SIR ವಿವಾದದ ಬೆನ್ನಲ್ಲೇ SSR ಘೋಷಿಸಿದ ಚುನಾವಣಾ ಆಯೋಗ: 17 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ಕರ್ನಾಟಕದ ಕಥೆಯೇನು?

ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಭಾರಿ ಸಂಚಲನ ಮತ್ತು ರಾಜಕೀಯ ತಲ್ಲಣ ಸೃಷ್ಟಿಸಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿವಾದದ ಬೆನ್ನಲ್ಲೇ, ಇದೀಗ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯನ್ನು ಘೋಷಿಸಿದೆ. ಆ ಕುರಿತ ವರದಿ ಇಲ್ಲಿದೆ:
Special Intensive Revision (SIR)
ವೋಟರ್ ಲಿಸ್ಟ್ ಡಿಲೀಟ್ ಆತಂಕಕ್ಕೆ ಬ್ರೇಕ್Online Desk
Updated on: 

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಭಾರಿ ಸಂಚಲನ ಮತ್ತು ರಾಜಕೀಯ ತಲ್ಲಣ ಸೃಷ್ಟಿಸಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿವಾದದ ಬೆನ್ನಲ್ಲೇ, ಇದೀಗ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ಪ್ರಕ್ರಿಯೆಯನ್ನು ಘೋಷಿಸಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಎಸ್‌ಐಆರ್ (SIR) ವಿವಾದ?

ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿಯ ಶುದ್ಧೀಕರಣಕ್ಕಾಗಿ ಹೊಸದಾಗಿ ಕೇಂದ್ರಿಕೃತ ಸಾಫ್ಟ್‌ವೇರ್ ಮೂಲಕ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಆರಂಭಿಸಿತ್ತು. ಆದರೆ, ಈ ಸಾಫ್ಟ್‌ವೇರ್‌ನಲ್ಲಿನ ತಾಂತ್ರಿಕ ದೋಷಗಳಿಂದಾಗಿ ಹಲವು ಅರ್ಹ ಮತದಾರರ ಹೆಸರುಗಳು ಡಿಲೀಟ್ ಆಗುತ್ತಿವೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ನಾಗರಿಕತ್ವದ ಪುರಾವೆಗಳನ್ನು ಕೇಳಲಾಗುತ್ತಿದೆ ಎಂಬ ಕಾರಣಕ್ಕೆ ದೇಶಾದ್ಯಂತ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಜೊತೆಗೆ, ಈ ವಿವಾದದ ಪರಿಣಾಮ ಆಯೋಗದ ಒಳಗೂ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಇಬ್ಬರು ಚುನಾವಣಾ ಆಯುಕ್ತರ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎನ್ನುವ ಆರೋಪ ಕೇಳಿಬಂದಿತ್ತು.

ಹಾಗಾದ್ರೆ, ಏನಿದು ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR)?

ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ಎನ್ನುವುದು ಪ್ರತಿ ವರ್ಷ ಚುನಾವಣಾ ಆಯೋಗವು ನಿಯಮಿತವಾಗಿ ನಡೆಸುವ ಮತದಾರರ ಪಟ್ಟಿಯ ವಾರ್ಷಿಕ ಪರಿಷ್ಕರಣೆ ಪ್ರಕ್ರಿಯೆಯಾಗಿದೆ. ಇದರ ಮೂಲಕ ಹೊಸದಾಗಿ 18 ವರ್ಷ ತುಂಬಿದ ಯುವ ಮತದಾರರನ್ನು ಪಟ್ಟಿಗೆ ಸೇರಿಸುವುದು, ಮೃತರಾದವರ ಅಥವಾ ಬೇರೆಡೆಗೆ ವಲಸೆ ಹೋದವರ ಹೆಸರುಗಳನ್ನು ತೆಗೆದುಹಾಕುವುದು ಮತ್ತು ತಪ್ಪುಗಳನ್ನು ಸರಿಪಡಿಸಲಾಗುತ್ತದೆ.  ಜೊತೆಗೆ, ಇದರಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸುವುದಿಲ್ಲ. ಸಾರ್ವಜನಿಕರೇ ಸ್ವತಃ ಅರ್ಜಿಗಳನ್ನು (Form 6, 7, 8) ಸಲ್ಲಿಸುವ ಮೂಲಕ ಬದಲಾವಣೆ ಮಾಡಿಕೊಳ್ಳಬಹುದು. ಅದರಲ್ಲೂ, ಈ ಸಾಂಪ್ರದಾಯಿಕ SSR ಪ್ರಕ್ರಿಯೆಯಲ್ಲಿ ಮತದಾರರು ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಅಥವಾ ಹಳೆಯ ಮತದಾರರ ಪಟ್ಟಿಯೊಂದಿಗೆ ಮ್ಯಾಪ್ ಮಾಡಲು ಕಟ್ಟುನಿಟ್ಟಾದ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ.

