ಮಹಿಳಾ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ; 'ನಾರಿ ಶಕ್ತಿ'ಗೆ ನೀಡಿದ ಭರವಸೆ ಈಡೇರಿಸುತ್ತೇವೆ: ಪ್ರಧಾನಿ ಮೋದಿ

ನವದೆಹಲಿ: ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವ ಮೀಸಲಾತಿ ಜಾರಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಪುನರುಚ್ಚರಿಸಿದ್ದಾರೆ.
ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಹೇಳಿಕೆ ನೀಡಿರುವ ಪ್ರಧಾನಿ ಮೋದಿಯವರು, ದೇಶದ ನಾರಿಶಕ್ತಿಗೆ ನೀಡಿರುವ ಭರವಸೆಯನ್ನು ಈಡೇರಿಸಲು ಸರ್ಕಾರ ದೃಢನಿರ್ಧಾರ ಮಾಡಿದೆ ಎಂದು ಹೇಳಿದರು.
ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಪರಿಷ್ಕೃತ ಸಂವಿಧಾನದ 132ನೇ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತ್ತು.
ಈ ಮಸೂದೆಯಲ್ಲಿ 1971ರ ಜನಸಂಖ್ಯೆಯ ಆಧಾರದ ಮೇಲೆ ಪ್ರತಿ ರಾಜ್ಯದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಪ್ರಸ್ತಾಪವಿದೆ. ಜೊತೆಗೆ 2051ರವರೆಗೆ ಪ್ರತಿ ರಾಜ್ಯದ ಒಟ್ಟು ಪ್ರಾತಿನಿಧ್ಯದ ಪಾಲನ್ನು ಯಥಾಸ್ಥಿತಿಯಲ್ಲಿ ಉಳಿಸುವ ಉದ್ದೇಶವನ್ನೂ ಹೊಂದಿದೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುವ ಭರವಸೆಯನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ನಾರಿಶಕ್ತಿಯನ್ನು ಸಬಲೀಕರಣಗೊಳಿಸುವ ನಮ್ಮ ಸಂಕಲ್ಪ ಅಚಲವಾಗಿದೆ. ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಹೋರಾಟ ಹಲವು ದಶಕಗಳಿಂದ ನಡೆಯುತ್ತಿದೆ. ಈ ಕನಸನ್ನು ನನಸಾಗಿಸಲು ಶ್ರಮಿಸುತ್ತಿರುವವರಲ್ಲಿ ನಾನೂ ಒಬ್ಬ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



