ದೆಹಲಿ: ಕೆಫೆಯೊಂದರಲ್ಲಿ ಯುವತಿ ಮೇಲೆ ಗ್ಯಾಂಗ್ರೇಪ್; ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಕೆಫೆ ಮುಚ್ಚಿದ ನಂತರ ನಡೆದಿದೆ ಎಂದು ಹೇಳಲಾಗಿದ್ದು, ಉಳಿದ ಶಂಕಿತರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ನವದೆಹಲಿ: ಪೂರ್ವ ದೆಹಲಿಯ ಪ್ರೀತ್ ವಿಹಾರ್‌ನಲ್ಲಿರುವ ಕೆಫೆಯೊಂದರಲ್ಲಿ, ನ. 23ರಂದು ರಾತ್ರಿ 22 ವರ್ಷದ ಯುವತಿಯೊಬ್ಬಳ ಮೇಲೆ ಆಕೆಯ ಸಹೋದ್ಯೋಗಿಗಳೇ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಯುವತಿ ಮತ್ತು ಆರೋಪಿಗಳು ಒಂದೇ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸೋಮವಾರ ರಾತ್ರಿ ಸಹೋದ್ಯೋಗಿಗಳೊಂದಿಗೆ ಪ್ರೀತ್ ವಿಹಾರ್‌ನಲ್ಲಿರುವ 'ಸಲ್ತಾನತೆ ಕೆಫೆ'ಯಲ್ಲಿ ನಡೆದ ಪಾರ್ಟಿಯೊಂದರಲ್ಲಿ ತಾನು ಭಾಗವಹಿಸಿದ್ದಾಗಿ ತಿಳಿಸಿದ್ದಾಳೆ.
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಕೆಫೆ ಮುಚ್ಚಿದ ನಂತರ ನಡೆದಿದೆ ಎಂದು ಹೇಳಲಾಗಿದ್ದು, ಉಳಿದ ಶಂಕಿತರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ರಾತ್ರಿ 11.30ಕ್ಕೆ ಕೆಫೆ ಮುಚ್ಚಲಾಗಿತ್ತು, ಆದರೆ ಗುಂಪಿನಲ್ಲಿದ್ದ ಒಬ್ಬರ ಬಳಿ ಆ ಸ್ಥಳದ ಕೀಲಿ ಕೈಗಳಿದ್ದವು. ಮೂವರು ಮಹಿಳೆಯರು ಮತ್ತು ನಾಲ್ವರು ಪುರುಷರಿದ್ದ ಈ ಗುಂಪು, ಮೊದಲು ಒಂದು ಕೆಫೆಯಲ್ಲಿ ಸೇರಿತ್ತು. ಬಳಿಕ ಅವರು ಮುಂಜಾನೆ 3 ಗಂಟೆ ಸುಮಾರಿಗೆ ಪ್ರೀತ್ ವಿಹಾರ್‌ನಲ್ಲಿರುವ ಮತ್ತೊಂದು ಕೆಫೆಗೆ ತಲುಪಿದರು. ಈ ಕೆಫೆಯಲ್ಲಿ ಆರೋಪಿಗಳಲ್ಲಿ ಒಬ್ಬರು ಕೆಲಸ ಮಾಡುತ್ತಿದ್ದ.
ಮುಂಜಾನೆ 3.30ರ ಸುಮಾರಿಗೆ ಇಬ್ಬರು ಪುರುಷರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಗುಂಪಿನಲ್ಲಿದ್ದ ಇತರರು ಈ ಕೃತ್ಯಕ್ಕೆ ಸಹಕರಿಸಿದ್ದಾರೆ ಎಂದು ಹೇಳಲಾಗಿದೆ. ಈ ಏಳು ಮಂದಿಯೂ ಕೆಫೆಯಲ್ಲಿ ಮದ್ಯಪಾನ ಮಾಡಿದ್ದರು ಎಂದು ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾರ್ಟಿ ನಡೆಯುತ್ತಿದ್ದಾಗ ತಾನು ತನ್ನ ತಾಯಿಗೆ ಕರೆ ಮಾಡಿ, ಮನೆಗೆ ಮರಳಲು ತಡವಾಗುತ್ತದೆ ಎಂದು ತಿಳಿಸಿದ್ದಾಗಿ ಸಂತ್ರಸ್ತೆ ಪೊಲೀಸರಿಗೆ ಹೇಳಿದ್ದಾರೆ. ಘಟನೆಯ ನಂತರ, ಗುಂಪಿನಲ್ಲಿದ್ದವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಿದರು. ಸಂತ್ರಸ್ತೆ ಮುಂಜಾನೆ 5.30ರ ಸುಮಾರಿಗೆ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದರು. ಇದರ ಆಧಾರದ ಮೇಲೆ, ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಕಾನೂನು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



