ದೇಶ

ಕಾಶಿ ತಮಿಳು ಸಂಗಮಕ್ಕೆ ಗೈರು: ಜನರನ್ನು ತಮ್ಮ ಧರ್ಮಕ್ಕೆ ಮತಾಂತರಿಸುವುದೇ ಅವರ ಗುರಿ: ಸಿಎಂ ವಿಜಯ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಕಾಶಿ ತಮಿಳು ಸಂಗಮಕ್ಕೆ ಗೈರು: ಜನರನ್ನು ತಮ್ಮ ಧರ್ಮಕ್ಕೆ ಮತಾಂತರಿಸುವುದೇ ಅವರ ಗುರಿ: ಸಿಎಂ ವಿಜಯ್  ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ
ಪ್ರಹ್ಲಾದ್ ಜೋಶಿ
Published On :

ವಾರಾಣಸಿ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮತಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಜನರನ್ನು ತಮ್ಮ ಧರ್ಮಕ್ಕೆ ಮತಾಂತರಿಸುವ ಗುರಿ ಹೊಂದಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ತಿರುಪ್ಪರಂಕುಂದ್ರಂ ವಿವಾದದ ಕುರಿತು ಪ್ರಸ್ತಾಪಿಸಿದ ಅವರು, ಐದನೇ ಆವೃತ್ತಿಯ ಕಾಶಿ ತಮಿಳು ಸಂಗಮಂ ಕಾರ್ಯಕ್ರಮಕ್ಕೆ ನೀಡಿದ್ದ ಆಹ್ವಾನವನ್ನು ವಿಜಯ್ ನಿರ್ಲಕ್ಷಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಕಾಶಿ ತಮಿಳು ಸಂಗಮಂ ಕಾರ್ಯಕ್ರಮದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜನರು ಜನರನ್ನು ತಮ್ಮ ಧರ್ಮಕ್ಕೆ ಮತಾಂತರಿಸುವುದನ್ನೇ ಬಯಸುತ್ತಾರೆ ಎಂದು ಆರೋಪಿಸಿದರು.

ಕ್ರೈಸ್ತ ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಅವರು, ತಾವು ಕೇವಲ ಕ್ರೈಸ್ತ ಅಥವಾ ಇಸ್ಲಾಂ ಧರ್ಮದ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ಈ ವಿಚಾರವನ್ನು ಯಾವುದೇ ನಿರ್ದಿಷ್ಟ ಧಾರ್ಮಿಕ ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಹೇಳಿದರು.

ಇದು ಮತಬ್ಯಾಂಕ್ ರಾಜಕಾರಣವಾಗಿದೆ. ಜನರನ್ನು ಓಲೈಸಿ ಮತಾಂತರಿಸುವ ಉದ್ದೇಶ ಹೊಂದಿದ್ದಾರೆ. ವಿಜಯ್ ಮಾಡಿರುವುದು ಓಲೈಕೆ ರಾಜಕಾರಣದ ಪರಮಾವಧಿ ಎಂದು ಟೀಕಿಸಿದ್ದಾರೆ.

ಕಾಶಿ ತಮಿಳು ಸಂಗಮಂ ಕಾರ್ಯಕ್ರಮಕ್ಕೆ ಹಾಜರಾಗುವಂತೆ ತಾವು ವೈಯಕ್ತಿಕವಾಗಿಯೇ ವಿಜಯ್ ಅವರನ್ನು ಸಂಪರ್ಕಿಸಿ ಆಹ್ವಾನಿಸಿದ್ದಾಗಿ ಜೋಶಿ ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂಬುದನ್ನೂ ವಿವರಿಸಿದ್ದೆ. ಈ ವೇಳೆ ವಿಜಯ್ ಅವರು, 'ನೋಡೋಣ' ಎಂದು ಪ್ರತಿಕ್ರಿಯಿಸಿದ್ದರು. ನಮ್ಮ ಕಚೇರಿಯಿಂದಲೂ ಹಲವು ಬಾರಿ ಸಂಪರ್ಕಿಸಿ ನೆನಪಿಸಲಾಗಿತ್ತು. ಆದರೂ ಕೊನೆಗೆ ಅವರು ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪಿಎಂ ಶ್ರೀ ಶಾಲೆಗಳನ್ನು ಸ್ಥಾಪಿಸದಿದ್ದರೆ ಅನುದಾನವಿಲ್ಲ

ಇದೇ ವೇಳೆ ತಮಿಳುನಾಡು ಸರ್ಕಾರ ಪಿಎಂ ಶ್ರೀ ಶಾಲೆಗಳನ್ನು ಸ್ಥಾಪಿಸಲು ಒಪ್ಪಿಗೆ ನೀಡಿದ ಬಳಿಕವೇ ಕೇಂದ್ರ ಸರ್ಕಾರದಿಂದ ಅನುದಾನ ಕೇಳಬೇಕು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಶಾಲೆಗಳನ್ನು ನಿರ್ಮಿಸಿದರೆ ನಾವು ಹಣ ನೀಡುತ್ತೇವೆ. ಆದರೆ ಶಾಲೆಗಳನ್ನು ನಿರ್ಮಿಸುವುದಿಲ್ಲ, ಹಾಗಿದ್ದರೂ ಹಣ ಏಕೆ ನೀಡಬೇಕು ಎಂದು ಪ್ರಶ್ನಿಸಿದರೆ ಹೇಗೆ? ಎಂದು ಅವರು ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.