ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

ಮುಂಬೈನಿಂದ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಸಿಜೆಪಿ ನಾಯಕರನ್ನು ವಿಮಾನದ ಸೀಟುಗಳಿಂದಲೇ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು.
CJP founder Abhijit Dipke, along with co-conveners Ashutosh Ranka and Saurav Das.
ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಸಹ-ಸಂಚಾಲಕರಾದ ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಅವರೊಂದಿಗಿರುವುದು.
Updated on: 

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ಮತ್ತು ಸಹ-ಸಂಘಟಕರಾದ ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಅವರನ್ನು ದೆಹಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದು, ನಂತರ ದೆಹಲಿ ಕ್ಯಾಂಟ್ ಪೊಲೀಸ್ ಠಾಣೆಯ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರನ್ನು ಬಿಡುಗಡೆ ಮಾಡಿದೆ.

ಸುಮಾರು 24 ಗಂಟೆಗಳ ಕಾಲ ಕಸ್ಟಡಿಯಲ್ಲಿದ್ದ ಈ ನಾಯಕರನ್ನು ನಂತರ ದೆಹಲಿ ಕ್ಯಾಂಟ್ ಪೊಲೀಸ್ ಠಾಣೆಯ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇವರ ಬಿಡುಗಡೆಗೆ ಆದೇಶಿಸಿದೆ.

ಮುಂಬೈನಿಂದ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಸಿಜೆಪಿ ನಾಯಕರನ್ನು ವಿಮಾನದ ಸೀಟುಗಳಿಂದಲೇ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು.

ಇಂದು ದೆಹಲಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿರುವ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಬಿಡುಗಡೆಗೆ ಆದೇಶಿಸಿದೆ.

ಶನಿವಾರ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದ ಹಿನ್ನೆಲೆಯಲ್ಲಿ, ರಾಷ್ಟ್ರ ರಾಜಧಾನಿಗೆ ಬಂದಿಳಿದ ಅವರ ವಿಮಾನದಲ್ಲೇ ದೆಹಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಬಂಧನಕ್ಕೊಳಪಡಿಸಲಾಗಿತ್ತು.

ಶನಿವಾರ ಪ್ರತಿಭಟನಾಕಾರರು ಜಂತರ್ ಮಂತರ್ ತಲುಪದಂತೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆ ಮಾಡಿದ್ದರು. ಈ ಬೆಳವಣಿಗೆಯ ಕುರಿತು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು CJPಯ ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಅಭಿಜೀತ್, ಆಶುತೋಷ್ ಮತ್ತು ಸೌರವ್ ಅವರನ್ನು ಇಂದು ಬೆಳಿಗ್ಗೆ 9 ಗಂಟೆಗೆ ದೆಹಲಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿರುವ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುತ್ತದೆ. ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಇಂದು ಬೆಳಿಗ್ಗೆ ನನಗೆ ಈ ಮಾಹಿತಿ ನೀಡಿದ್ದಾರೆ” ಎಂದು ಅವರು ಬರೆದಿದ್ದರು.

CJP founder Abhijit Dipke, along with co-conveners Ashutosh Ranka and Saurav Das.
'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

ಮೂವರ ಪರವಾಗಿ ವಕೀಲರ ತಂಡದೊಂದಿಗೆ ತಾವು ಪೊಲೀಸ್ ಠಾಣೆಗೆ ತೆರಳುವುದಾಗಿಯೂ ರತ್ನಾ ಸಿಂಗ್ ತಿಳಿಸಿದ್ದರು.

ಮುಂಬೈನಿಂದ ಬಂದ ವಿಮಾನ ದೆಹಲಿಯಲ್ಲಿ ಇಳಿದ ಕೆಲವೇ ಕ್ಷಣಗಳಲ್ಲಿ ದೀಪ್ಕೆ, ದಾಸ್ ಮತ್ತು ರಂಕಾ ಅವರನ್ನು ವಿಮಾನದೊಳಗೇ ಪೊಲೀಸರು ವಶಕ್ಕೆ ಪಡೆದಿದ್ದರು.

