'ನೋಡಬೇಕಾದವರು ಈಗಾಗಲೇ ಸಿನಿಮಾ ನೋಡಿದ್ದಾರೆ; ಭಿನ್ನ ಅಭಿಪ್ರಾಯವಿದ್ದರೆ ನೀವೇ ಸಿನಿಮಾ ಮಾಡಿ': 'Ramayana' ವಿರುದ್ಧದ ಅರ್ಜಿಗೆ ಸುಪ್ರೀಂ ಕೋರ್ಟ್ ಚಾಟಿ..!

ನವದೆಹಲಿ: ಪೌರಾಣಿಕ ಸತ್ಯಗಳನ್ನು ತಿರುಚಲಾಗಿದೆ ಎಂದು ಆರೋಪಿಸಿ 'ರಾಮಾಯಣ: ರೈಸ್ ಆಫ್ ಎ ಲೆಜೆಂಡ್' (Ramayana: Rise of a Legend) ಚಿತ್ರದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ (ನವೆಂಬರ್ 27) ನಿರಾಕರಿಸಿದೆ.
ಈ ಮೂಲಕ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿರುವ ಬಹುನಿರೀಕ್ಷಿತ ಚಿತ್ರಕ್ಕೆ ನ್ಯಾಯಾಲಯದಿಂದ ದೊಡ್ಡ ಮಟ್ಟದ ರಿಲೀಫ್ ಸಿಕ್ಕಂತಾಗಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠದ ಮುಂದೆ ಈ ಅರ್ಜಿಯನ್ನು ಪ್ರಸ್ತಾಪಿಸಲಾಗಿತ್ತು. ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಕೂಡ ಪೀಠದಲ್ಲಿದ್ದರು.
ಅರ್ಜಿದಾರರ ಪರ ವಕೀಲರು, ನವೆಂಬರ್ 23ರಂದು ಅರ್ಜಿ ನೋಂದಣಿಯಾಗಿದ್ದರೂ ವಿಚಾರಣೆಗೆ ಪಟ್ಟಿ ಮಾಡಲಾಗಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಆದರೆ, ಪ್ರಕರಣದ ತುರ್ತು ವಿಚಾರಣೆಯ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಮುಖ್ಯ ನ್ಯಾಯಮೂರ್ತಿಗಳು, ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಒಪ್ಪಲಿಲ್ಲ. ಸಿನಿಮಾ ಈಗಾಗಲೇ ಬಿಡುಗಡೆಯಾಗಿದೆ. ನೋಡಬೇಕೆಂದಿದ್ದವರು ಅದನ್ನು ನೋಡಿದ್ದಾರೆ ಎಂದು ಅವರು ಹೇಳಿದರು.
ಸಿನಿಮಾದಲ್ಲಿ ಹಲವು ವಾಸ್ತವಾಂಶಗಳನ್ನು ತಿರುಚಲಾಗಿದೆ ಎಂದು ವಕೀಲರು ಮತ್ತೆ ವಾದಿಸಿದಾಗ, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅಂತಹ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅವರು ತಮಗೆ ಅರ್ಥವಾದ ರೀತಿಯಲ್ಲಿ ಸಿನಿಮಾ ಮಾಡಿದ್ದಾರೆ. ನಿಮಗೆ ಅರ್ಥವಾದ ರೀತಿಯಲ್ಲಿ ನೀವೂ ಸಿನಿಮಾ ಮಾಡಿ. ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಬೇಡಿ. ಮಹಾಕಾವ್ಯದ ಬಗ್ಗೆ ನಿಮಗೆ ಭಿನ್ನ ಅಭಿಪ್ರಾಯವಿದ್ದರೆ, ಅದನ್ನೇ ಆಧರಿಸಿ ಸಿನಿಮಾ ನಿರ್ಮಿಸಿ ಎಂದು ನ್ಯಾಯಮೂರ್ತಿ ಬಾಗ್ಚಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



