ರೇವಂತ್ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ: 6 ತಿಂಗಳ ಹಸುಗೂಸಿಗೆ ಹಾಲುಣಿಸಲು ಅವಕಾಶ ನೀಡದೆ 7 ಗಂಟೆಗಳ ಕಾಲ ಪತ್ರಕರ್ತೆಯ ವಿಚಾರಣೆ ನಡೆಸಿದ ಪೊಲೀಸರು

ಮುಖ್ಯಮಂತ್ರಿ ರೇವಂತ್ ರೆಡ್ಡಿ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪಗಳನ್ನು ವರದಿ ಮಾಡಿದ ಕಾರಣಕ್ಕಾಗಿ ಮಹಿಳಾ ಪತ್ರಕರ್ತೆಯೊಬ್ಬರನ್ನು, ಹೈದರಾಬಾದ್‌ ಪೊಲೀಸರು, ಆಕೆಯ 6 ತಿಂಗಳ ಹಸುಗೂಸಿನೊಂದಿಗೆ ಕನಿಷ್ಠ 7 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Journo quizzed for hours with baby in hand over claims about Revant Reddy's daughter
ಮುಖ್ಯಮಂತ್ರಿ ರೇವಂತ್ ರೆಡ್ಡಿ - ಜಲ್ಲಿ ರೇಖಾOnline Desk
Updated on: 

ಹೈದರಾಬಾದ್‌ (ತೆಲಂಗಾಣ): ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಕುಟುಂಬದ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ವರದಿ ಮಾಡಿದ ಕಾರಣಕ್ಕಾಗಿ ಮಹಿಳಾ ಪತ್ರಕರ್ತೆಯೊಬ್ಬರನ್ನು, ಹೈದರಾಬಾದ್‌ ಪೊಲೀಸರು, ಆಕೆಯ 6 ತಿಂಗಳ ಹಸುಗೂಸಿನೊಂದಿಗೆ ಕನಿಷ್ಠ 7 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ, ಮಗುವಿಗೆ ಸರಿಯಾಗಿ ಹಾಲುಣಿಸಲು ಸಹ ಬಿಡದೆ ಕಿರುಕುಳ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆ ಕುರಿತ ವರದಿ ಇಲ್ಲಿದೆ:

ಆರೋಪವೇನು?

ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪುತ್ರಿ ನೈಮಿಶಾ ರೆಡ್ಡಿ ಮತ್ತು ಅಳಿಯ ಸತ್ಯನಾರಾಯಣ ರೆಡ್ಡಿ ಕೋಟ್ಯಂತರ ರೂಪಾಯಿ ಮೌಲ್ಯದ ಫಾರ್ಮಾ ಹಾಗೂ ಕಾರ್ಪೊರೇಟ್ ಶಾಲೆಯ ವ್ಯವಹಾರಗಳಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಮಾಡಿದ ಆರೋಪಗಳನ್ನು ಆಧರಿಸಿ, ಸ್ವತಂತ್ರ ಮಹಿಳಾ ಪತ್ರಕರ್ತೆ ಜಲ್ಲಿ ರೇಖಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸರು ಸೈಬರ್ ಕ್ರೈಮ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಅದರಂತೆ, ಮಂಗಳವಾರ ಮಧ್ಯರಾತ್ರಿ ಜಲ್ಲಿ ರೇಖಾ ಅವರ ಮನೆಗೆ ತೆರಳಿದ್ದ ಪೊಲೀಸರು ಬುಧವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅದರಂತೆ ಅವರು ತಮ್ಮ 6 ತಿಂಗಳ ಹಸುಗೂಸಿನೊಂದಿಗೆ ಪೊಲೀಸ್ ಠಾಣೆಗೆ ಬಂದಾಗ, ಮಗುವಿಗೆ ಹಾಲುಣಿಸಲು ಸರಿಯಾದ ವ್ಯವಸ್ಥೆ ಕಲ್ಪಿಸದೆ ಅಥವಾ ಕನಿಷ್ಠ ಮಾನವೀಯತೆಯನ್ನೂ ತೋರದೆ ತಡರಾತ್ರಿಯವರೆಗೆ ಸುದೀರ್ಘ ವಿಚಾರಣೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವಿರೋಧ ಪಕ್ಷಗಳಾದ ಬಿಆರ್‌ಎಸ್ ಮತ್ತು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು "ಕಾಂಗ್ರೆಸ್‌ನ 'ಮೊಹಬ್ಬತ್ ಕಿ ದುಕಾನ್'ನಲ್ಲಿ ತಾಯಿಗೆ ತನ್ನ ಮಗುವಿಗೆ ಹಾಲುಣಿಸಲು ಸಹ ಬಿಡುತ್ತಿಲ್ಲವೇ?" ಎಂದು ರಾಹುಲ್ ಗಾಂಧಿ ಮತ್ತು ರೇವಂತ್ ರೆಡ್ಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Journo quizzed for hours with baby in hand over claims about Revant Reddy's daughter
ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com