ಪತ್ನಿಯರ ನಿರಂತರ ಜಗಳಗಳಿಂದ ಬೇಸತ್ತ ಸಹೋದರರು: ಕೊಂದು ಶವ ಹೂತುಹಾಕಿದ ಗಂಡಂದಿರು; ನಾಪತ್ತೆ ದೂರು ದಾಖಲಿಸಿ ತಗ್ಲಾಕೊಂಡ್ರು!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ, ತಮ್ಮ ಪತ್ನಿಯರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಇಬ್ಬರು ಸಹೋದರರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ಸಂತ್ರಸ್ತರಾದ ಇಬ್ಬರು ಮಹಿಳೆಯರ ನಡುವೆ ದೀರ್ಘಕಾಲದಿಂದ ವಿವಾದವಿತ್ತು. ಆರೋಪಿಗಳಾದ ಶಿವ ಶಂಕರ್ ಸಾಹು (ಆಂಬ್ಯುಲೆನ್ಸ್ ಚಾಲಕ) ಮತ್ತು ಆತನ ಸಹೋದರ ನವೀನ್ ಸಾಹು, ಸೋಮವಾರ ತಮ್ಮ ಪತ್ನಿಯರಾದ ಮಿನಿ ಪ್ರಿಯಾ (28) ಮತ್ತು ರಾಧಿಕಾ ಕುಮಾರಿ (20) ಅವರನ್ನು ಹತ್ಯೆ ಮಾಡಿದ್ದಾರೆ.
ನಂತರ ಅವರು ಮೃತದೇಹಗಳನ್ನು ನೆರೆಯ ಸಿಮ್ಡೆಗಾ ಜಿಲ್ಲೆಯ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಹೂತುಹಾಕಿದ್ದಾರೆ ಎಂದು ಗುಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಹ್ಯಾರಿಸ್ ಬಿನ್ ಜಮಾ ತಿಳಿಸಿದ್ದಾರೆ.
ಈ ಇಬ್ಬರು ಮಹಿಳೆಯರ ನಡುವಿನ ಜಗಳದಿಂದ ಸಹೋದರರು ತೊಂದರೆಗೀಡಾಗಿದ್ದರು ಎಂದು ಹೇಳಲಾಗಿದೆ. ಆದರೆ, ಹತ್ಯೆ ನಡೆಯುವ ಎರಡು ದಿನಗಳ ಹಿಂದಷ್ಟೇ ಮಹಿಳೆಯರು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಂಡು ರಾಜಿ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಪೊಲೀಸರ ಬಳಿ ಆರಂಭದಲ್ಲಿ, ತಮ್ಮ ಪತ್ನಿಯರು ತಮಗೆ ತಿಳಿಸದೆ ಮನೆಯಿಂದ ಹೊರಟುಹೋಗಿದ್ದಾರೆ ಎಂದು ಸಹೋದರರು ಹೇಳಿದ್ದರು. ಆದರೆ, ತೀವ್ರ ವಿಚಾರಣೆಯ ನಂತರ ಅವರು ಅಪರಾಧವನ್ನು ಒಪ್ಪಿಕೊಂಡರು, ವಿಚಾರಣೆಯ ವೇಳೆ ಪಡೆದ ಮಾಹಿತಿಯ ಆಧಾರದ ಮೇಲೆ ಮೃತದೇಹಗಳನ್ನು ಪತ್ತೆಹಚ್ಚಲಾಯಿತು. ಸೋಮವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ತಾವು ಸಂತ್ರಸ್ತರೊಂದಿಗೆ ಮಾತನಾಡಿದ್ದಾಗ, ಎಲ್ಲವೂ ಸಹಜವಾಗಿಯೇ ಇತ್ತು ಎಂದು ಅವರ ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದರು.
ಕೊಲೆಗೆ ಬಳಸಲಾದ ಕೊಡಲಿ ಮತ್ತು ಮೃತದೇಹಗಳನ್ನು ಸಾಗಿಸಲು ಬಳಸಿದ ಆಂಬ್ಯುಲೆನ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಾದ ಪೋಷಕರು, ಸಾಮೆಶ್ವರ್ ಸಾಹು ಮತ್ತು ಟಿಲೇಶ್ವರಿ ದೇವಿ ಅವರನ್ನು ಕೂಡ ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



