ತರಕಾರಿ ಖರೀದಿಸಲು ಹೋದ ವ್ಯಕ್ತಿ ಕುಸಿದು ಸಾವು; ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ ಸೆರೆ! video

ತರಕಾರಿ ಖರೀದಿಸಲು ಮಾರುಕಟ್ಟೆಗೆ ತೆರಳಿದ್ದ ವೇಳೆ ತರಕಾರಿ ಅಂಗಡಿ ಬಳಿ ಏಕಾಏಕಿ ಕುಸಿದು ಬಿದ್ದಿದ್ದಾರೆ.
Man Dies in Fall While Buying Vegetables in Telangana
ತರಕಾರಿ ಖರೀದಿ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು
Updated on: 

ಹೈದರಾಬಾದ್: ತರಕಾರಿ ಖರೀದಿಸಲು ಮಾರುಕಟ್ಟೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣ ರಾಜ್ಯದ ಸೂರ್ಯಾಪೇಟೆ ಜಿಲ್ಲೆಯ ಚಿಲುಕೂರು ಮಂಡಲದ ಬೆಟವೋಲು ಗ್ರಾಮದಲ್ಲಿ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ ಬೆಜವಾಡ ಶ್ರೀನಿವಾಸ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ತರಕಾರಿ ಖರೀದಿಸಲು ಮಾರುಕಟ್ಟೆಗೆ ತೆರಳಿದ್ದ ವೇಳೆ ತರಕಾರಿ ಅಂಗಡಿ ಬಳಿ ಏಕಾಏಕಿ ಕುಸಿದು ಬಿದ್ದಿದ್ದಾರೆ.

ಇದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಅವರ ನೆರವಿಗೆ ಧಾವಿಸಿ ಸಿಪಿಆರ್‌ (CPR) ನೀಡಿ ಪ್ರಾಣ ಉಳಿಸಲು ಪ್ರಯತ್ನಿಸಿದ್ದಾರೆ. ಬಳಿಕ ಶ್ರೀನಿವಾಸ್ ಅವರನ್ನು ಕೊಡಾಡ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Man Dies in Fall While Buying Vegetables in Telangana
ತವರು ಮನೆ ಸೇರಿದ ಪತ್ನಿ: ಮಗು ನಿಭಾಯಿಸಲು ಕಷ್ಟಪಡುತ್ತಿದ್ದ ತಂದೆ, ಮಾಡಿದ್ದು ಘನ ಘೋರ ಕೃತ್ಯ!

ಹೃದಯಾಘಾತದಿಂದ ಸಾವು ಶಂಕೆ

ಪ್ರಾಥಮಿಕ ಮಾಹಿತಿಯ ಪ್ರಕಾರ, ಶ್ರೀನಿವಾಸ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಸಾವಿಗೆ ನಿಖರ ಕಾರಣವೇನು ಎಂಬುದು ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಘಟನೆಯ ದೃಶ್ಯಗಳು ಮಾರುಕಟ್ಟೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ ಎಂದು ವರದಿಯಾಗಿದೆ.

ತರಕಾರಿ ಖರೀದಿಸಲು ತೆರಳಿದ್ದ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com