SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆ ಕೇಳಿದೆ.
Gyanesh Kumar-Rahul Gandhi
ಜ್ಞಾನೇಶ್ ಕುಮಾರ್-ರಾಹುಲ್ ಗಾಂಧಿ
Updated on: 

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್)ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಚುನಾವಣಾ ಆಯೋಗ(ಇಸಿಐ) ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಎಸ್ಐಆರ್ ವೇಳೆ ದೊಡ್ಡ ಪ್ರಮಾಣದ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಮತ್ತು ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಇತರ ವಿರೋಧ ಪಕ್ಷದ ನಾಯಕರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗ ಮತ್ತು ಇತರರಿಗೆ ನೋಟಿಸ್ ನೀಡಿದೆ.

ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆ ಕೇಳಿದೆ.

Gyanesh Kumar-Rahul Gandhi
ನ್ಯಾಯಾಲಯದ ಶುಲ್ಕ ಕೊರತೆ: SIR ವಿರುದ್ಧದ ರಾಹುಲ್ ಗಾಂಧಿ ಅರ್ಜಿಯಲ್ಲಿ 10 ಲೋಪ ಗುರುತಿಸಿದ ಸುಪ್ರೀಂ ಕೋರ್ಟ್!

ಎಸ್‌ಐಆರ್ ಅಕ್ರಮ ಖಂಡಿಸಿ, ಸುಪ್ರೀಂ ಕೋರ್ಟ್‌ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಪಕ್ಷಗಳ ನಡೆ ಪ್ರಶ್ನಿಸಲಾಗಿದ್ದ ಪ್ರತ್ಯೇಕ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಇತರರಿಗೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ ಯಾರೂ ನ್ಯಾಯಾಂಗವನ್ನು ಬಗ್ಗುಬಡಿಯಲು ಸಾಧ್ಯವಿಲ್ಲ ಎಂದು ಹೇಳಿದೆ.

ನ್ಯಾಯಾಂಗವನ್ನು ಯಾರೂ ಸೋಲಿಸಲು ಅಥವಾ ಬೆದರಿಸಲು ಸಾಧ್ಯವಿಲ್ಲ ಎಂದ ಸಿಜೆಐ ನೇತೃತ್ವದ ಸುಪ್ರೀಂ ಪೀಠ, ಅರ್ಜಿಯ ವಿಚಾರಣೆಗೆ ನೋಟಿಸ್ ನೀಡಿದ ಮಾತ್ರಕ್ಕೆ ರಾಜಕೀಯ ನಾಯಕರ ಈ ಅನುಚಿತ ವರ್ತನೆಯನ್ನು ನ್ಯಾಯಾಲಯ ಕ್ಷಮಿಸಿದೆ ಎಂದು ಅರ್ಥವಲ್ಲ ಎಂದು ಎಚ್ಚರಿಸಿದೆ.

ವಿಚಾರಣೆ ಆರಂಭವಾಗುತ್ತಿದ್ದಂತೆ ಹಿರಿಯ ವಕೀಲ ಗೌರವ್ ಭಾಟಿಯಾ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸೋಮವಾರ ನಡೆದ ಘಟನೆಯನ್ನು ಪ್ರಸ್ತಾಪಿಸಿದರು. ಸುಪ್ರೀಂಕೋರ್ಟ್​ ಸಂಕೀರ್ಣಕ್ಕೆ ರಾಜಕೀಯ ಮೆರವಣಿಗೆ ನುಗ್ಗಿಸುವುದು, ನೂರಾರು ಕಾರ್ಯಕರ್ತರೊಂದಿಗೆ ಘೋಷಣೆ ಕೂಗಿ ಒತ್ತಡ ಹೇರುವುದು ಸ್ವೀಕಾರಾರ್ಹವಲ್ಲದ ನಡವಳಿಕೆ ಎಂದು ಆಕ್ಷೇಪಿಸಿದರು.

ಸೋಮವಾರದ ಪ್ರತಿಭಟನೆಯ ವೇಳೆ ಸುಪ್ರೀಂ ಕೋರ್ಟ್ ಆವರಣ ಹಾಗೂ ಗೇಟ್‌ಗಳ ಬಳಿ ನಡೆದ ವಿದ್ಯಮಾನಗಳ ಸಂಪೂರ್ಣ ಸಿಸಿಟಿವಿ ರೆಕಾರ್ಡಿಂಗ್‌ಗಳನ್ನು ಸುರಕ್ಷಿತವಾಗಿ ಸಂರಕ್ಷಿಸಿಡಬೇಕು ಎಂದು ರಿಜಿಸ್ಟ್ರಾರ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com