ಅಮಿತ್ ಶಾ ಅವರಿಗೆ ಮರೆವಿನ ಕಾಯಿಲೆ ಇರಬಹುದು, ಇಲ್ಲ ಸತ್ಯ ಮರೆಮಾಚುತ್ತಿರಬಹುದು: ಚಿದಂಬರಂ ವ್ಯಂಗ್ಯ

ನವದೆಹಲಿ: ಬಿಜೆಪಿ ನಾಯಕ ಅಮಿತ್ ಶಾ ಅವರಿಗೆ ಬಹುಶಃ ನೆನಪಿನ ಶಕ್ತಿ ಕುಂದಿರಬಹುದು ಅಥವಾ ಅವರು ಸತ್ಯವನ್ನು ಮರೆಮಾಚುತ್ತಿರಬಹುದು ಎಂದು ಚಿದಂಬರಂ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಭರವಸೆಯ ಜಾರಿಗೆ ಕಾಂಗ್ರೆಸ್ ಅಡ್ಡಿಪಡಿಸಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ, ಸಂವಿಧಾನದ 106ನೇ ತಿದ್ದುಪಡಿ ಕಾಯ್ದೆ ಈಗಾಗಲೇ ಜಾರಿಗೆ ಬಂದಿದೆ ಎಂದು ತಿಳಿಸಿದ್ದಾರೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಕಲ್ಪಿಸುವ ವಿಷಯದಲ್ಲಿ ಕಾಂಗ್ರೆಸ್ ಅನ್ನು ಅಮಿತ್ ಶಾ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಕೇಂದ್ರ ಹಣಕಾಸು ಸಚಿವ ಚಿದಂಬರಂ, ಮಹಿಳಾ ಮೀಸಲಾತಿ ಕಾನೂನನ್ನು ಅಂಗೀಕರಿಸಲು ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿತ್ತು ಮತ್ತು ಈಗ ಅದನ್ನು ತಕ್ಷಣವೇ ಜಾರಿಗೆ ತರಬೇಕೆಂದು ಒತ್ತಾಯಿಸುತ್ತಿದೆ ಎಂದು ಸ್ಪಷ್ಟಪಡಿಸಿದರು
ಅಮಿತ್ ಶಾ ಅವರಿಗೆ ಮರೆವಿನ ಕಾಯಿಲೆ ಇರಬಹುದು ಅಥವಾ ಅವರು ಸತ್ಯವನ್ನು ಹೇಳುತ್ತಿಲ್ಲ ಎಂದು ಶುಕ್ರವಾರ ಟೀಕಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಿತ್ತು. 2023ರ ಸೆಪ್ಟೆಂಬರ್ 20 ಮತ್ತು 21ರಂದು ಸಂಸತ್ತಿನ ಉಭಯ ಸದನಗಳಲ್ಲೂ ಈ ಮಸೂದೆ ಅಂಗೀಕಾರವಾಗಿತ್ತು. ಹಾಗಿದ್ದರೆ, ಸರ್ಕಾರ ಈ ಕಾಯ್ದೆಯನ್ನು ಏಕೆ ಜಾರಿಗೆ ತರುತ್ತಿಲ್ಲ? ಹೊಸ ಮಸೂದೆಯ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ.
ಈ ಕಾಯ್ದೆಯ 334ಎ ವಿಧಿಯ ಪ್ರಕಾರ, ಮುಂದಿನ ಜನಗಣತಿಯ ನಂತರ ಕ್ಷೇತ್ರಗಳ ಮರು ವಿಂಗಡಣೆ ನಡೆದ ಬಳಿಕವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ. ಈ ಷರತ್ತಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ವಿರೋಧ ವ್ಯಕ್ತಪಡಿಸಿದ್ದವು ಎಂದು ಚಿದಂಬರಂ ಹೇಳಿದ್ದಾರೆ.
ಈಗ ಬಿಜೆಪಿ ಮಾಡಬೇಕಿರುವುದು 334ಎ ವಿಧಿಯನ್ನು ಕಾಯ್ದೆಯಿಂದ ತೆಗೆದುಹಾಕುವ ಪ್ರಸ್ತಾವನೆ ಸಲ್ಲಿಸುವುದಷ್ಟೇ. ಆ ವಿಧಿಯನ್ನು ತೆಗೆದುಹಾಕಿದರೆ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬಹುದು ಎಂದು ಚಿದಂಬರಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



