ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ ಆರೋಪ: ರಾಹುಲ್ ಗಾಂಧಿ ವಿರುದ್ಧ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಈ ಅರ್ಜಿಯ ಪ್ರಸ್ತಾಪ ಮಾಡಲಾಯಿತು. ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26 ಅಥವಾ 27ರಂದು ನಡೆಸುವುದಾಗಿ ಪೀಠ ತಿಳಿಸಿತು.
Rahul Gandhi
ರಾಹುಲ್ ಗಾಂಧಿ
Updated on: 

ನವದೆಹಲಿ: ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ ಸಾಗುತ್ತಿದ್ದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗರ್ಭಿಣಿ ಪತ್ರಕರ್ತೆಯೊಬ್ಬರನ್ನು ತಳ್ಳಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಈ ಅರ್ಜಿಯ ಪ್ರಸ್ತಾಪ ಮಾಡಲಾಯಿತು. ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26 ಅಥವಾ 27ರಂದು ನಡೆಸುವುದಾಗಿ ಪೀಠ ತಿಳಿಸಿತು.

ಈ ವಿಷಯವನ್ನು ಪ್ರಸ್ತಾಪಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ, ಈಗಾಗಲೇ ವಿಚಾರಣೆಯಲ್ಲಿರುವ ಅರ್ಜಿಯೊಂದರಲ್ಲಿ ಈ ಸಂಬಂಧ ಮತ್ತೊಂದು ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.

“ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತೆಯೊಬ್ಬರ ಮೇಲೆ ಹಲ್ಲೆ ನಡೆಸಲಾಗಿತ್ತು” ಎಂದು ಭಾಟಿಯಾ ಹೇಳಿದರು.

Rahul Gandhi
‘ರಾಹುಲ್ ಗಾಂಧಿ ಅವರೇ ನನ್ನನ್ನು ಮುಖ್ಯಮಂತ್ರಿ ಮಾಡಿದ್ದು’: ದೆಹಲಿಯ ಪ್ರತಿಭಟನೆ ವಿಡಿಯೊ ವೈರಲ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ ಹೀಗೆ; Video

ನಿನ್ನೆ ಸುಪ್ರೀಂ ಕೋರ್ಟ್‌ನಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR), ದೆಹಲಿಯ ಪ್ರತಿಭಟನೆಗಳು, ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್‌ಗೆ ನಡೆಸಿದ ಮೆರವಣಿಗೆ ಹಾಗೂ ಪತ್ರಕರ್ತರು ಮತ್ತು ವಕೀಲರ ಮೇಲೆ ನಡೆದಿದೆಯೆನ್ನಲಾದ ಹಲ್ಲೆಗಳಿಗೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಡೆದಿತ್ತು.

ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ತಮ್ಮ ವಿರುದ್ಧ ಜಾತಿ ನಿಂದನೆಯ ಹೇಳಿಕೆಗಳನ್ನು ನೀಡಿ, ಸಾರ್ವಜನಿಕವಾಗಿ ಅವಮಾನಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಆರೋಪಿಸಿ ಪತ್ರಕರ್ತೆಯ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣದಲ್ಲಿ ಆಕೆಯ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು.

ನಿನ್ನೆಯ ವಿಚಾರಣೆ ವೇಳೆ, ಅಕ್ಟೋಬರ್ 12ರ ಮೆರವಣಿಗೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ಅವರು ಮೂರು ತಿಂಗಳ ಗರ್ಭಿಣಿಯಾಗಿದ್ದ ಪತ್ರಕರ್ತೆಯನ್ನು ತಳ್ಳಿದ್ದಾರೆ ಎಂಬ ಆರೋಪದ ಬಗ್ಗೆಯೂ ಗಮನಹರಿಸುವಂತೆ ಭಾಟಿಯಾ ನ್ಯಾಯಪೀಠವನ್ನು ಕೋರಿದ್ದರು.

ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ಪತ್ರಕರ್ತೆಯನ್ನು ತಳ್ಳಿದ್ದಾರೆ. ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಬೇಕಾಯಿತು ಎಂದು ಭಾಟಿಯಾ ವಾದಿಸಿದ್ದರು. ಈ ಪ್ರಕರಣವನ್ನು ನ್ಯಾಯಾಲಯ ಸ್ವಯಂಪ್ರೇರಿತವಾಗಿ ಪರಿಗಣಿಸಬಹುದು ಎಂದೂ ಅವರು ತಿಳಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಈ ಸಂಬಂಧ ಅರ್ಜಿ ಸಲ್ಲಿಸುವಂತೆ ಭಾಟಿಯಾ ಅವರಿಗೆ ಸೂಚಿಸಿ, ವಿಷಯವನ್ನು ಪರಿಗಣಿಸುವುದಾಗಿ ಹೇಳಿತ್ತು.

ಇದೇ ವೇಳೆ, ಅಕ್ಟೋಬರ್ 12ರ ಮೆರವಣಿಗೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರವಾಗಿ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷ ಸೇರಿದಂತೆ ಇತರರಿಗೆ ನೋಟಿಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com