ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

ಇಂದು ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಯತ್ನಿಸಿದ ಸಿಜೆಪಿ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
PM modi-Rahul gandhi
ಪ್ರಧಾನಿ ಮೋದಿ- ರಾಹುಲ್ ಗಾಂಧಿ
Updated on: 

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೋಗುತ್ತಾರೆ ಮತ್ತು ಮೋದಿ ಸರ್ಕಾರವೂ ಹೋಗುತ್ತದೆ. ನಂತರ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಪ್ರಾರಂಭವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಯತ್ನಿಸಿದ ಸಿಜೆಪಿ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ X ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ, 'ಜ್ಞಾನೇಶ್ ಕುಮಾರ್ ಹೋಗುತ್ತಾರೆ. ಈ ಸರ್ಕಾರ ಹೋಗುತ್ತದೆ. ನಂತರ ಪ್ರಜಾಪ್ರಭುತ್ವದ ದುರಸ್ತಿ ಪ್ರಾರಂಭವಾಗುತ್ತದೆ' ಎಂದು ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಗಿಂತ 'ಹೆಚ್ಚು ಆಳವಾದ ಸಮಸ್ಯೆ' ಇದೆ. ಅದು ಪ್ರಸ್ತುತ ಸರ್ಕಾರವನ್ನು ಮುಕ್ತಾಯಗೊಳಿಸಬೇಕಾಗಿದೆ ಎಂದು ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದರು.

PM modi-Rahul gandhi
'ಇನ್ನೊಬ್ಬ ವ್ಯಕ್ತಿ ಬಗ್ಗೆ ತಿಳಿಯುವವರೆಗೆ ಕಾಯಿರಿ': ಎಲಾನ್ ಮಸ್ಕ್ ಪೋಸ್ಟ್‌ಗೆ ರಾಹುಲ್ ಗಾಂಧಿ; 'ಧನ್ಯವಾದಗಳು ರಾಹುಲ್' ಎಂದ ಅಮೆರಿಕದ ಉದ್ಯಮಿ
PM modi-Rahul gandhi
'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ವಿರೋಧ ಪಕ್ಷಗಳ ಪ್ರತಿಭಟನೆ ಈ ಸರ್ಕಾರದ ಅಡಿಪಾಯವನ್ನು ಅಲುಗಾಡಿಸಿವೆ, ಅದು ಈಗ ಭಯಭೀತವಾಗಿದೆ ಎಂದು ರಾಹುಲ್ ಗಾಂಧಿ ಅವರು ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ನಲ್ಲಿ ಇಂಡಿಯಾ ಬ್ಲಾಕ್ ಸಂಸದರಿಗೆ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com