ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಸಿಎಂ ಡಿಕೆಶಿ ಸೇರಿ ಹಲವರು ಸಂತಾಪ

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಾನಾ ಪಾಟೇಕರ್ ಅವರ ಬಹುಮುಖ ಪ್ರತಿಭೆ, ಸೃಜನಶೀಲತೆ ಹಾಗೂ ಮರೆಯಲಾಗದ ಪಾತ್ರಗಳನ್ನು ಸ್ಮರಿಸಿದ್ದಾರೆ. ನಟನ ನೇರನುಡಿಯ ಸ್ವಭಾವವನ್ನೂ ಅವರು ಶ್ಲಾಘಿಸಿದ್ದಾರೆ.
Nana Patekar
ನಾನಾ ಪಾಟೇಕರ್
Updated on: 

ಮುಂಬೈ: ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ರಾಷ್ಟ್ರ, ರಾಜ್ಯ ನಾಯಕರು ಸಂತಾಪ ಸೂಚಿಸಿದ್ದಾರೆ. ಗೋವಾದ ಪಣಜಿಯಲ್ಲಿರುವ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಾನಾ ಪಾಟೇಕರ್ ಅವರ ಬಹುಮುಖ ಪ್ರತಿಭೆ, ಸೃಜನಶೀಲತೆ ಹಾಗೂ ಮರೆಯಲಾಗದ ಪಾತ್ರಗಳನ್ನು ಸ್ಮರಿಸಿದ್ದಾರೆ. ನಟನ ನೇರನುಡಿಯ ಸ್ವಭಾವವನ್ನೂ ಅವರು ಶ್ಲಾಘಿಸಿದ್ದಾರೆ.

“ನಾನಾ ಪಾಟೇಕರ್ ಅವರಲ್ಲಿದ್ದಷ್ಟು ತೀವ್ರತೆ, ವೈಶಿಷ್ಟ್ಯತೆ ಹಾಗೂ ಅಸಮಾನ್ಯ ಪರದೆಯ ಸಾನ್ನಿಧ್ಯವನ್ನು ಹೊಂದಿದ್ದ ನಟರು ವಿರಳ. ಪ್ರತಿಯೊಂದು ಪಾತ್ರಕ್ಕೂ ಅವರು ಅದ್ಭುತ ವೈವಿಧ್ಯತೆ ಮತ್ತು ಸೃಜನಶೀಲತೆಯನ್ನು ತುಂಬುತ್ತಿದ್ದರು. ತಲೆಮಾರುಗಳವರೆಗೆ ನೆನಪಿನಲ್ಲಿ ಉಳಿಯುವಂತಹ ಪಾತ್ರಗಳನ್ನು ಅವರು ನಮಗೆ ನೀಡಿದ್ದಾರೆ. ತಮ್ಮ ನಂಬಿಕೆ ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಎಂದಿಗೂ ಹಿಂಜರಿಯದ ಅವರ ನೇರ ಮತ್ತು ನಿಷ್ಠುರ ನಿಲುವಿಗೂ ಅವರು ಮೆಚ್ಚುಗೆಗೆ ಪಾತ್ರರಾಗಿದ್ದರು'' ಎಂದು ಪ್ರಧಾನಿ ಹೇಳಿದ್ದಾರೆ.

ಹಿಂದಿ ಮತ್ತು ಮರಾಠಿ ಚಿತ್ರರಂಗಕ್ಕೆ ನಾನಾ ಪಾಟೇಕರ್ ನೀಡಿದ ಕೊಡುಗೆಯನ್ನು ಸ್ಮರಿಸಿದ ಪ್ರಧಾನಿ ಮೋದಿ, ಅವರ ನಿಧನದಿಂದ ದೊಡ್ಡ ಶೂನ್ಯ ಉಂಟಾಗಿದೆ ಎಂದು ಹೇಳಿದ್ದಾರೆ.

Nana Patekar
ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

ಹಿಂದಿ ಮತ್ತು ಮರಾಠಿ ಚಿತ್ರರಂಗಕ್ಕೆ ನಾನಾ ಪಾಟೇಕರ್ ಅವರ ಕೊಡುಗೆ ಅಪಾರ. ಅವರ ನಿಧನದಿಂದ ದೊಡ್ಡ ಶೂನ್ಯ ಉಂಟಾಗಿದೆ. ಅವರ ಕುಟುಂಬ, ಸ್ನೇಹಿತರು ಹಾಗೂ ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಹೇಳಿದ್ದಾರೆ.

ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂತಾಪ ಸೂಚಿಸಿದ್ದು, ಅವರ ಸಾವಿನ ಸುದ್ದಿ ಆಘಾತಕಾರಿ ಮತ್ತು ಹೃದಯವಿದ್ರಾವಕವಾಗಿದೆ ಎಂದು ಹೇಳಿದ್ದಾರೆ. ನಟನೊಂದಿಗೆ ತಮಗಿದ್ದ ಆತ್ಮೀಯ ಮತ್ತು ಸ್ನೇಹಪರ ಸಂಬಂಧವನ್ನೂ ಅವರು ಸ್ಮರಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಗಡ್ಕರಿ, ಮರಾಠಿ ಮತ್ತು ಹಿಂದಿ ಚಿತ್ರರಂಗದಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ತಮ್ಮ ಅಭಿನಯದ ಮೂಲಕ ನಾನಾ ಪಾಟೇಕರ್ ಪ್ರೇಕ್ಷಕರ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು ಎಂದು ಹೇಳಿದ್ದಾರೆ.

ಪಾಟೇಕರ್ ಅವರ ವಿಶಿಷ್ಟ ಸಂಭಾಷಣೆ ಹೇಳುವ ಶೈಲಿ ಹಾಗೂ ಪ್ರಭಾವಶಾಲಿ ಅಭಿನಯವನ್ನು ಸ್ಮರಿಸಿದ ಗಡ್ಕರಿ, ಹಲವು ಪಾತ್ರಗಳಿಗೆ ತಮ್ಮ ಅಭಿನಯದ ಮೂಲಕ ಅಮರತ್ವ ನೀಡಿದ್ದ ಅವರು ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು ಎಂದು ಹೇಳಿದ್ದಾರೆ.

‘ನಾಮ್ ಫೌಂಡೇಶನ್’ ಮೂಲಕ ಪಾಟೇಕರ್ ಅವರು ಮಹಾರಾಷ್ಟ್ರದ ಗ್ರಾಮೀಣ ಪ್ರದೇಶಗಳಲ್ಲಿ ಜಲ ಸಂರಕ್ಷಣೆ ಮತ್ತು ಜಲಾನಯನ ಅಭಿವೃದ್ಧಿ ಕ್ಷೇತ್ರಗಳಲ್ಲಿ ಮಾಡುತ್ತಿದ್ದ ಸಾಮಾಜಿಕ ಸೇವೆಯನ್ನೂ ಸಚಿವ ನಿತಿನ್ ಗಡ್ಕರಿ ಶ್ಲಾಘಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಅವರು ನೀಡುತ್ತಿದ್ದ ನೆರವು ಹಲವು ಕುಟುಂಬಗಳಿಗೆ ಆಸರೆಯಾಗಿತ್ತು ಎಂದು ಗಡ್ಕರಿ ಹೇಳಿದ್ದಾರೆ.

ನಾಮ್ ಫೌಂಡೇಶನ್ ಮೂಲಕ ಮಹಾರಾಷ್ಟ್ರದ ಗ್ರಾಮೀಣ ಪ್ರದೇಶಗಳಲ್ಲಿ ಜಲ ಸಂರಕ್ಷಣೆ ಮತ್ತು ಜಲಾನಯನ ಅಭಿವೃದ್ಧಿ ಕ್ಷೇತ್ರಗಳಲ್ಲಿ ಅವರು ಮಾಡಿರುವ ಕೆಲಸ ಗಮನಾರ್ಹ ಮತ್ತು ಮಹತ್ವದ್ದಾಗಿದೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಅವರು ಚಾಚಿದ ಸಹಾಯ ಹಸ್ತವು ಹಲವು ಕುಟುಂಬಗಳಿಗೆ ಆಸರೆಯಾಯಿತು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ನಾನಾ ಪಾಟೇಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಾಟೇಕರ್ ಅವರ ಅಸಾಧಾರಣ ಪ್ರತಿಭೆ, ಪ್ರಭಾವಶಾಲಿ ಪರದೆಯ ಸಾನ್ನಿಧ್ಯ ಮತ್ತು ಸ್ಮರಣೀಯ ಅಭಿನಯವನ್ನು ಅವರು ಸ್ಮರಿಸಿದ್ದಾರೆ.

ರೈತರ ಬಗ್ಗೆ ಪಾಟೇಕರ್ ಹೊಂದಿದ್ದ ಕಾಳಜಿ ಹಾಗೂ ಸಮಾಜ ಸೇವೆಯ ಬದ್ಧತೆ ಅವರ ವ್ಯಕ್ತಿತ್ವದ ಆಳವನ್ನು ಪ್ರತಿಬಿಂಬಿಸುತ್ತಿತ್ತು ಎಂದು ಶಿವಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com