Special Intensive Revision (SIR)
SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಈಗ SSR ಘೋಷಣೆಯಾಗಿರುವ 17 ರಾಜ್ಯಗಳು ಯಾವುವು?

ಮುಂದಿನ ವರ್ಷ (2027) ವಿಧಾನಸಭಾ ಚುನಾವಣೆ ಎದುರಿಸಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ಸೇರಿದಂತೆ ಅಂಡಮಾನ್ ಮತ್ತು ನಿಕೋಬಾರ್, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಮಣಿಪುರ, ಪುದುಚೇರಿ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ ಒಟ್ಟು 17 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ.

ಹಾಗಾದ್ರೆ, ಕರ್ನಾಟಕ ಮತ್ತು ಉಳಿದ ರಾಜ್ಯಗಳ ಪರಿಸ್ಥಿತಿ ಏನು?

ಪ್ರಸ್ತುತ ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ದೆಹಲಿ, ತೆಲಂಗಾಣ ಸೇರಿದಂತೆ 19 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದ್ದರಿಂದ ಕರ್ನಾಟಕ ಸೇರಿ ಈ ರಾಜ್ಯಗಳಿಗೆ ಸದ್ಯಕ್ಕೆ ಎಸ್‌ಎಸ್‌ಆರ್ ವೇಳಾಪಟ್ಟಿ ಅನ್ವಯಿಸುವುದಿಲ್ಲ, ಇವುಗಳಿಗೆ ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ದಿನಾಂಕ ಘೋಷಿಸಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ.

Special Intensive Revision (SIR)
ಸಂವಿಧಾನಬಾಹಿರ SIR ನ್ನು ತಡೆಹಿಡಿಯಬೇಕು: ಕಾಂಗ್ರೆಸ್

ಏತನ್ಮಧ್ಯೆ, ಎಸ್‌ಐಆರ್ ವಿವಾದದ ಬಳಿಕ ಎಚ್ಚೆತ್ತಿರುವ ಆಯೋಗವು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಡಿಲೀಟ್ ಮಾಡಲು ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ಅದರ ಪ್ರಕಾರ, ಯಾವುದೇ ಮತದಾರ ಮರಣ ಹೊಂದಿದ್ದರೆ ಅಥವಾ ಶಾಶ್ವತವಾಗಿ ವಲಸೆ ಹೋಗಿದ್ದರೆ, ಅವರ ಕುಟುಂಬದವರಿಂದ 'ಫಾರಂ 7' ಅರ್ಜಿ ಪಡೆದ ನಂತರವೇ ಹೆಸರು ತೆಗೆಯಬೇಕು. ಒಂದು ಮತಗಟ್ಟೆಯಲ್ಲಿ ಶೇ. 2 ಕ್ಕಿಂತ ಹೆಚ್ಚು ಹೆಸರುಗಳನ್ನು ಡಿಲೀಟ್ ಮಾಡಬೇಕಾಗಿ ಬಂದರೆ ಚುನಾವಣಾ ನೋಂದಣಿ ಅಧಿಕಾರಿಗಳು (ERO) ಸ್ವತಃ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com