3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ಪಶ್ಚಿಮ ಬಂಗಾಳದಿಂದ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿ ಮಾಡಲು ಯತ್ನಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ (ಮಮತಾ ಬಣ) ಆರೋಪಿಸಿದೆ.
Mamata Banerjee
ಮಮತಾ ಬ್ಯಾನರ್ಜಿ
Updated on: 

ಕೊಲ್ಕತ್ತಾ: ಪಶ್ಚಿಮ ಬಂಗಾಳದಿಂದ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿ ಮಾಡಲು ಯತ್ನಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ (ಮಮತಾ ಬಣ) ಆರೋಪಿಸಿದೆ. ಮಾದಕ ವ್ಯಸನಿ ಮಹಿಳೆಯೊಬ್ಬರು ಮಮತಾ ಬ್ಯಾನರ್ಜಿ ಅವರ ಮನೆ ಬಳಿ ಬಂದು ಚಾಕುವಿನಿಂದ ದಾಳಿ ಮಾಡಲು ಯತ್ನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಯ ಪಕ್ಷ ಆರೋಪಿಸಿದೆ. ಈ ಹೇಳಿಕೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ನಡೆದ ಚಾಕು ದಾಳಿಯ ಪ್ರಯತ್ನವನ್ನು ತೃಣಮೂಲ ಕಾಂಗ್ರೆಸ್ (ಮಮತಾ ಬಣ) ಒಂದು ಪಿತೂರಿ ಎಂದು ಕರೆದಿದೆ. ಪಕ್ಷದ ಮಾಜಿ ಸಂಸದ ಸಾಕೇತ್ ಗೋಖಲೆ, ಇಂದು ಮಾದಕ ವ್ಯಸನಿಯೊಬ್ಬಳು ಮಮತಾ ಬ್ಯಾನರ್ಜಿ ಅವರ ಮನೆಗೆ ಬಂದು ಚಾಕುವಿನಿಂದ ದಾಳಿ ಮಾಡಲು ಯತ್ನಿಸಿದ್ದಾಳೆ.

Mamata Banerjee
'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಂಗಾಳದಲ್ಲಿ ಪರಿಸ್ಥಿತಿ ಹೇಗಿದೆ ಎಂದರೆ Z+ ಭದ್ರತೆ ಹೊಂದಿರುವ ಮತ್ತು ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ನಾಯಕಿಯೂ ಸುರಕ್ಷಿತವಾಗಿಲ್ಲ. ಇದು ಬಿಜೆಪಿಯ ಉದ್ದೇಶಪೂರ್ವಕ ಪಿತೂರಿಯೇ, ದೀದಿ ದೆಹಲಿಯಲ್ಲಿ ಅವರನ್ನು ನಿರ್ಮೂಲನೆ ಮಾಡಲು ನಿರ್ಧರಿಸಿದ್ದಾರೆಯೇ? ಈ ಬಗ್ಗೆ ದೂರು ದಾಖಲಾಗಿದೆ.

ನಾಗರಿಕ ಸ್ವಯಂಸೇವಕಿ ಮತ್ತು ಮಾದಕ ವ್ಯಸನಿಯಾಗಿರುವ ತನ್ನಿಷ್ಠ ಸಹಾ ಎಂಬ ಮಹಿಳೆ ತಮ್ಮನ್ನು ಸೊಸೆ ಎಂದು ಪರಿಚಯಿಸಿಕೊಂಡು ಹಿಂಸಾತ್ಮಕ ರೀತಿಯಲ್ಲಿ ಮಮತಾ ಬ್ಯಾನರ್ಜಿ ಅವರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಮಹಿಳೆ ಅವಾಚ್ಯವಾಗಿ ನಿಂದಿಸಿದ್ದು ಕುಡಿದ ಮತ್ತಿನಲ್ಲಿ ಮಮತಾ ಬ್ಯಾನರ್ಜಿ ಬಳಿ ಬಂದು ಹಲ್ಲೆಗೆ ಯತ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com