ಪಾದಚಾರಿಗಳ ಹಕ್ಕು ರಕ್ಷಣೆಗೆ ಸುಪ್ರೀಂ ಕೆಂಡಾಮಂಡಲ: ಫುಟ್‌ಪಾತ್ ಮಾಡದಿದ್ರೆ ನಾವೇ ಧರಣಿ ಕೂರ್ತೀವಿ ಎಂದು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಜಡ್ಜ್‌ಗಳ ಖಡಕ್ ಎಚ್ಚರಿಕೆ

ಕೋರ್ಟ್ ಆವರಣದ ಬಳಿ ಪಾದಚಾರಿ ಮಾರ್ಗ ಹಾಗೂ ರಸ್ತೆ ದಾಟುವ ವ್ಯವಸ್ಥೆ ಇಲ್ಲದಿರುವುದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮುಂದಿನ ವಿಚಾರಣೆಯೊಳಗೆ ಇದನ್ನು ಸರಿಪಡಿಸದಿದ್ದರೆ ನಾವೇ ಹೈಕೋರ್ಟ್ ಗೇಟ್ ಮುಂಭಾಗ ಧರಣಿ ಕೂರಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
Supreme Court of india
ಸುಪ್ರೀಂ ಕೋರ್ಟ್Online Desk
Updated on: 

ನವದೆಹಲಿ: ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು ಸುರಕ್ಷಿತವಾಗಿ ರಸ್ತೆ ದಾಟಲು ಸೂಕ್ತ ಫುಟ್‌ಪಾತ್ ಮತ್ತು ಜಿಬ್ರಾ ಕ್ರಾಸಿಂಗ್ ಇಲ್ಲದಿರುವುದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅದರಂತೆ, ಮುಂದಿನ ವಿಚಾರಣೆಯೊಳಗೆ ಇದನ್ನು ಸರಿಪಡಿಸದಿದ್ದರೆ ತಾವೇ ಸ್ವತಃ ಹೈಕೋರ್ಟ್ ಮುಖ್ಯ ದ್ವಾರದ ಮುಂದೆ ಧರಣಿ ಕೂರುವುದಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ. ಬಿ. ಪರ್ದಿವಾಲಾ ಮತ್ತು ಕೆ. ವಿ. ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನ್ಯಾಯಾಧೀಶರ ಧರಣಿ ಎಚ್ಚರಿಕೆ

ಅಡಿಷನಲ್ ಸಾಲಿಸಿಟರ್ ಜನರಲ್ ವಿಕ್ರಮಜಿತ್ ಬ್ಯಾನರ್ಜಿ ಅವರನ್ನು ಉದ್ದೇಶಿಸಿ ಮಾತನಾಡಿದ ಪೀಠವು, "ಮುಂದಿನ ವಿಚಾರಣೆಯ ದಿನಾಂಕದೊಳಗೆ ನೀವು ಈ ಕೆಲಸವನ್ನು ಪೂರ್ಣಗೊಳಿಸದಿದ್ದರೆ, ನಾವಿಬ್ಬರೂ ದೆಹಲಿ ಹೈಕೋರ್ಟ್‌ನ ಮುಖ್ಯ ಗೇಟ್ ಬಳಿ ಹೋಗಿ ಕುಳಿತುಕೊಳ್ಳುತ್ತೇವೆ. ಕೆಲಸ ಮುಗಿಯುವವರೆಗೂ ಮನೆಗೆ ಹೋಗುವುದಿಲ್ಲ. ಅಲ್ಲಿ ಧರಣಿ ಕೂರುತ್ತೇವೆ ಮತ್ತು ನಿಮಗೂ ಮನೆಗೆ ಹೋಗಲು ಬಿಡುವುದಿಲ್ಲ" ಎಂದು ಲಘು ಧಾಟಿಯಲ್ಲಿಯೇ ಕಠಿಣ ಸಂದೇಶ ರವಾನಿಸಿದೆ. ಜೊತೆಗೆ, ಪಾದಚಾರಿಗಳ ಮೂಲಸೌಕರ್ಯ ಒದಗಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಕೇವಲ ಕಾಗದದ ಮೇಲೆ ಸಮಿತಿಗಳನ್ನು ರಚಿಸುವುದರಿಂದ ಯಾವುದೇ ಪ್ರಯೋಜನವಿಲ್ಲ, ನೆಲದ ಮಟ್ಟದಲ್ಲಿ ನೈಜ ಕೆಲಸಗಳು ನಡೆಯಬೇಕು ಎಂದು ಸ್ಪಷ್ಟಪಡಿಸಿದೆ. ಇದೇ ವೇಳೆ, ಸುಪ್ರೀಂ ಕೋರ್ಟ್ ಆದೇಶವನ್ನು ಜಾರಿಗೊಳಿಸಲು ವಿಫಲವಾದರೆ ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಖುದ್ದಾಗಿ ನ್ಯಾಯಾಲಯಕ್ಕೆ ಕರೆಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

Supreme Court of india
ಮಕ್ಕಳ ಇಂಟರ್‌ನೆಟ್‌ ಬಳಕೆಗೆ ಸಂಪೂರ್ಣ ನಿಷೇಧ ಬೇಡ; child mode ಜಾರಿಗೆ ಸುಪ್ರೀಂ ಕೋರ್ಟ್‌ ಸಲಹೆ!

ನಡೆಯುವ ಹಕ್ಕು ಮೂಲಭೂತ ಹಕ್ಕು

ಈ ಹಿಂದೆ ಜೂನ್ 2026 ರಲ್ಲಿ ಸುಪ್ರೀಂ ಕೋರ್ಟ್, ಸುರಕ್ಷಿತವಾದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವುದು ಸಂವಿಧಾನದ ವಿಧಿ 21 (ಬದುಕುವ ಹಕ್ಕು) ಮತ್ತು ವಿಧಿ 19(1)(d) (ಸಂಚಾರ ಸ್ವಾತಂತ್ರ್ಯ) ರ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ ಎಂದು ಐತಿಹಾಸಿಕ ತೀರ್ಪು ನೀಡಿತ್ತು. ವಾಹನಗಳ ಸಂಚಾರಕ್ಕಿಂತ ಪಾದಚಾರಿಗಳ ಸುರಕ್ಷತೆಗೇ ಮೊದಲ ಆದ್ಯತೆ ಇರಬೇಕು ಎಂದು ನ್ಯಾಯಾಲಯ ಪ್ರತಿಪಾದಿಸಿತ್ತು. ಏತನ್ಮಧ್ಯೆ, ಸುಪ್ರೀಂ ಕೋರ್ಟ್‌ನ ಈ ಕಠಿಣ ನಿಲುವಿನ ಬೆನ್ನಲ್ಲೇ ಕರ್ನಾಟಕದಲ್ಲೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ 'ಸುರಕ್ಷಿತ ಫುಟ್‌ಪಾತ್ ಅಭಿಯಾನ' ಹಮ್ಮಿಕೊಂಡಿದ್ದು, ಅದಕ್ಕೆ ಹೈಕೋರ್ಟ್ ಕೂಡ ಹಸಿರು ನಿಶಾನೆ ತೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com