ಬಾಂಗ್ಲಾದೇಶದ ಮಾದರಿಯಲ್ಲಿ ಸರ್ಕಾರ ಬದಲಾವಣೆಗೆ ಕಾಂಗ್ರೆಸ್ ಮಿತ್ರಪಕ್ಷಗಳ ಯತ್ನ: ರಾಜನಾಥ್ ಸಿಂಗ್

ಯುವಜನತೆಯ ಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಕಡೆಗೆ ಬಳಸುವ ಬದಲು, ಅಶಾಂತಿಯನ್ನು ಸೃಷ್ಟಿಸಲು ಅವರು ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
Rajnath singh
ರಾಜನಾಥ್ ಸಿಂಗ್
Updated on: 

ನವದೆಹಲಿ: ಭಾರತದಲ್ಲಿ ಬಾಂಗ್ಲಾದೇಶದ ಮಾದರಿಯಲ್ಲಿ ಸರ್ಕಾರ ಬದಲಾವಣೆಯನ್ನು ತರಲು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.

ಯುವಜನತೆಯ ಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಕಡೆಗೆ ಬಳಸುವ ಬದಲು, ಅಶಾಂತಿಯನ್ನು ಸೃಷ್ಟಿಸಲು ಅವರು ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಂಗ್, ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಅಶಾಂತಿ ಸೃಷ್ಟಿಸಲು ಅಥವಾ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ದುರ್ಬಲಗೊಳಿಸಲು ನೆಪವಾಗಿ ಬಳಸಿಕೊಳ್ಳಬಾರದು ಎಂದು ಹೇಳಿದರು.

"ಕಾಂಗ್ರೆಸ್ ಮತ್ತು ಅದರ ರಾಜಕೀಯ ಮಿತ್ರಪಕ್ಷಗಳು, ನೇರವಾಗಿ ಹಾಗೂ ತಮ್ಮ ಬೆಂಬಲಿತ ಸಂಘಟನೆಗಳ ಮೂಲಕ, ಯುವಜನತೆಯ ಶಕ್ತಿಯನ್ನು ರಚನಾತ್ಮಕ ಕೆಲಸ ಮತ್ತು ರಾಷ್ಟ್ರ ನಿರ್ಮಾಣದ ಕಡೆಗೆ ತಿರುಗಿಸುವ ಬದಲು, ರಾಜಕೀಯ ಸಂಘರ್ಷವನ್ನು ಹೆಚ್ಚಿಸಲು ಮತ್ತು ಅರಾಜಕತೆಯನ್ನು ಹರಡಲು ಬಳಸಿಕೊಳ್ಳಲು ಪ್ರಯತ್ನಿಸುತ್ತಿರುವಂತೆ ತೋರುತ್ತಿದೆ. ದೇಶದ ಯುವಜನತೆಯನ್ನು ಅರಾಜಕತೆಯ ರಾಜಕೀಯದಲ್ಲಿ ದಾಳಗಳನ್ನಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಭಾರತದಲ್ಲಿ ಸರ್ಕಾರ ಬದಲಾವಣೆಗಾಗಿ ಬಾಂಗ್ಲಾದೇಶದಿಂದ ಸ್ಫೂರ್ತಿ ಪಡೆಯುವ ಬಗ್ಗೆ ವಿರೋಧ ಪಕ್ಷದ ನಾಯಕರು ಬಹಿರಂಗವಾಗಿಯೇ ಮಾತನಾಡಿದ್ದಾರೆ. ಶೇಖ್ ಹಸೀನಾ ಅವರ ಪದಚ್ಯುತಿಗೆ ಕಾರಣವಾದ 2024ರ ಬಾಂಗ್ಲಾದೇಶದ ವಿದ್ಯಮಾನಗಳನ್ನು ಉಲ್ಲೇಖಿಸಿದ ಅವರು, ಇಂತಹ ಹೇಳಿಕೆಗಳು ವಿರೋಧ ಪಕ್ಷಗಳ ಉದ್ದೇಶಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ ಎಂದರು.

