"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಒಟ್ಟು 259 ಭಾರತೀಯರನ್ನು ರಷ್ಯಾ ಸಶಸ್ತ್ರ ಪಡೆಗಳಿಗೆ ನೇಮಕ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇವರ ಪೈಕಿ ಭಾರತದ ಪ್ರಯತ್ನಗಳ ಫಲವಾಗಿ 139 ಮಂದಿಯನ್ನು ಬಿಡುಗಡೆ ಮಾಡಲಾಗಿದೆ.
Ministry of External Affairs spokesperson Randhir Jaiswal
ರಣಧೀರ್ ಜೈಸ್ವಾಲ್online desk
Updated on: 

ನವದೆಹಲಿ: ರಷ್ಯಾ ಸಶಸ್ತ್ರ ಪಡೆಗಳಲ್ಲಿ ಇನ್ನೂ ಉಳಿದಿರುವ 69 ಭಾರತೀಯರನ್ನು ಬಿಡುಗಡೆಗೊಳಿಸಲು ಭಾರತ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಬುಧವಾರ ತಿಳಿಸಿದ್ದಾರೆ. ಇದೇ ವೇಳೆ ರಷ್ಯಾ ಸೇನೆಗೆ ಸೇರುವ ಆಮಿಷಗಳಿಂದ ಭಾರತೀಯರು ದೂರವಿರಬೇಕು ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ರಷ್ಯಾ ಅಧಿಕಾರಿಗಳೊಂದಿಗೆ ಭಾರತ ಸರ್ಕಾರ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದು, ಈಗಾಗಲೇ 139 ಭಾರತೀಯರನ್ನು ಶೀಘ್ರವಾಗಿ ಸೇನೆಯಿಂದ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದೆ. ರಷ್ಯಾ ಸೇನೆಯಲ್ಲಿರುವ ಉಳಿದ ಭಾರತೀಯರ ಬಿಡುಗಡೆಗಾಗಿ ನಾವು ರಷ್ಯಾ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ, ಒಟ್ಟು 259 ಭಾರತೀಯರನ್ನು ರಷ್ಯಾ ಸಶಸ್ತ್ರ ಪಡೆಗಳಿಗೆ ನೇಮಕ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇವರ ಪೈಕಿ ಭಾರತದ ಪ್ರಯತ್ನಗಳ ಫಲವಾಗಿ 139 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಇನ್ನು 69 ಭಾರತೀಯರ ಸ್ಥಳ ಹಾಗೂ ಸ್ಥಿತಿಗತಿಗಳ ಬಗ್ಗೆ ರಷ್ಯಾ ಅಧಿಕಾರಿಗಳಿಂದ ಮಾಹಿತಿ ಪಡೆಯಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಷ್ಯಾದಲ್ಲಿ ಸೇನಾ ಸೇವೆಗೆ ನೇಮಕಾತಿ ಮಾಡುವ ಆಫರ್‌ಗಳ ವಿರುದ್ಧವೂ ಭಾರತ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಇಂತಹ ನೇಮಕಾತಿಯಿಂದ ಜೀವಕ್ಕೆ ಗಂಭೀರ ಅಪಾಯ ಎದುರಾಗಬಹುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

Ministry of External Affairs spokesperson Randhir Jaiswal
Watch | ರಷ್ಯಾ ಸೇನೆ ಸೇರಲು ಒತ್ತಾಯ! ಉಕ್ರೇನ್ ವಿಡಿಯೋ ಕಳಿಸಿದ ಗುಜರಾತ್ ವಿದ್ಯಾರ್ಥಿ!

ರಷ್ಯಾ ಸೇನೆಗೆ ಸೇರುವಂತೆ ಭಾರತೀಯರಿಗೆ ನೀಡಲಾಗುತ್ತಿರುವ ಆಫರ್‌ಗಳಿಂದ ದೂರವಿರಬೇಕು ಎಂದು ಮತ್ತೊಮ್ಮೆ ಮನವಿ ಮಾಡುತ್ತೇವೆ. ಇದರಿಂದ ಜೀವಕ್ಕೆ ಗಂಭೀರ ಅಪಾಯ ಎದುರಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಸರ್ಕಾರ ಪದೇಪದೇ ಎಚ್ಚರಿಕೆ ನೀಡುತ್ತಿದ್ದರೂ ಭಾರತೀಯರು ರಷ್ಯಾ ಸಶಸ್ತ್ರ ಪಡೆಗಳಿಗೆ ಸೇರುತ್ತಿರುವ ವರದಿಗಳು ಮುಂದುವರಿದಿರುವುದು ಆಳವಾದ ಕಳವಳಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಸೆಪ್ಟೆಂಬರ್ 30ರಂದು ಕೂಡ ಈ ಕುರಿತು ಇತ್ತೀಚಿನ ಸಲಹೆಯನ್ನು ಹೊರಡಿಸಲಾಗಿತ್ತು. ಆದರೂ ಹೊಸದಾಗಿ ಭಾರತೀಯರು ರಷ್ಯಾ ಸೇನೆಗೆ ಸೇರುತ್ತಿರುವ ವರದಿಗಳು ಬರುತ್ತಿವೆ.

ಕಳೆದ ಎರಡು ವರ್ಷಗಳಲ್ಲಿ ಹಲವು ಬಾರಿ ಸಲಹೆ-ಎಚ್ಚರಿಕೆಗಳನ್ನು ನೀಡಿದ್ದರೂ, ಸೆಪ್ಟೆಂಬರ್ 30ರಂದು ಹೊರಡಿಸಿದ ಇತ್ತೀಚಿನ ಸಲಹೆಯ ಬಳಿಕವೂ ಭಾರತೀಯರು ರಷ್ಯಾ ಸಶಸ್ತ್ರ ಪಡೆಗಳಿಗೆ ಸೇರುತ್ತಿರುವ ವರದಿಗಳು ಬರುತ್ತಿವೆ. ಇದು ಆಳವಾದ ಕಳವಳದ ವಿಷಯವಾಗಿದೆ ಎಂದು ಹೇಳಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com