ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಸಿಸಿಟಿವಿ ದೃಶ್ಯಗಳ ಪ್ರಕಾರ, ರಸ್ತೆ ಬದಿ ಅಂಗಡಿ ಬಳಿ ನಿಲ್ಲಿಸಿದ್ದ ಬೈಕ್‌ನಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.
CCTV Captures Hit-and-Run in Tamil Nadu
ತೂತುಕುಡಿ ಹಿಟ್ ಅಂಡ್ ರನ್ ಕೇಸ್
Updated on: 

ತೂತುಕುಡಿ: ವೇಗವಾಗಿ ಬಂದ ಕಾರೊಂದು ಅಂಗಡಿ ಮುಂದೆ ಟೀ ಕುಡಿಯುತ್ತಾ ಕುಳಿತಿದ್ದ ಯುವಕನ ಬೈಕ್ ಗೆ ಢಿಕ್ಕಿಯಾಗಿದ್ದು, ಬೈಕ್ ಮತ್ತೋರ್ವ ಯುವಕನಿಗೆ ಢಿಕ್ಕಿಯಾದ ಭೀಕರ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತ್ತಾಂಕುಳಂ ಸಮೀಪ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕಾರೊಂದು ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಿಸಿಟಿವಿ ದೃಶ್ಯಗಳ ಪ್ರಕಾರ, ರಸ್ತೆ ಬದಿ ಅಂಗಡಿ ಬಳಿ ನಿಲ್ಲಿಸಿದ್ದ ಬೈಕ್‌ನಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

CCTV Captures Hit-and-Run in Tamil Nadu
ಭೀಕರ ಅಪಘಾತ: ಯೂಟರ್ನ್‌ ವೇಳೆ ಗೂಡ್ಸ್ ವಾಹನ ಪಲ್ಟಿ, ಕಬ್ಬಿಣದ ಸರಳು ಬಿದ್ದು ಬೈಕ್ ಸವಾರ ದಾರುಣ ಸಾವು, Video

ಡಿಕ್ಕಿಯ ರಭಸಕ್ಕೆ ಬೈಕ್ ಹಾರಿ ಮುಂದೆ ಕುಳಿತಿದ್ದ ಮತ್ತೊಬ್ಬ ವ್ಯಕ್ತಿಗೆ ಬಡಿದಿದೆ. ಪರಿಣಾಮ ಆ ವ್ಯಕ್ತಿಯ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.

ಬೈಕ್‌ನಲ್ಲಿ ಕುಳಿತಿದ್ದ ವ್ಯಕ್ತಿ ಅಪಘಾತದಿಂದ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಪಘಾತಕ್ಕೆ ಕಾರಣವಾದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಗಾಯಗೊಂಡ ವ್ಯಕ್ತಿಯ ಆರೋಗ್ಯ ಸ್ಥಿತಿ ಹಾಗೂ ಕಾರು ಚಾಲಕನ ಪತ್ತೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com