"ಸರ್ಕಾರ ಬದಲಾವಣೆಗಾಗಿ ತಾವು ಬಾಂಗ್ಲಾದೇಶದಿಂದ ಪ್ರೇರಣೆ ಪಡೆದಿರುವುದಾಗಿ ಅವರು ಸುದ್ದಿಗೋಷ್ಠಿಗಳಲ್ಲಿ ಬಹಿರಂಗವಾಗಿ ಹೇಳುತ್ತಾರೆ; ಮತ್ತೊಬ್ಬರು ಸರ್ಕಾರವನ್ನು ಉರುಳಿಸುವ ಬಗ್ಗೆ ಮುಕ್ತವಾಗಿ ಮಾತನಾಡುತ್ತಾರೆ. ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ನಾಶಪಡಿಸುವುದು ಮತ್ತು ದೇಶದಲ್ಲಿ ಅಶಾಂತಿಯ ಕಿಚ್ಚು ಹಚ್ಚುವುದೇ ಅವರ ಏಕೈಕ ಕಾರ್ಯಸೂಚಿ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಸಿಂಗ್ ಹೇಳಿದರು.

ವಿರೋಧ ಪಕ್ಷಗಳು "ಆಡಳಿತ ಬದಲಾವಣೆ" (regime change) ಯಂತಹ ಪದಗಳನ್ನು ಬಳಸುತ್ತಿರುವುದನ್ನು ಗಮನಿಸಿದರೆ, ಅವರ ಪ್ರತಿಭಟನೆ ಕೇವಲ ಚುನಾವಣಾ ಸುಧಾರಣೆಗಳ ಬೇಡಿಕೆ ಅಥವಾ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಕುರಿತಾದ ಕಳವಳಗಳಿಗಿಂತಲೂ ಮಿಗಿಲಾದ ಉದ್ದೇಶವನ್ನು ಹೊಂದಿದೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

Rajnath singh
CJP ಯ 'ತಿರಂಗಾ ಮೆರವಣಿಗೆ: 6,000 ಪೊಲೀಸರು, 220 ಸಿಎಪಿಎಫ್ ತುಕಡಿಗಳ ನಿಯೋಜನೆ, ಸಿಸಿಟಿವಿ ಕಣ್ಗಾವಲು!

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಮತ್ತು ನಾಗರಿಕ ಸಮಾಜದ ಗುಂಪುಗಳು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ.

ಗುರುವಾರ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಉಲ್ಲೇಖಿಸಿದ ಸಿಂಗ್, ಪ್ರಜಾಸತ್ತಾತ್ಮಕ ಹಕ್ಕುಗಳಿವೆ ಎಂದ ಮಾತ್ರಕ್ಕೆ ಸಾರ್ವಜನಿಕ ಶಾಂತಿಗೆ ಭಂಗ ತರುವ, ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸುವ ಅಥವಾ ದೇಶದ ಅಭಿವೃದ್ಧಿಗೆ ಅಡ್ಡಿಪಡಿಸುವ ಪ್ರಯತ್ನಗಳನ್ನು ಸಮರ್ಥಿಸಿಕೊಳ್ಳಲಾಗದು ಎಂಬುದನ್ನು ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರು ಅರಿಯಬೇಕು ಎಂದು ಹೇಳಿದರು.

"ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕಾನೂನನ್ನು ಗೌರವಿಸುವುದು ಅತ್ಯಗತ್ಯ. ರಾಜಕೀಯ ಸ್ವಾರ್ಥಕ್ಕಾಗಿ ಭಾರತದ ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಬಲಿ ಕೊಡಲು ಸಾಧ್ಯವಿಲ್ಲ. ಇಂತಹ ತಂತ್ರಗಳು ಭಾರತದ ಪ್ರಗತಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು. ಪ್ರಜಾಪ್ರಭುತ್ವವನ್ನು ರಕ್ಷಿಸುವ ನೆಪದಲ್ಲಿ "ವಿನಾಶಕಾರಿ ರಾಜಕೀಯ" (politics of destruction) ನಡೆಸುವ ಬದಲು, ಜನರ ತೀರ್ಪನ್ನು ಗೌರವಿಸುವಂತೆ ಮತ್ತು ತಮ್ಮ ರಾಜಕೀಯ ಧೋರಣೆಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವಂತೆ ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com