ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

"ಇಂದು ಲಡಾಖ್‌ನಿಂದ ಕನ್ಯಾಕುಮಾರಿಯವರೆಗೆ ಜನರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರನ್ನು ಮುಕ್ತ ಹೃದಯದಿಂದ ಸ್ವಾಗತಿಸುತ್ತೇವೆ"
Former AAP leader Priyanka Kakkar, ex-UP MLA Shyam Sundar Sharma, Journalist Rajat Rakesh Tandon joins Congress
ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!
Updated on: 

ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷದ(AAP) ಮಾಜಿ ವಕ್ತಾರೆ ಪ್ರಿಯಾಂಕಾ ಕಕ್ಕರ್, ಉತ್ತರ ಪ್ರದೇಶದ ಮಾಜಿ ಶಾಸಕ ಶ್ಯಾಮ್ ಸುಂದರ್ ಶರ್ಮಾ ಮತ್ತು ಪತ್ರಕರ್ತ ರಜತ್ ರಾಕೇಶ್ ಟಂಡನ್ ಅವರು ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

"ಕಾಂಗ್ರೆಸ್ ಪಕ್ಷದ ಸಿದ್ಧಾಂತದಿಂದ ಪ್ರೇರೇಪಿತರಾಗಿ, ಇಂದು ಆಮ್ ಆದ್ಮಿ ಪಕ್ಷದ ನಾಯಕಿ ಪ್ರಿಯಾಂಕಾ ಕಕ್ಕರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಅವರೊಂದಿಗೆ ರಜತ್ ರಾಕೇಶ್ ಟಂಡನ್ ಮತ್ತು ಮಾಜಿ ಶಾಸಕ ಶ್ಯಾಮ್ ಸುಂದರ್ ಶರ್ಮಾ ಕೂಡ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ನಿಮ್ಮೆಲ್ಲರಿಗೂ ಅಭಿನಂದನೆಗಳು ಮತ್ತು ಉತ್ತಮ ಭವಿಷ್ಯಕ್ಕಾಗಿ ಶುಭಾಶಯಗಳು" ಎಂದು ಕಾಂಗ್ರೆಸ್ 'ಎಕ್ಸ್' (X) ನಲ್ಲಿ ಪೋಸ್ಟ್‌ ಮಾಡಿದೆ.

'ಎಕ್ಸ್' ನಲ್ಲಿನ ಮತ್ತೊಂದು ಪೋಸ್ಟ್‌ನಲ್ಲಿ, ಕಾಂಗ್ರೆಸ್ ಪಕ್ಷವು ಹೊಸ ಸದಸ್ಯರನ್ನು ಸ್ವಾಗತಿಸಿದ್ದು, "ಇಂದು ಮೂವರು ಪ್ರಮುಖ ವ್ಯಕ್ತಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಎಎಪಿಯ ಮಾಜಿ ಮುಖ್ಯ ರಾಷ್ಟ್ರೀಯ ವಕ್ತಾರೆ ಹಾಗೂ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಪ್ರಿಯಾಂಕಾ ಕಕ್ಕರ್, ಉತ್ತರ ಪ್ರದೇಶ ಮಾಜಿ ಶಾಸಕ ಶ್ಯಾಮ್ ಸುಂದರ್ ಶರ್ಮಾ, ಸ್ವಾತಂತ್ರ್ಯ ಹೋರಾಟಗಾರ ಪುರುಷೋತ್ತಮ ದಾಸ್ ಟಂಡನ್ ಅವರ ಕುಟುಂಬದ ಮತ್ತು ಪತ್ರಿಕೋದ್ಯಮದಲ್ಲಿ 20 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ರಜತ್ ರಾಕೇಶ್ ಟಂಡನ್ ಅವರು ಕಾಂಗ್ರೆಸ್ ಸೇರಿದ್ದಾರೆ ಎಂದು ಹೇಳಿದೆ.

Former AAP leader Priyanka Kakkar, ex-UP MLA Shyam Sundar Sharma, Journalist Rajat Rakesh Tandon joins Congress
ಗುಜರಾತ್‌ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

"ಇಂದು ಲಡಾಖ್‌ನಿಂದ ಕನ್ಯಾಕುಮಾರಿಯವರೆಗೆ ಜನರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರನ್ನು ಮುಕ್ತ ಹೃದಯದಿಂದ ಸ್ವಾಗತಿಸುತ್ತೇವೆ" ಎಂದು ಕಾಂಗ್ರೆಸ್ ತಿಳಿಸಿದೆ.

ಕಾಂಗ್ರೆಸ್ ಸೇರಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಕ್ಕರ್, ತಮ್ಮ ಈ ನಿರ್ಧಾರವು ರಾಜಕೀಯದಲ್ಲಿನ ದೀರ್ಘಕಾಲದ ಅನುಭವದ ಫಲಿತಾಂಶವಾಗಿದೆ ಎಂದು ಹೇಳಿದರು. ಸ್ವಚ್ಛ, ಹಸಿರು, ಪ್ರಗತಿಪರ ಮತ್ತು ಸುರಕ್ಷಿತ ದೆಹಲಿಯನ್ನು ನಿರ್ಮಿಸಲು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾಧ್ಯ ಎಂಬ ತೀರ್ಮಾನಕ್ಕೆ ತಾವು ಬಂದಿರುವುದಾಗಿ ಅವರು ಹೇಳಿದರು.

ಆಪ್ ತೊರೆಯುವ ತಮ್ಮ ನಿರ್ಧಾರದ ಕುರಿತು ವಿವರಿಸಿದ ಪ್ರಿಯಾಂಕಾ ಕಕ್ಕರ್, “ಆಪ್ ಬಂಗಲೆಯನ್ನಾಗಲಿ ಅಥವಾ ಕಾರನ್ನಾಗಲಿ ಖರೀದಿಸುವುದಿಲ್ಲ ಎಂಬ ಮಾತಿದ್ದ ಕಾಲವೊಂದಿತ್ತು. ಆದರೆ, ಬಳಿಕ, ಖಾಸಗಿ ಪ್ರಯಾಣಕ್ಕಾಗಿ ಹೆಲಿಕಾಪ್ಟರ್ ಗಳನ್ನು ಬಳಸಲು ಪ್ರಾರಂಭಿಸಲಾಯಿತು. ಹೀಗಾಗಿ, ನಾನು ಅಸಮರ್ಥನೀಯವಾದದ್ದನ್ನು ಇನ್ನಷ್ಟು ಕಾಲ ಸಮರ್ಥಿಸಲಾರೆ” ಎಂದು ತಿಳಿಸಿದರು.

“ಅಸರ್ಮಥನೀಯವಾದದ್ದನ್ನು ನಾನು ಎಷ್ಟು ಕಾಲ ಸಮರ್ಥಿಸಲು ಸಾಧ್ಯ?” ಎಂದೂ ಅವರು ಪ್ರಶ್ನಿಸಿದರು.

ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪ್ರಶಂಸಿಸಿದ ಪ್ರಿಯಾಂಕಾ ಕಕ್ಕರ್, ರಾಹುಲ್ ಗಾಂಧಿ ಸ್ಥಿತಿಸ್ಥಾಪಕತ್ವ ಗುಣ ಹೊಂದಿದ್ದು, ಅವರು ಹಾಗೂ ಅವರ ಪಕ್ಷ ದಾಳಿಗಳನ್ನು ತಡೆದುಕೊಂಡಿರುವುದನ್ನು ನಾನು ಕಂಡಿದ್ದೇನೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com