನವದೆಹಲಿ: 2018ರ ಮಾನನಷ್ಟ ಮೊಕದ್ದಮೆ ಪ್ರಕರಣವೊಂದರಲ್ಲಿ, ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ದೆಹಲಿ ಕೋರ್ಟ್ ಸೋಮವಾರ ಜಾಮೀನು ರಹಿತ ಬಂಧನ ವಾರಂಟ್(NBW) ಹೊರಡಿಸಿದೆ.

ಧ್ರುವ್ ರಾಠಿ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋಗೆ ಸಂಬಂಧಿಸಿದಂತೆ, ವಿಕಾಸ್ ಸಂಸ್ಕೃತ್ಯಾಯನ್ ಅಲಿಯಾಸ್ ವಿಕಾಸ್ ಪಾಂಡೆ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣ ಸಂಬಂಧ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅನಮ್ ರೈಸ್ ಖಾನ್ ಅವರು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದ್ದಾರೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ನಿಗದಿಪಡಿಸಲಾಗಿದೆ. ಈ ಕುರಿತಾದ ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.

ಇದಕ್ಕೂ ಮುನ್ನ, ಅಕ್ಟೋಬರ್ 31ರಂದು ನ್ಯಾಯಾಲಯವು ರಾಠಿ ವಿರುದ್ಧ ಜಾಮೀನು ಪಡೆಯಬಹುದಾದ ವಾರಂಟ್‌(bailable warrants) ಹೊರಡಿಸಿತ್ತು.

ಅಕ್ಟೋಬರ್ 17ರಂದು, ನೋಟಿಸ್ ಜಾರಿ ಮಾಡಲು ಹೋದ ಅಧಿಕಾರಿ(process server), ರಾಠಿ ಅವರ ಮನೆಗೆ ಬೀಗ ಹಾಕಿರುವುದಾಗಿ ಹೇಳಿದ ನಂತರ, ನ್ಯಾಯಾಲಯವು ಅವರ ವಿರುದ್ಧ ಜಾಮೀನು ಪಡೆಯಬಹುದಾದ ವಾರಂಟ್‌ ಹೊರಡಿಸಿತ್ತು. ಅಲ್ಲದೆ, ಹರಿಯಾಣದ ಗುರುಗ್ರಾಮ್‌ನಲ್ಲಿರುವ ಅವರ ವಿಳಾಸಕ್ಕೆ ನ್ಯಾಯಾಲಯವು ಹೊಸದಾಗಿ ಸಮನ್ಸ್ ಕೂಡ ಕಳುಹಿಸಿತ್ತು.

ರಾಠಿ ಅವರು ಸಾಮಾನ್ಯವಾಗಿ ಆಸ್ಟ್ರಿಯಾದಲ್ಲಿ ವಾಸಿಸುತ್ತಿದ್ದು, ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ' (Cockroach Janata Party) ಪ್ರತಿಭಟನೆಗಾಗಿ ಭಾರತಕ್ಕೆ ಬಂದಿದ್ದರು ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು.

ರಾಠಿ ಅವರಿಗೆ ಮೊದಲ ಬಾರಿಗೆ ಜುಲೈ 2019ರಲ್ಲಿ ಸಮನ್ಸ್ ನೀಡಲಾಗಿತ್ತು ಎಂಬುದನ್ನು ನ್ಯಾಯಾಲಯ ಗಮನಿಸಿದೆ.

ರಾಠಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಕಾಸ್ ಪಾಂಡೆ ಅವರ ವಿರುದ್ಧ ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ ನಂತರ, ಪಾಂಡೆ ಅವರು 2018ರಲ್ಲಿ ಈ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.