ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ರೈಲು ನಿಲ್ದಾಣದಿಂದ ಹೊರಡುತ್ತಿದ್ದಾಗ ತೆರೆದ ಕಿಟಕಿಯ ಮೂಲಕ ಪ್ರಯಾಣಿಕರ ಮೊಬೈಲ್‌ ಕಸಿದುಕೊಳ್ಳಲು ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ. ಆದರೆ, ರೈಲಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಎಚ್ಚೆತ್ತುಕೊಂಡು ಆತನ ಕೈಗಳನ್ನು ಹಿಡಿದುಕೊಂಡಿದ್ದಾರೆ.
Passengers Catch Suspected Phone Thief At Bihar Station
ಚಲಿಸುತ್ತಿದ್ದ ರೈಲಿನಲ್ಲಿ ಕಳ್ಳತನಕ್ಕೆ ಯತ್ನಿಸಿದ ಕಳ್ಳ
Updated on: 

ಬಿಹಾರ: ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರ ಮೊಬೈಲ್‌ ಕದಿಯಲು ಯತ್ನಿಸಿದನೆನ್ನಲಾದ ಶಂಕಿತ ಕಳ್ಳ ಪ್ರಯಾಣಿಕರ ಕೈಗೆ ಸಿಕ್ಕಿಬಿದ್ದು, ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ಹೊರಗೆ ನೇತಾಡಿದ ಘಟನೆ ಬಿಹಾರದಲ್ಲಿ ನಡೆದಿದೆ.

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ರೈಲು ನಿಲ್ದಾಣಗಳಲ್ಲಿ ಮೊಬೈಲ್‌ ಕಳ್ಳತನದ ಅಪಾಯದ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಭಾಗಲ್ಪುರ ಜಿಲ್ಲೆಯ ಶಿವನಾರಾಯಣಪುರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ರೈಲು ನಿಲ್ದಾಣದಿಂದ ಹೊರಡುತ್ತಿದ್ದಾಗ ತೆರೆದ ಕಿಟಕಿಯ ಮೂಲಕ ಪ್ರಯಾಣಿಕರ ಮೊಬೈಲ್‌ ಕಸಿದುಕೊಳ್ಳಲು ವ್ಯಕ್ತಿಯೊಬ್ಬ ಯತ್ನಿಸಿದ್ದಾನೆ. ಆದರೆ, ರೈಲಿನಲ್ಲಿದ್ದ ಪ್ರಯಾಣಿಕರು ತಕ್ಷಣವೇ ಎಚ್ಚೆತ್ತುಕೊಂಡು ಆತನ ಕೈಗಳನ್ನು ಹಿಡಿದುಕೊಂಡಿದ್ದಾರೆ. ರೈಲು ಮುಂದಕ್ಕೆ ಚಲಿಸಲು ಆರಂಭಿಸಿದರೂ ಪ್ರಯಾಣಿಕ ಕಳ್ಳನ ಕೈಗಳನ್ನು ಬಿಡದೆ ಹಿಡಿದುಕೊಂಡಿದ್ದಾರೆ. ಪರಿಣಾಮ, ವ್ಯಕ್ತಿ ಚಲಿಸುವ ರೈಲಿನ ಹೊರಭಾಗದಲ್ಲಿ ನೇತಾಡುವಂತಾಗಿದೆ.

Passengers Catch Suspected Phone Thief At Bihar Station
ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಕಳ್ಳನ ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ

ವೈರಲ್‌ ವಿಡಿಯೊದಲ್ಲಿ ರೈಲು ಮುಂದಕ್ಕೆ ಚಲಿಸುತ್ತಿರುವಾಗ ವ್ಯಕ್ತಿಯೊಬ್ಬ ಕಿಟಕಿಯ ಹೊರಗೆ ನೇತಾಡುತ್ತಾ ತನ್ನ ಹಿಡಿತವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವುದು ಕಾಣಿಸುತ್ತದೆ. ಈ ವೇಳೆ ನಿಲ್ದಾಣದಲ್ಲಿದ್ದ ಜನರು ಘಟನೆಗೆ ಸಾಕ್ಷಿಯಾಗಿದ್ದಾರೆ. ರೈಲು ಸ್ವಲ್ಪ ದೂರ ಚಲಿಸಿದ ಬಳಿಕ ವ್ಯಕ್ತಿ ಪ್ಲಾಟ್‌ಫಾರ್ಮ್‌ ಮೇಲೆ ಬಿದ್ದಿದ್ದಾನೆ. ಬಳಿಕ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಎಚ್ಚರಿಕೆ ಅಗತ್ಯ

ಮೊಬೈಲ್‌ ಕಳ್ಳತನವನ್ನು ತಡೆಯುವ ಪ್ರಯತ್ನದಲ್ಲಿ ಪ್ರಯಾಣಿಕರು ತಮ್ಮ ಜೀವಕ್ಕೂ ಅಪಾಯ ತಂದುಕೊಳ್ಳಬಾರದು. ಚಲಿಸುವ ರೈಲಿನ ಹೊರಗೆ ವ್ಯಕ್ತಿಯನ್ನು ಹಿಡಿದುಕೊಂಡಿರುವುದು ಪ್ರಯಾಣಿಕರು ಮತ್ತು ಶಂಕಿತ ವ್ಯಕ್ತಿ ಇಬ್ಬರಿಗೂ ಗಂಭೀರ ಗಾಯಗಳಾಗುವ ಅಪಾಯವನ್ನುಂಟುಮಾಡಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಕಳ್ಳತನದ ಯತ್ನ ಕಂಡುಬಂದರೆ ರೈಲ್ವೆ ಸಿಬ್ಬಂದಿ ಅಥವಾ ಸರ್ಕಾರಿ ರೈಲ್ವೆ ಪೊಲೀಸ್‌ (GRP), ರೈಲ್ವೆ ರಕ್ಷಣಾ ಪಡೆ (RPF)ಗೆ ಮಾಹಿತಿ ನೀಡುವಂತೆ ಪ್ರಯಾಣಿಕರಿಗೆ ಸಲಹೆ ನೀಡಲಾಗಿದೆ. ರೈಲ್ವೆಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಮತ್ತು ನೆರವು ಪಡೆಯಲು RailMadad ವೇದಿಕೆಯನ್ನೂ ಬಳಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com