ದೇಶ

ಸಂಸತ್ ಅಧಿವೇಶನ: ದೆಹಲಿಗೆ ಬರುವಂತೆ ಕಾಂಗ್ರೆಸ್ ಸಂಸದರಿಗೆ ಸೂಚನೆ; NCP-SP ಎಂಪಿಗಳಿಗೆ ವಿಪ್ ಜಾರಿ

ಸಂಸತ್ ಅಧಿವೇಶನ: ದೆಹಲಿಗೆ ಬರುವಂತೆ ಕಾಂಗ್ರೆಸ್ ಸಂಸದರಿಗೆ ಸೂಚನೆ; NCP-SP ಎಂಪಿಗಳಿಗೆ ವಿಪ್ ಜಾರಿ
ಸಂಸತ್ತು
Published On :

ನವದೆಹಲಿ: ಮುಂಬರುವ ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ನವೆಂಬರ್ 29ರ ಬೆಳಗ್ಗೆ 10 ಗಂಟೆಯೊಳಗೆ ಎಲ್ಲ ಸಂಸದರು ದೆಹಲಿಗೆ ಆಗಮಿಸುವಂತೆ ಕಾಂಗ್ರೆಸ್ ಸೂಚಿಸಿದೆ. ಇದೇ ವೇಳೆ, ನವೆಂಬರ್ 30ರಿಂದ ಡಿಸೆಂಬರ್ 4ರವರೆಗೆ ಲೋಕಸಭೆಯ ಕಲಾಪಗಳಿಗೆ ಕಡ್ಡಾಯವಾಗಿ ಹಾಜರಿರುವಂತೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್ (NCP-SP) ತನ್ನ ಸದಸ್ಯರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದೆ.

ಇಂದು ಹೊರಡಿಸಿರುವ ಪ್ರಕಟಣೆಯಲ್ಲಿ, ಪಕ್ಷದ ಮುಖ್ಯ ಸಚೇತಕ ಅಮೋಲ್ ಕೋಲ್ಹೆ, ಸದನದಲ್ಲಿ ಮಹತ್ವದ ಕಾರ್ಯಕಲಾಪಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಸದಸ್ಯರು ತಪ್ಪದೇ ಕಲಾಪಕ್ಕೆ ಹಾಜರಾಗಿ ಪಕ್ಷದ ನಿಲುವನ್ನು ಬೆಂಬಲಿಸುವಂತೆ ಸೂಚಿಸಿದ್ದಾರೆ.

ನವೆಂಬರ್ 30ರ ಸೋಮವಾರದಿಂದ ಡಿಸೆಂಬರ್ 4ರ ಶುಕ್ರವಾರದವರೆಗೆ ಲೋಕಸಭೆಯಲ್ಲಿ ಅತ್ಯಂತ ಮಹತ್ವದ ಕಾರ್ಯಕಲಾಪಗಳು ನಡೆಯಲಿವೆ ಎಂದು ವಿಪ್‌ನಲ್ಲಿ ತಿಳಿಸಲಾಗಿದೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ಚಂದ್ರ ಪವಾರ್‌ನ ಲೋಕಸಭೆಯ ಎಲ್ಲ ಸದಸ್ಯರು ನವೆಂಬರ್ 30ರ ಸೋಮವಾರದಿಂದ ಡಿಸೆಂಬರ್ 4ರ ಶುಕ್ರವಾರದವರೆಗೆ ತಪ್ಪದೇ ಲೋಕಸಭೆಯಲ್ಲಿ ಹಾಜರಿದ್ದು, ಪಕ್ಷದ ನಿಲುವನ್ನು ಬೆಂಬಲಿಸುವಂತೆ ಕೋರಲಾಗಿದೆ ಎಂದು ಹೇಳಲಾಗಿದೆ.

ಮತ್ತೆ ಆರಂಭವಾಗಲಿರುವ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಪ್ರಮುಖ ಚರ್ಚೆಯ ವಿಷಯವಾಗುವ ನಿರೀಕ್ಷೆಯಿದೆ.

ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವ ಭರವಸೆ ನೀಡಿದರೆ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ಬೆಂಬಲಿಸಲು ವೈಎಸ್‌ಆರ್ ಕಾಂಗ್ರೆಸ್ ಪಕ್ಷ (YSRCP) ಸಿದ್ಧವಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

18ನೇ ಲೋಕಸಭೆಯ 8ನೇ ಅಧಿವೇಶನದ ಎರಡನೇ ಭಾಗವು ನವೆಂಬರ್ 30ರಂದು ಆರಂಭವಾಗಲಿದ್ದು, ಸರ್ಕಾರದ ಕಾರ್ಯಕಲಾಪಗಳ ಅಗತ್ಯಕ್ಕೆ ಅನುಗುಣವಾಗಿ ಡಿಸೆಂಬರ್ 3ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಲೋಕಸಭೆ ಸಚಿವಾಲಯ ಪ್ರಕಟಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.