ದೇಶ

ತಮಿಳು ನಾಡು: ತಿರುಪ್ಪರಂಕುಂದ್ರಂ ಬೆಟ್ಟದ ಉಚ್ಚಿಪಿಳ್ಳೈಯಾರ್ ದೇವಸ್ಥಾನ ಬಳಿ ಡಿ. 15ರವರೆಗೆ ದೀಪ ಬೆಳಗಿಸಲು ಅನುಮತಿ

ತಮಿಳು ನಾಡು: ತಿರುಪ್ಪರಂಕುಂದ್ರಂ ಬೆಟ್ಟದ ಉಚ್ಚಿಪಿಳ್ಳೈಯಾರ್ ದೇವಸ್ಥಾನ ಬಳಿ ಡಿ. 15ರವರೆಗೆ ದೀಪ ಬೆಳಗಿಸಲು ಅನುಮತಿ
ಉಚ್ಚಿಪಿಳ್ಳೈಯಾರ್ ದೇವಸ್ಥಾನ
Published On :

ಮಧುರೈ: ಇಲ್ಲಿನ ತಿರುಪ್ಪರಂಕುಂದ್ರಂ ಬೆಟ್ಟದಲ್ಲಿರುವ ಉಚ್ಚಿಪಿಳ್ಳೈಯಾರ್ ದೇವಸ್ಥಾನದ ಸಮೀಪ ಮಾತ್ರ ಡಿಸೆಂಬರ್ 15ರವರೆಗೆ ಭಕ್ತರು ಹಾಗೂ ಸಾರ್ವಜನಿಕರು ದೀಪ ಬೆಳಗಿಸಲು ಅನುಮತಿ ನೀಡಲಾಗಿದೆ ಎಂದು ಅರುಳ್ಮಿಗು ಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಸುಪ್ರೀಂ ಕೋರ್ಟ್ ನೇಮಿತ ಆಡಳಿತಾಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಭಕ್ತರ ಪೂಜೆ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಅವಧಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ದೀಪ ಬೆಳಗಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಡಳಿತಾಧಿಕಾರಿಗಳು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಡಳಿತಾಧಿಕಾರಿಗಳು ಹಾಗೂ ಕೇಂದ್ರ ಭದ್ರತಾ ಪಡೆಗಳು ಹೊರಡಿಸಿರುವ ಮಾರ್ಗಸೂಚಿಗಳನ್ನು ಭಕ್ತರು ಮತ್ತು ಸಾರ್ವಜನಿಕರು ಪಾಲಿಸಬೇಕು. ಶಾಂತಿಯುತವಾಗಿ ದೀಪ ಬೆಳಗಿಸಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ಸಹಕಾರ ನೀಡಬೇಕು ಎಂದು ದೇವಸ್ಥಾನದ ಆಡಳಿತಾಧಿಕಾರಿಗಳು ಮನವಿ ಮಾಡಿದ್ದಾರೆ.

ಇದಕ್ಕೂ ಮೊದಲು, ಸುಪ್ರೀಂ ಕೋರ್ಟ್ ಆದೇಶದಂತೆ ನಿನ್ನೆ ಶನಿವಾರ ಸಂಜೆ ಸುಮಾರು 5 ಗಂಟೆಗೆ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ 'ದೀಪಸ್ತಂಭ'ದಲ್ಲಿ ತಿರು ಕಾರ್ತಿಕ ದೀಪ ಬೆಳಗಿಸಲಾಗಿತ್ತು. ಮೇಘಾಲಯ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್. ವೈದ್ಯನಾಥನ್ ಮತ್ತು ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಪಾರ್ಥಿಬನ್ ಅವರ ನೇರ ಮೇಲ್ವಿಚಾರಣೆಯಲ್ಲಿ ಈ ಕಾರ್ಯ ನೆರವೇರಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.