ದೇಶ

ಅನಾಮಧೇಯ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ದಾಖಲೆಯ 121 ಕೆಜಿ ಚಿನ್ನ ಕಾಣಿಕೆ!

ಅನಾಮಧೇಯ ಭಕ್ತನಿಂದ ತಿರುಪತಿ ತಿಮ್ಮಪ್ಪನಿಗೆ ದಾಖಲೆಯ 121 ಕೆಜಿ ಚಿನ್ನ ಕಾಣಿಕೆ!
ತಿರುಪತಿ ತಿರುಮಲ ದೇವಾಲಯ (ಸಂಗ್ರಹ ಚಿತ್ರ)
Published On :

ತಿರುಪತಿ: ಅನಾಮಧೇಯ ಅನಿವಾಸಿ ಭಾರತೀಯ(ಎನ್‌ಆರ್‌ಐ) ಭಕ್ತರೊಬ್ಬರು ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ಕ್ಕೆ ದಾಖಲೆಯ 121 ಕೆಜಿ ಚಿನ್ನದ ಆಭರಣಗಳನ್ನು ಕಾಣಿಕೆಯಾಗಿ ನೀಡಲು ಸಜ್ಜಾಗಿದ್ದಾರೆ.

ಸುಮಾರು 160 ಕೋಟಿಯಿಂದ 206 ಕೋಟಿ ರೂಪಾಯಿ ಮೌಲ್ಯದ ಈ ಚಿನ್ನದ ಆಭರಣಗಳನ್ನು ಗುರುವಾರ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಟಿಟಿಡಿಗೆ ಹಸ್ತಾಂತರಿಸಲಾಗುತ್ತಿದೆ.

ಈ ಬೃಹತ್ ಕಾಣಿಕೆಯಲ್ಲಿ ಒಟ್ಟು 45 ಚಿನ್ನದ ಆಭರಣಗಳಿದ್ದು, ಅವುಗಳನ್ನು ಒಂಬತ್ತು ಪ್ರತ್ಯೇಕ ಸೆಟ್‌ಗಳಾಗಿ ಸಿದ್ಧಪಡಿಸಲಾಗಿದೆ. ಮೂಲ ವಿಗ್ರಹ ಹಾಗೂ ಉತ್ಸವ ಮೂರ್ತಿಗಳಿಗೆ ಅಲಂಕರಿಸಲು ಅನುಕೂಲವಾಗುವಂತೆ ವಿಶೇಷ ವಿನ್ಯಾಸದಲ್ಲಿ ಆಭರಣಗಳನ್ನು ತಯಾರಿಸಲಾಗಿದೆ. ಶ್ರೀವಾರಿ ಕಿರೀಟ, ಪದ್ಮಪಾದಗಳು ಸೇರಿದಂತೆ ಹಲವು ಸಾಂಪ್ರದಾಯಿಕ ಆಭರಣಗಳು ಈ ಸಂಗ್ರಹದಲ್ಲಿವೆ.

ಈ ಆಭರಣಗಳನ್ನು ಚೆನ್ನೈ ಮೂಲದ ಜಿಆರ್‌ಟಿ ಜ್ಯುವೆಲ್ಲರ್ಸ್‌ನಲ್ಲಿ ವಿಶೇಷವಾಗಿ ತಯಾರಿಸಲಾಗಿದೆ. ಅವುಗಳನ್ನು ಬಿಗಿ ಭದ್ರತೆಯಲ್ಲಿ ತಿರುಮಲಕ್ಕೆ ತರಲಾಗಿದೆ. ವಿಶೇಷವಾಗಿ ನಿರ್ಮಿಸಲಾದ ಪ್ಲೈವುಡ್ ಪ್ರದರ್ಶನ ರ್ಯಾಕ್‌ಗಳನ್ನು ಬಳಸಿಕೊಂಡು ರಂಗನಾಯಕುಳ ಮಂಟಪದಲ್ಲಿ ಈ ಆಭರಣಗಳನ್ನು ಪ್ರದರ್ಶಿಸಲು ಟಿಟಿಡಿ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.

ನಿಗದಿತ ಕಾರ್ಯಕ್ರಮದ ಪ್ರಕಾರ, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಬೆಳಗ್ಗೆ ಸುಮಾರು 10 ಗಂಟೆಗೆ ತಿರುಪತಿಗೆ ಆಗಮಿಸಿ, ಬಳಿಕ ವೈಕುಂಠಂ ಕ್ಯೂ ಕಾಂಪ್ಲೆಕ್ಸ್ ಮೂಲಕ ಶ್ರೀವಾರಿ ದರ್ಶನ ಪಡೆಯಲಿದ್ದಾರೆ. ನಂತರ ಬೆಳಗ್ಗೆ ಸುಮಾರು 11.30ಕ್ಕೆ ನಡೆಯುವ ದಾನ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ದಾನಿಯು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿಗೆ ಆಭರಣಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಿದ್ದಾರೆ. ಆದರೆ ದಾನಿಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.