

ನೋಯ್ಡಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು "ನರೇಂದ್ರ ಮೋದಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ನೋಯ್ಡಾ-ಜೇವರ್" ಎಂದು ಮರುನಾಮಕರಣ ಮಾಡಲು ಉತ್ತರ ಪ್ರದೇಶ ಸರ್ಕಾರ ಅಧಿಕೃತವಾಗಿ ಅನುಮೋದನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ರಾಜಧಾನಿ ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ನವೆಂಬರ್ 2021ರಲ್ಲಿ ಈ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ನಂತರ ಇದರ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡು ಮಾರ್ಚ್ 28, 2026 ರಂದು ಅವರೇ ಇದನ್ನು ಉದ್ಘಾಟಿಸಿದ್ದರು. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರವೊಂದರ ಮುಖ್ಯಸ್ಥರಾಗಿ (2001 ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದ) 25 ವರ್ಷಗಳ ನಿರಂತರ ಸೇವೆಯನ್ನು ಪೂರ್ಣಗೊಳಿಸಿರುವುದನ್ನು ಗೌರವಿಸಲು ಈ ಮರುನಾಮಕರಣ ಮಾಡಲಾಗಿದೆ.
ಮುಂದುವರೆದು, ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 2021 ರಲ್ಲಿ ಈ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ನಂತರ ಇದರ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡು ಮಾರ್ಚ್ 28, 2026 ರಂದು ಅವರೇ ಇದನ್ನು ಉದ್ಘಾಟಿಸಿದ್ದರು. ಅದರಂತೆ, ಈ ವಿಮಾನ ನಿಲ್ದಾಣದಿಂದ ಜೂನ್ 15, 2026 ರಂದು ಮೊದಲ ವಾಣಿಜ್ಯ ವಿಮಾನ ಹಾರಾಟ ಯಶಸ್ವಿಯಾಗಿ ಪ್ರಾರಂಭವಾಯಿತು. ಪ್ರಸ್ತುತ ಮೊದಲ ಹಂತದಲ್ಲಿ ವಾರ್ಷಿಕ 1.2 ಕೋಟಿ (12 ಮಿಲಿಯನ್) ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದ್ದು, ಭವಿಷ್ಯದಲ್ಲಿ ಇದು ಉತ್ತರ ಪ್ರದೇಶದ ಅತಿ ದೊಡ್ಡ ವಿಮಾನ ನಿಲ್ದಾಣ ಹಾಗೂ ದೇಶದ ಪ್ರಮುಖ ಏವಿಯೇಷನ್ ಹಬ್ ಆಗಿ ಹೊರಹೊಮ್ಮಲಿದೆ. ಅದರಲ್ಲೂ, ಇದು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ದಟ್ಟಣೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.