CJP ಹಂಚಿಕೊಂಡಿರುವ ವಿಡಿಯೊದಲ್ಲಿ, ವಿಮಾನದೊಳಗೆ ಪ್ರವೇಶಿಸಿದ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿಸಿ ದೀಪ್ಕೆ, “ಬಂಧನಕ್ಕೊಳಗಾಗಲು ನಾವು ಇಲ್ಲಿಗೆ ಬಂದಿದ್ದೇವೆ. ಬನ್ನಿ, ನಮ್ಮನ್ನು ಬಂಧಿಸಿ” ಎಂದು ಹೇಳುವುದು ಕೇಳಿಬರುತ್ತದೆ.

ಬಂಧನಕ್ಕೂ ಮುನ್ನ, ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆದಿಲ್ಲ ಎಂದು ಪೊಲೀಸರು CJP ನಾಯಕರಿಗೆ ತಿಳಿಸಿದ್ದರು.

ಈ ನಡುವೆ ತಮ್ಮನ್ನು ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ದೀಪ್ಕೆ ಆರೋಪಿಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕೂಡ ಇಂತಹ ಕ್ರಮ ಕೈಗೊಂಡಿರಲಿಲ್ಲ ಎಂದು ಹೇಳಿದ ಅವರು, ಇದು ಸರ್ವಾಧಿಕಾರಕ್ಕೆ ಸಮಾನ ಎಂದು ಕಿಡಿಕಾರಿದ್ದಾರೆ.

ಇದು ನರೇಂದ್ರ ಮೋದಿಯವರ ಭಯವನ್ನು ತೋರಿಸುತ್ತದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿಯೂ ಇಂದಿರಾ ಗಾಂಧಿ ಹೀಗೆ ಮಾಡಿರಲಿಲ್ಲ. ನಾವು ಬಯಸಿದ್ದು ಶಾಂತಿಯುತ ಪ್ರತಿಭಟನೆ ನಡೆಸುವುದಷ್ಟೇ. ಆದರೆ, ನಮ್ಮನ್ನು ಅಪರಾಧಿಗಳಂತೆ ವಿಮಾನದಿಂದಲೇ ಎಳೆದುಕೊಂಡು ಹೋಗುತ್ತಿದ್ದಾರೆ” ಎಂದು ವಿಡಿಯೊದಲ್ಲಿ ದೀಪ್ಕೆ ಆರೋಪಿಸಿದ್ದಾರೆ.

“ಇದು ಸರ್ವಾಧಿಕಾರ. ದೆಹಲಿ ಪೊಲೀಸರು ವಿಮಾನದೊಳಗೆ ಪ್ರವೇಶಿಸಿ ನಮ್ಮನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ. ಬನ್ನಿ, ಬಂಧಿಸಿ. ಬಂಧನಕ್ಕೆ ನಾವು ಸಿದ್ಧರಿದ್ದೇವೆ. ನಿಮಗೆ ನಾವು ಹೆದರುವುದಿಲ್ಲ” ಎಂದು ಹೇಳಿದ್ದಾರೆ.

ಶನಿವಾರ CJP ಪ್ರತಿಭಟನೆಗೆ ಮುನ್ನ ನವದೆಹಲಿ ಬಹುತೇಕ ಖಾಕಿಮಯವಾಗಿತ್ತು. ಭದ್ರತೆಗಾಗಿ 30,000ಕ್ಕೂ ಹೆಚ್ಚು ಪೊಲೀಸ್ ಮತ್ತು ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ನಗರದ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. 45 ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿತ್ತು. ದೆಹಲಿಯ ಗಡಿ ಪ್ರದೇಶಗಳು, ರೈಲು ನಿಲ್ದಾಣಗಳು, ಬಸ್ ಟರ್ಮಿನಲ್‌ಗಳು, ಹೋಟೆಲ್‌ಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ಇದರಿಂದ ರಾಜಧಾನಿಯ ಹಲವು ಭಾಗಗಳಲ್ಲಿ ಸಂಚಾರ ದಟ್ಟಣೆ ಉಂಟಾಯಿತು.

ಶನಿವಾರ ದೆಹಲಿಯಾದ್ಯಂತ 7,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದ್ದು, ಅವರಲ್ಲಿ 2,000ಕ್ಕೂ ಹೆಚ್ಚು ಮಂದಿ ನವದೆಹಲಿ ಪ್ರದೇಶದವರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com